ಡಿಕೆಶಿ ಮನವಿಗೂ ಡೋಂಟ್ ಕೇರ್: ಕರ್ನಾಟಕ ಬಂದ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಸರ್ವಪಕ್ಷಗಳ ಸಭೆ ನಡೆದಿದ್ದು, ರೈತರ ಪರವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಆಗಸ್ಟ್ 13ರ ಕರ್ನಾಟಕ ಬಂದ್ ಮಾಡದಂತೆ ಸಂಘಟನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, ಕರ್ನಾಟಕ ಬಂದ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ. ಸಿಎಂ ಡಿಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ ನೀಡಿ ಸ್ವಾಗತಿಸ್ತೇವೆ. ಮಳೆ ಆಗಿದೆ ಅಂತಾ ತಮಿಳುನಾಡಿಗೆ ನೀರು ಬಿಡಬೇಡಿ. ನಮ್ಮ ನಾಲೆಗಳಿಗೆ ನೀರು ಹರಿಸಬೇಕೆಂದು ಈ ಬಂದ್. ಕರ್ನಾಟಕ ಬಂದ್‌ನಿಂದ ಯಾರಿಗೂ ನಷ್ಟ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು, (ಆಗಸ್ಟ್ 02): ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಸರ್ವಪಕ್ಷಗಳ ಸಭೆ ನಡೆದಿದ್ದು, ರೈತರ ಪರವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಆಗಸ್ಟ್ 13ರ ಕರ್ನಾಟಕ ಬಂದ್ ಮಾಡದಂತೆ ಸಂಘಟನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, ಕರ್ನಾಟಕ ಬಂದ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ. ಸಿಎಂ ಡಿಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ ನೀಡಿ ಸ್ವಾಗತಿಸ್ತೇವೆ. ಮಳೆ ಆಗಿದೆ ಅಂತಾ ತಮಿಳುನಾಡಿಗೆ ನೀರು ಬಿಡಬೇಡಿ. ನಮ್ಮ ನಾಲೆಗಳಿಗೆ ನೀರು ಹರಿಸಬೇಕೆಂದು ಈ ಬಂದ್. ಕರ್ನಾಟಕ ಬಂದ್‌ನಿಂದ ಯಾರಿಗೂ ನಷ್ಟ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

