ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು: ಡಿ ಕೆ ಶಿವಕುಮಾರ್ ಪರ ವಕೀಲರ ಮನವಿಗೆ ಸಿಬಿಐ ಆಕ್ಷೇಪ
ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಮನವಿಗೆ ಪ್ರತಿಕ್ರಿಯಿಸಿದ ಎಸ್ಪಿಪಿ ಪ್ರಸನ್ನ ಕುಮಾರ್ ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು ಎಂದು ವಾದ ಮಂಡಿಸಿದರು. ನಂತರ ವಿಚಾರಣೆಯನ್ನು ಜುಲೈ 26ಕ್ಕೆ ಹೈಕೋರ್ಟ್ ಮುಂದೂಡಿದೆ.
ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆ ವಿಚಾರಕ್ಕೆ ಸಂಬಂಧಿಸಿ ಸಿಬಿಐ ಇಂದು (ಜುಲೈ 23) ಆಕ್ಷೇಪ ವ್ಯಕ್ತಪಡಿಸಿದೆ. ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಡಿ.ಕೆ. ಶಿವಕುಮಾರ್ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಸಿಬಿಐ ಪರ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು ಎಂದು ಹೇಳಿದ್ದಾರೆ.
ಸಿಬಿಐ ಯಾವುದೇ ಕ್ರಮಕೈಗೊಳ್ಳದಂತೆ ತಡೆ ನೀಡಲು ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ಮನವಿ ಮಾಡಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಪರ ವಕೀಲರ ಮನವಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತ್ತು. ಬಲವಂತದ ಕ್ರಮ ಕೈಗೊಳ್ಳದಂತೆ ಈಗಾಗಲೇ ತಡೆ ಇದೆ. ಈಗ ನೋಟಿಸ್‌ಗೂ ತಡೆ ನೀಡಿದರೆ ಸಿಬಿಐ ತನಿಖೆಗೇ ತಡೆಯಾಜ್ಞೆ ನೀಡಿದಂತೆ ಆಗಲಿದೆ ಎಂದು ಸಿಬಿಐ ಪರ ವಕೀಲರು ಹೇಳಿದ್ದರು.
ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಮನವಿಗೆ ಪ್ರತಿಕ್ರಿಯಿಸಿದ ಎಸ್ಪಿಪಿ ಪ್ರಸನ್ನ ಕುಮಾರ್ ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧ ಆದೇಶ ನೀಡಬಾರದು ಎಂದು ವಾದ ಮಂಡಿಸಿದರು. ನಂತರ ವಿಚಾರಣೆಯನ್ನು ಜುಲೈ 26ಕ್ಕೆ ಹೈಕೋರ್ಟ್ ಮುಂದೂಡಿದೆ.
ಇದನ್ನೂ ಓದಿ: ಲಿಂಗಾಯತರು ಬಿಜೆಪಿ ಸ್ವತ್ತಲ್ಲ; ಡಿ ಕೆ ಶಿವಕುಮಾರ್ ಕೆಲ ದಿನಗಳ ಹಿಂದೆ ಈ ಮಾತು ಹೇಳಿದ್ದು ನೆನಪಿದೆಯೇ?
ಆ ಆಡಿಯೋ ನಳಿನ್ ಕುಮಾರ್ ಅವರದ್ದೇ; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯ
(CBI Investigation against DK Shivakumar Karnataka High Court hearing)
Published On - 4:26 pm, Fri, 23 July 21