Drug Peddlers: ಬೆಂಗಳೂರಿನಲ್ಲಿ ನಾಲ್ವರು, ಉಡುಪಿಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ಸ್‌ ಬಂಧನ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಭಟ್ಕಳ ಮತ್ತು ಉಡುಪಿ ಮೂಲದವರು ಎಂದು ತಿಳಿದು ಬಂದಿದೆ.

Drug Peddlers: ಬೆಂಗಳೂರಿನಲ್ಲಿ ನಾಲ್ವರು, ಉಡುಪಿಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ಸ್‌ ಬಂಧನ
ಸಂಗ್ರಹ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jul 05, 2022 | 9:53 PM

ಬೆಂಗಳೂರು: ಸಿಸಿಬಿ ಪೊಲೀಸರು(CCB Police) ಬೆಂಗಳೂರಿನಲ್ಲಿ ಕೇರಳ ಮೂಲದ ನಾಲ್ವರು ಡ್ರಗ್ ಪೆಡ್ಲರ್ಗಳನ್ನು(Drug Peddlers) ಬಂಧಿಸಿದ್ದಾರೆ. ಕೇರಳ ಮೂಲದ ಶಬೀನ್ ಜೋಸೆಫ್, ಮಹಮ್ಮದ್ ನಫೀ, ದಿಲ್ಶಾದ್ ಅಫ್ರೀದ್, ರೆಹನ್ ಬಾಬು ಬಂಧಿತ ಡ್ರಗ್ ಪೆಡ್ಲರ್ಸ್‌. ಬಂಧಿತರಿಂದ 11 ಲಕ್ಷ ಮೌಲ್ಯದ 70 ಗ್ರಾಂ ಎಂಡಿಎಂಎ ಕ್ರಿಸ್ಟೆಲ್ ಡ್ರಗ್ಸ್‌, ನಾಲ್ಕು ಐಫೋನ್ಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದರು. 2-3 ವರ್ಷಗಳ ಹಿಂದೆ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಆಫ್ರಿಕಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಖರೀದಿಸಿ ಮಾರುತ್ತಿದ್ದರು. ಒಂದು ಗ್ರಾಂಗೆ 8ರಿಂದ 10 ಸಾವಿರಕ್ಕೆ ಕಾಲೇಜು ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನ ಬಂಧಿಸಿ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆ ನಡೆಸ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ: ಕಲಬುರಗಿ, ಕೋಲಾರದಲ್ಲಿ ತಲಾ ಒಬ್ಬರು ಬಲಿ

ಉಡುಪಿಯಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರ ಬಂಧನ ಇನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಭಟ್ಕಳ ಮತ್ತು ಉಡುಪಿ ಮೂಲದವರು ಎಂದು ತಿಳಿದು ಬಂದಿದೆ. ಡಿವೈಎಸ್ಪಿ ಶ್ರೀಕಾಂತ್, ಸಿಪಿಐ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಬ್ದುಲ್ ರೆಹಮಾನ್(31), ಅಬ್ದುಲ್ ಸಮದ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 30ಗ್ರಾಂ ತೂಕದ ಗಾಂಜಾ, 11,420 ಗ್ರಾಂ ತೂಕದ ಎಂಡಿಎಂಎ ಹರಳು ಕಾರು ವಶಕ್ಕೆ ಪಡೆಯಲಾಗಿದೆ. ಗಾಂಜಾ ಉಡುಪಿಯಿಂದ ಉತ್ತರಕನ್ನಡ ಜಿಲ್ಲೆಯ ಕಡೆಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಕಾರು ಡಿಕ್ಕಿ ಇಬ್ಬರ ಸಾವು ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಕಾರನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಹಾಸನದ ಅರಕಲಗೂಡು ತಾಲ್ಲೂಕಿನ ಯರೆಬೋರೆಕಾವಲು ಬಳಿ ನಡೆದಿದೆ. ಹಾಸನ ನಗರದ ಕಾಟೀಹಳ್ಳಿಯ ಧನುಷ್ (28), ಬಿರೇಶ್ (27) ಮೃತ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:25 pm, Tue, 5 July 22

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ