ಕರ್ನಾಟಕಕ್ಕೆ ಹೊಡೆತದ ಮೇಲೆ ಹೊಡೆತ: ಮತ್ತೆ ತಮಿಳುನಾಡಿಗೆ ಕಾವೇರಿ ನಿರು ಹರಿಸಲು ಸೂಚನೆ
cauvery water Dispute: ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಲೇ ಇವೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ಸೂಚಿಸಿದೆ.
ನವದೆಹಲಿ, (ನವೆಂಬರ್ 23): ಕಾವೇರಿ ನದಿ ನೀರಿನ(cauvery water )ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಲೇ ಇವೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(cauvery water management authority ) ಕರ್ನಾಟಕಕ್ಕೆ ಸೂಚಿಸಿದೆ. ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.
ಕರ್ನಾಟಕ-ತಮಿಳುನಾಡು ವಾದ
ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿದೆ. ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ಹಾಗೂ ಡಿಸೆಂಬರ್ ನ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿತ್ತು.
ತಮಿಳುನಾಡಿನ ಈ ವಾದಕ್ಕೆ ಕರ್ನಾಟಕ ಕೌಂಟರ್ ಕೊಟ್ಟಿದ್ದು, ಕರ್ನಾಟಕದಲ್ಲಿ ಈಗ ಬರ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದಾರೆ.
ಇನ್ನು ನವೆಂಬರ್ 3ರ ಸಭೆಯಲ್ಲಿ ತಮಿಳುನಅಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ನೀರು ಹರಿಸುವಂತೆ ಹೇಳಿದೆ. ಇದರಿಂದ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಲೇ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:07 pm, Thu, 23 November 23