ಕಾವೇರಿ ನೀರಿನಲ್ಲಿ ರಾಜಿ ಇಲ್ಲ, CWRC ಆದೇಶವನ್ನ ಕೋರ್ಟ್​ನಲ್ಲಿ ಚಾಲೆಂಜ್ ಮಾಡ್ತೇವೆ: ಮಾದಪ್ಪನ ಸನ್ನಿಧಾನದಲ್ಲಿ ಸಿಎಂ ಖಡಕ್ ಮಾತು

cauvery water dispute: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಕರ್ನಾಟಕ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನೀರಿನಲ್ಲಿ ರಾಜಿ ಇಲ್ಲ, CWRC ಆದೇಶವನ್ನ ಕೋರ್ಟ್​ನಲ್ಲಿ ಚಾಲೆಂಜ್ ಮಾಡ್ತೇವೆ: ಮಾದಪ್ಪನ ಸನ್ನಿಧಾನದಲ್ಲಿ ಸಿಎಂ ಖಡಕ್ ಮಾತು
ಸಿದ್ದರಾಮಯ್ಯ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ

Updated on:Sep 27, 2023 | 11:08 AM

ಚಾಮರಾಜನಗರ, (ಸೆಪ್ಟೆಂಬರ್ 27): ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಬಿಡುವುದರ ವಿರುದ್ಧ ಕರ್ನಾಟಕದಲ್ಲಿ  ಬಂದ್​(Karnataka Bandh), ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆಯೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಪ್ರತಿಭಟನೆಯ ಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ಇನ್ನು ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ (Supreme Court ) ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು(ಸೆಪ್ಟೆಂಬರ್ 27) ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು, ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ. CWRC ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ

CWRC ಆದೇಶದಲ್ಲೇನಿದೆ?

ಮುಂದಿನ 15 ದಿನಗಳಿಗೆ ಪ್ರತಿ ದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಕಾವೇರಿ ಕೊಳ್ಳದಲ್ಲಿ ಶೇ 53 ಮಳೆ ಕೊರತೆ ಇದೆ. ಕರ್ನಾಟಕ 161 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. 34 ತಾಲೂಕುಗಳು ಭಾಗಶಃ ಬರಕ್ಕೆ ತುತ್ತಾಗಿವೆ. ಈ ಪರಿಸ್ಥಿತಿಯಲ್ಲಿ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ. ಜಲಾಶಯಗಳಲ್ಲಿ ನೀರಿಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನಂತರ, 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರ ತನಕ ನೀರು ಹರಿಸುವಂತೆ ಆದೇಶಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:47 am, Wed, 27 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ