AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಬಿಐ ಎಂಟ್ರಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದೂ ಹೇಳಿದೆ. ಆದರೆ, ಸಿಬಿಐ ಪ್ರಕರಣ ದಾಖಲಿಸಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಇಲ್ಲಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಬಿಐ ಎಂಟ್ರಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಗೃಹ ಸಚಿವ ಪರಮೇಶ್ವರ್
Anil Kalkere
| Edited By: |

Updated on: Jun 05, 2024 | 10:46 AM

Share

ಬೆಂಗಳೂರು, ಜೂನ್ 5: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ (CBI) ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ (G Parameshwara) ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಬಹುದು ಅಂತ ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಕೋಡಲಿದೆ ಎಂದರು.

ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೋಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್​​ನಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಇನ್ನು ರಾಜ್ಯದಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಬೇರೆ ಬೇರೆ ರೀತಿಯಲ್ಲಿ ಅಂದಾಜು ಮಾಡಿದ್ದೆವು. ಅದು ಏರುಪೇರು ಆಗಿದೆ. 50 ಸಾವಿರದ ಅಂತರದಲ್ಲಿ ಯಾರೆಲ್ಲ ಸೋತಿದ್ದಾರೆಯೋ ಆ ಕ್ಷೇತ್ರಗಳಲ್ಲಿ ಅಲ್ಲಿ ಇನ್ನಷ್ಟು ಎಫರ್ಟ್ ಹಾಕಬೇಕಿತ್ತು. ತುಮಕೂರನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಫಲಿತಾಂಶ ಏರುಪೇರು ಆಗಿದೆ ಎಂದರು.

ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೋಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು ಎಂದರು.

ಐತಿಹಾಸಿಕವಾದ ಲೋಕಸಭಾ ಚುನಾವಣೆಯನ್ನು ವಿಶ್ವವೇ ಎದುರು ನೋಡುತ್ತಾ ಇತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ರೀತಿ ಚುನಾವಣೆ ಆಗುತ್ತದೆ ಎಂಬುದನ್ನು ವಿಶ್ವ ಗಮನಿಸುತ್ತಾ ಇತ್ತು. ದೇಶದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಏಕ್ಸಿಟ್ ಪೋಲ್​​ಗಳಲ್ಲಿ ಫಲಿತಾಂಶ ಏಕಮುಖವಾಗಿದೆ ಎಂದು ಬಿಂಬಿಸಿದ್ದರು. ಆದರೆ, ಫಲಿತಾಂಶ ಬೇರೆ ತರಹ ಬಂದಿದೆ. ಮೋದಿ 400 ಸ್ಥಾನ ಗೆಲ್ಲುತ್ತಾರೆ ಎಂಬ ನೀರಿಕ್ಷೆ ಸುಳ್ಳಾಗಿದೆ. ಇಂಡಿಯಾ ಒಕ್ಕೂಟ ಹೆಚ್ಚು ಸೀಟ್ ಗೆದ್ದಿದೆ. ವಿರೋಧ ಪಕ್ಷ ಗಟ್ಟಿಯಾಗಿ‌ ಉಳಿಯತ್ತೆ ಅಂತ ತೋರಿಸಿದ್ದಾರೆ. ಮೋದಿಗೆ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಬಿಜೆಪಿಗೆ ಬಹುಮತ ಬಂದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ, ಕೇಸ್​ ದಾಖಲಿಸಿಕೊಂಡ ಸಿಬಿಐ: ಸಚಿವ ನಾಗೇಂದ್ರಗೆ ನೋಟಿಸ್ ಸಾಧ್ಯತೆ

ಕಾಂಗ್ರೆಸ್ ಒಕ್ಕೂಟ ಅಧಿಕಾರಕ್ಕೆ ಬರಲಿದೆಯೇ ಅಥವಾ ಬಿಜೆಪಿ ನೇತೃತ್ವದ ಎನ್​​ಡಿಎ ಒಕ್ಕೂಟ ಅಧಿಕಾರಕ್ಕೆ ಬರಲಿದೆಯೇ ಎಂಬ ಪ್ರಶ್ನೆಗೆ, ಇದಕ್ಕೆ ಕಾಲವೇ ಉತ್ತರಿಸಲಿದೆ ಎಂದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!