AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬಿಡುಗಡೆಯಾಗಲಿದೆ CBSE 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ..

CBSE Classes 10 Exam 2021 Time Table ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 2021ನೇ ಸಾಲಿನ 10 ಮತ್ತು 12 ತರಗತಿಗಳ ಪರೀಕ್ಷೆಯ ವೇಳಾಪಟ್ಟಿ ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ.

ಇಂದು ಬಿಡುಗಡೆಯಾಗಲಿದೆ CBSE 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ..
ಪರೀಕ್ಷೆ (ಸಾಂಕೇತಿಕ ಚಿತ್ರ)
ಆಯೇಷಾ ಬಾನು
|

Updated on: Feb 02, 2021 | 7:39 AM

Share

ದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 2021ನೇ ಸಾಲಿನ 10 ಮತ್ತು 12 ತರಗತಿಗಳ ಪರೀಕ್ಷೆಯ ವೇಳಾಪಟ್ಟಿ ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ. ಪರೀಕ್ಷೆಯು ಮೇ 4 ರಿಂದ ಜೂನ್ 10 ರವರೆಗೆ ಆಫ್‌ಲೈನ್ ಮೂಲಕ ನಡೆಯಲಿದೆ. ಒಮ್ಮೆ ಬಿಡುಗಡೆಯಾದ ಬಳಿಕ ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಡೇಟ್‌ಶೀಟ್ ಪರಿಶೀಲಿಸಬಹುದು. -cbse.nic.in

ಪ್ರವೇಶ ಪತ್ರವನ್ನು ಏಪ್ರಿಲ್‌ನಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ವರ್ಷ, ಪಠ್ಯಕ್ರಮವನ್ನು ಶೇಕಡಾ 30 ಕ್ಕೆ ಇಳಿಸಲಾಗಿದೆ, ಮತ್ತು ಪ್ರಶ್ನೆ ಪತ್ರಿಕೆಯಲ್ಲಿ ಶೇಕಡಾ 33 ರಷ್ಟು ಆಂತರಿಕ ಆಯ್ಕೆ ಪ್ರಶ್ನೆಗಳನ್ನು ಹೊಂದಿರುತ್ತದೆ.

CBSE 10 ನೇ ಮತ್ತು 12 ನೇ ತರಗತಿ ಪರೀಕ್ಷೆ 2021: ವೇಳಾಪಟ್ಟಿಯನ್ನು ಹೇಗೆ ಪರಿಶೀಲಿಸುವುದು

ಹಂತ 1: ಅಧಿಕೃತ ವೆಬ್‌ಸೈಟ್- cbse.nic.in ಗೆ ಭೇಟಿ ನೀಡಿ

ಹಂತ 2: ‘ತರಗತಿಗಳು 10, 12 ಡೇಟ್‌ಶೀಟ್‌ಗಳ’ ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: 10/12 ನೇ ತರಗತಿಯ ಪರೀಕ್ಷೆಯ ವೇಳಾಪಟ್ಟಿ ಸ್ಕ್ರೀನ್ ಮೇಲೆ ಕಾಣಿಸುತ್ತದೆ

ಹಂತ 4: ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಕೊರೊನಾ ಸಾಂಕ್ರಾಮಿಕ ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳು ನಡೆಯಲಿದ್ದು, ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುವುದು ಅತ್ಯಗತ್ಯ. ಮಾರ್ಚ್ 1 ರಿಂದ ಶಾಲೆಗಳು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಿವೆ. ಫಲಿತಾಂಶವನ್ನು ಜುಲೈ 15 ರೊಳಗೆ ಪ್ರಕಟಿಸಲಾಗುವುದು.

ಕಳೆದ ವರ್ಷ ಜುಲೈನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಒಟ್ಟು 88.78 ರಷ್ಟು ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. 91.46 ರಷ್ಟು ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದರು.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು
ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು
ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ
ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?