AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ, CWMA ಸಭೆಯಲ್ಲಿ ಕರ್ನಾಟಕಕ್ಕೆ ಖಡಕ್ ಸೂಚನೆ

Cauvery Water Management Authority: ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ CWMA ಆದೇಶಿಸಿದೆ. ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಖಡಕ್ ಸೂಚನೆ ನೀಡಲಾಗಿದೆ. ಅಲ್ಲದೇ ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸೂಚಿಸಲಾಗಿದೆ.

ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ, CWMA ಸಭೆಯಲ್ಲಿ ಕರ್ನಾಟಕಕ್ಕೆ ಖಡಕ್ ಸೂಚನೆ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ
ಹರೀಶ್ ಜಿ.ಆರ್​.
| Edited By: |

Updated on:Sep 18, 2023 | 4:37 PM

Share

ನವದೆಹಲಿ, (ಸೆಪ್ಟೆಂಬರ್ 18): ತಮಿಳುನಾಡಿಗೆ (Tamil Nadu) ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು(Cauvery Water )ಬಿಡಲು ಕರ್ನಾಟಕಕ್ಕೆ(Karnataka) CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶಿಸಿದೆ. ಇಂದು (ಸೆಪ್ಟೆಂಬರ್ 18) ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ(Cauvery Water Management Authority) ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್​ ಸೂಚನೆ ನೀಡಿದ್ದು, CWRC (ಕಾವೇರಿ ನೀರು ನಿಯಂತ್ರಣ ಸಮಿತಿ)  ಆದೇಶ ಮುಂದುವರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ. CWRC ಈ ಹಿಂದೆ ನೀಡಿದ್ದ ಇದೇ ಆದೇಶವನ್ನು CWMA ಎತ್ತಿಹಿಡಿದಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಸೆಪ್ಟೆಂಬರ್ 12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಮತ್ತೆ ತಮಿಳುನಾಡಿಗೆ (Tamil Nadu) 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ (Karnataka) ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದರು. ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ನೀರು ಬಿಡಲು ಆದೇಶಿಸಿದೆ. ಈ ಮೂಲಕ CWRC ಈ ಹಿಂದೆ ನೀಡಿದ್ದ ಇದೇ ಆದೇಶವನ್ನು CWMA ಎತ್ತಿಹಿಡಿದಿದೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಸೆ. 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​​ ನೀರು ಬಿಡುಗಡೆ ಮಾಡುವಂತೆ ಸಮಿತಿಯು ಆಗಸ್ಟ್ 29ರಂದಯ ಶಿಫಾರಸ್ಸು ಮಾಡಿತ್ತು.ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 28ರಂದಯ ನಡೆಸಿದ ಸಭೆಯಲ್ಲಿ ಸೆಪ್ಟೆಂಬರ್ 21ರ ವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು. ಇದರಿಂದ ಪ್ರಾಧಿಕಾರ ನಿಗದಿಪಡಿಸಿದಷ್ಟು ನೀರನ್ನು ತಮಿಳುನಾಡಿಗೆ ಕರ್ನಾಟಕ ಬಿಡುಗಡೆ ಮಾಡಿದೆ. ಕಾವೇರಿ ಹಾಗೂ ಕೃಷ್ಣ ಕಣವೆಯಲ್ಲಿ ಭೀಕರ ಬರದ ಸನ್ನಿವೇಶ ಕಾಣಿಸಿಕೊಂಡಿದ್ದರಿಂದ ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ, ಸುಪ್ರೀಂಕೋರ್ಟ್​ಗೆ ಈಗಾಗಲೇ ಅಫಿಡೆವಿಟ್ ಸಲ್ಲಿಸಿದ್ದು, ಈ ಬಗ್ಗೆ ಸೆಪ್ಟೆಂಬರ್ 21ರಂದು ಕೋರ್ಟ್​ನಲ್ಲಿ ವಿಚಾರಣೆಗೆ ಬರಲಿದೆ. ಹೀಗಾಗಿ ಕೋರ್ಟ್ ಏನು ತೀರ್ಪು ನೀಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:06 pm, Mon, 18 September 23

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More