ಅಕ್ರಮ ರೆಮ್‌ಡಿಸಿವಿರ್ ಔಷಧ ಸಂಗ್ರಹ ಮತ್ತು ಮಾರಾಟ.. ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಮಹಾಮಾರಿ ಕೊರೊನಾದಿಂದ ಜನ ನರಳುತ್ತಿದ್ದಾರೆ. ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಅಕ್ರಮವಾಗಿ ಕೊವಿಡ್​ ಚಿಕಿತ್ಸೆಗೆ ಬೇಕಿರುವ ರೆಮ್‌ಡಿಸಿವಿರ್ ಔಷಧವನ್ನು ಸಂಗ್ರಹಿಸಿಟ್ಟಿದ್ದಾರೆ. ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದಾರೆ.

ಅಕ್ರಮ ರೆಮ್‌ಡಿಸಿವಿರ್ ಔಷಧ ಸಂಗ್ರಹ ಮತ್ತು ಮಾರಾಟ.. ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ
ರಾಜೇಶ್, ಶಕೀಬ್, ಸೊಹೈಲ್
Follow us
ಆಯೇಷಾ ಬಾನು
|

Updated on: Apr 18, 2021 | 1:31 PM

ಬೆಂಗಳೂರು: ಕೊವಿಡ್ ಚಿಕಿತ್ಸೆಗೆ ಅಗತ್ಯ ಲಸಿಕೆ ಅಕ್ರಮವಾಗಿ ಸಂಗ್ರಹ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜೇಶ್, ಶಕೀಬ್, ಸೊಹೈಲ್ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ರೆಮ್‌ಡಿಸಿವಿರ್ ಔಷಧವನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಪ್ರತಿ ಇಂಜೆಕ್ಷನ್ 10,500 ರೂ.ಗೆ ಮಾರುತ್ತಿದ್ರು. ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ರೆಮ್‌ಡಿಸಿವಿರ್ ಲಸಿಕೆಯ 11 ಬಾಟಲ್ ವಶಕ್ಕೆ ಪಡೆದಿದ್ದಾರೆ.

ಮಹಾಮಾರಿ ಕೊರೊನಾದಿಂದ ಜನ ನರಳುತ್ತಿದ್ದಾರೆ. ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಅಕ್ರಮವಾಗಿ ಕೊವಿಡ್​ ಚಿಕಿತ್ಸೆಗೆ ಬೇಕಿರುವ ರೆಮ್‌ಡಿಸಿವಿರ್ ಔಷಧವನ್ನು ಸಂಗ್ರಹಿಸಿಟ್ಟಿದ್ದಾರೆ. ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದಾರೆ. ಸದ್ಯ ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಇವರೆಗೆ ಇಂಜೆಕ್ಷನ್ ಸಿಗುತಿದ್ದ ಮೂಲ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಬಂಧಿತ ರಾಜೇಶ್ ಗುರುಶ್ರೀ ಮೆಡಿಕಲ್ ನಡೆಸುತಿದ್ದ ಎಂಬ ಮಾಹಿತಿ ಸಿಕ್ಕಿದೆ. ಘಟನೆ ಸಂಬಂಧ ಸದಗುಂಟೆ ಪಾಳ್ಯ ಹಾಗೂ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ