
ಧಾರವಾಡ: ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಧಾರವಾಡದ ಸಿಬಿಐ ನ್ಯಾಯಾಲಯದಿಂದ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ.
ಧಾರವಾಡ ಜಿ.ಪಂ.ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸ್ನಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ನಿರಾಕರಣೆಯಾಗಿದೆ. ಸದ್ಯ ಮಾಜಿ ಸಚಿವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
ಇತ್ತ, ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವಿನಯ್ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿಯನ್ನು ಡಿ.28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. ಚಂದ್ರಶೇಖರನನ್ನು ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ್ದ ಆರೋಪದಡಿ CBI ಅಧಿಕಾರಿಗಳು ಬಂಧಿಸಿದ್ದರು. ಚಂದ್ರಶೇಖರ ಇಂಡಿಯನ್ನ ಧಾರವಾಡದ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?
Published On - 4:33 pm, Mon, 14 December 20