AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ನಲ್ಲಿ ನಾಳೆ ಕಾವೇರಿ ನೀರು ವಿಚಾರಣೆ: ಕಾನೂನು ತಜ್ಞರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​ ಸಭೆ, ಹೇಳಿದ್ದಿಷ್ಟು

ನಾಳೆ‌ ಸುಪ್ರಿಂಕೋರ್ಟ್​ನಲ್ಲಿ ಕಾವೇರಿ ವಿಚಾರಣೆ ಹಿನ್ನೆಲೆ ಇಂದು ದೆಹಲಿಯಲ್ಲಿ ಡಿಸಿಎಂ ಡಿ.ಕೆ‌. ಶಿವಕುಮಾರ್ ರಾಜ್ಯದ ವಕೀಲರು ಹಾಗೂ ಇಂಜಿನಿಯರ್​ಗಳ‌ ಜೊತೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ‌. ಶಿವಕುಮಾರ್​ ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್​ನಲ್ಲಿ ನಾಳೆ ಕಾವೇರಿ ನೀರು ವಿಚಾರಣೆ: ಕಾನೂನು ತಜ್ಞರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​ ಸಭೆ, ಹೇಳಿದ್ದಿಷ್ಟು
ಡಿಸಿಎಂ ಡಿ.ಕೆ ಶಿವಕುಮಾರ್
ಹರೀಶ್ ಜಿ.ಆರ್​.
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 31, 2023 | 4:59 PM

Share

ನವದೆಹಲಿ, ಆಗಸ್ಟ್ 31: ಕಾವೇರಿ ನದಿ (Cauvery River) ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ. ತಮಿಳುನಾಡು ನಿತ್ಯ 24,000 ಕ್ಯೂಸೆಕ್ ನೀರು ಬಿಡಬೇಕೆಂದು ಕೇಳಿತ್ತು. ಸದ್ಯ 5000 ಕ್ಯೂಸೆಕ್​​ಗೆ ಇಳಿಸಿದೆ, ವಾಸ್ತವಾಂಶ ಗಮನಕ್ಕೆ ತಂದಿದ್ದೇವೆ. ಕರ್ನಾಟಕ ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ಕಾನೂನು ತಜ್ಞರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ವಿಚಾರಣೆ ಇರುವ ಹಿನ್ನೆಲೆಯಲ್ಲಿ ತಜ್ಞರ ಜತೆ ಚರ್ಚೆ ಮಾಡಿದ್ದೇನೆ. ಹಿರಿಯ ವಕೀಲ ಶ್ಯಾಮ್ ದಿವಾನ್ ಜೊತೆಗೂ ಚರ್ಚೆ ಮಾಡಲಿದ್ದೇವೆ ಎಂದರು.

ನಾವು ನೀರು ಬಿಟ್ಟಿದ್ದೇವೆ, ಅವರು ಹೇಗೆ ಬಳಕೆ‌ ಮಾಡಿಕೊಂಡಿದ್ದಾರೆ ನಮ್ಮಗೆ ಅಗತ್ಯ ಇಲ್ಲ. ನಾವು ಆ ವಿಚಾರ ಚರ್ಚೆ ಬಗ್ಗೆ ಮಾಡಲ್ಲ. ಮೇಕೆದಾಟು ಒಂದೇ ಪರಿಹಾರ, ಇದು ತಮಿಳುನಾಡಿಗೆ ಅನುಕೂಲ. ವಾಸ್ತವಾಂಶ ನೋಡಲು ಕಾವೇರಿ ನೀರು ನಿಯಂತ್ರಣ ಸಮಿತಿ ತಂಡ ಕರೆಯಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಪ್ರಾಧಿಕಾರ ಸೂಚನೆ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಹೇಳಿದ್ದೇನು?

ನಾಳೆ‌ ಸುಪ್ರಿಂಕೋರ್ಟ್​ನಲ್ಲಿ ಕಾವೇರಿ ವಿಚಾರಣೆ ಹಿನ್ನೆಲೆ ಇಂದು ದೆಹಲಿಯಲ್ಲಿ ಡಿಸಿಎಂ ಡಿ.ಕೆ‌. ಶಿವಕುಮಾರ್ ರಾಜ್ಯದ ವಕೀಲರು ಹಾಗೂ ಇಂಜಿನಿಯರ್​ಗಳ‌ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸುಪ್ರಿಂಕೋರ್ಟ್​ನಲ್ಲಿ ಕರ್ನಾಟಕ ಸಮರ್ಥ ವಾದ ಮಂಡಿಸುವಂತೆ ಡಿಕೆ ಶಿವಕುಮಾರ್ ಕರ್ನಾಟಕ ಪರ ವಕೀಲರಿಗೆ ಸೂಚನೆ ನೀಡಿದ್ದಾರೆ.

ಪ್ರಾಧಿಕಾರದ ಆದೇಶದಂತೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸಾಧ್ಯವಿಲ್ಲ ಅಂತಾ ರಾಜ್ಯ ಸರ್ಕಾರ ಹೇಳಿದೆ. ಆದರೆ ಈ ನಡುವೆ ನಮಗೆ 5 ಸಾವಿರ ಕ್ಯೂಸೆಕ್ ನೀರು ಸಾಕಾಗಲ್ಲ. 24 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಒತ್ತಡ ಹೇರುತ್ತಿದೆ. ನಾಳೆ ಸುಪ್ರಿಂಕೋರ್ಟ್​ನಲ್ಲಿ ಎರಡು ರಾಜ್ಯದ ಪರ ವಕೀಲರು ಈ ಬಗ್ಗೆ ವಾದ ಮಂಡಿಸಲಿದ್ದಾರೆ. 3000ಕ್ಕಿಂತ ಹೆಚ್ಚಿನ ನೀರನ್ನು ಪ್ರತಿದಿನ ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದ ಮಾಡಲು ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ

ದೆಹಲಿಯಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದರೆ, ಇತ್ತ ಮಂಡ್ಯದಲ್ಲಿ ಅನ್ನದಾತರ ಆಕ್ರೋಶದ ಕಟ್ಟೆ ಒಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಅರೆಬೆತ್ತಲೆ ಮೆರವಣಿಗೆ ನಡೆಸಿದ್ದಾರೆ. ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಕಾವೇರಿ ನದಿ ಸ್ನಾನಘಟ್ಟದಿಂದ ತಾಲೂಕು ಕಚೇರಿವರೆಗೆ ಅರೆಬೆತ್ತಲೆಯಾಗಿ ಪ್ರತಿಭಟನಾ ರ‍್ಯಾಲಿ ನಡೆಸಿದರು.

ದಾವಣಗೆರೆಯಲ್ಲಿ ವಿಶ್ವ ಕರ್ನಾಟಕ ರಕ್ಷಣ ವೇದಿಕೆಯಿಂದ ನಗರದ ಜಯದೇವ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸ್ಟಾಲಿನ್ ಓಲೈಕೆಗಾಗಿ ಕಾವೇರಿ ನೀರು ಬಿಟ್ಟಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನಾಕಾರರಿಂದ ಮನವಿ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.