AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಹೇಳಿಕೆ: ಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ

ಸಿಸಿಬಿ ವಿಚಾರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್​ಎಸ್​ಎಸ್ ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಹೇಳಿಕೆ: ಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ
ಬಿಕೆ ಹರಿಪ್ರಸಾದ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Jan 19, 2024 | 12:34 PM

Share

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್​ (BK Hariprasad) ಅವರನ್ನು ಶುಕ್ರವಾರ ಸಿಸಿಬಿ ಪೊಲೀಸರು (CCB Police) ವಿಚಾರಣೆ ನಡೆಸಿದರು. ಕೆಕೆ ಗೆಸ್ಟ್​​ಹೌಸ್​ನಲ್ಲಿ ಹರಿಪ್ರಸಾದ್​ ವಿಚಾರಣೆ ನಡೆಸಲಾಯಿತು. ಇದೇ ವೇಳೆ, ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ ಹರಿಪ್ರಸಾದ್, ನನಗೆ ವಿವಿಐಪಿ ಟ್ರೀಟ್​ಮೆಂಟ್​​ ಬೇಡ, ಬೇಕಿದ್ದರೆ ಅರೆಸ್ಟ್ ಮಾಡಿ ಎಂದರು.

ವಿಚಾರಣೆಗೆ ಒಳಪಡಿಸುವಂತೆ ನಿರ್ದೇಶನ ನೀಡಿರುವ ಸರ್ಕಾರದ ನಡೆಗೆ ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಕಾಂಗ್ರೆಸ್ ಸರ್ಕಾರವಾ, ಆರ್​ಎಸ್​​ಎಸ್ ಸರ್ಕಾರವಾ: ಹರಿಪ್ರಸಾದ್ ಪ್ರಶ್ನೆ

ಸಿಸಿಬಿ ವಿಚಾರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್​ಎಸ್​ಎಸ್ ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್​​ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹರಿಪ್ರಸಾದ್​ ಹೇಳಿದರು.

ಏನು ಹೇಳಿದ್ದರು ಹರಿಪ್ರಸಾದ್?

ಜನವರಿ 22ರಂದು ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ಗೋಧ್ರಾ ರೀತಿ ಮತ್ತೆ ದುರಂತ ಸಂಭವಿಸುವ ಮಾಹಿತಿ ಇದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಬೆಂಗಳೂರಿನಲ್ಲಿ ಇತ್ತೀಚೆಗೆ ಹರಿಪ್ರಸಾದ್ ಹೇಳಿದ್ದರು. ಈ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಹರಿಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು.

ಇದನ್ನೂ ಓದಿ: 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ: ಬಿಕೆ ಹರಿಪ್ರಸಾದ್

ಭದ್ರತೆಗೆ ಸಂಬಂಧಿಸಿದ ಕಳವಳದ ವಿಚಾರ ಬಂದಾಗ ಪೊಲೀಸರಿಗೆ ಮಾಹಿತಿ ನೀಡಬೇಕೇ ವಿನಃ ಸಾರ್ವಜನಿಕ ಹೇಳಿಕೆ ನೀಡಿ ಜನರಲ್ಲಿ ಭೀತಿ ಹುಟ್ಟಿಸುವುದು ಸರಿಯಲ್ಲ ಎಂಬ ಅಭಿಪ್ರಾಯವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ಆದರೆ, ತಮ್ಮ ಹೇಳಿಕೆಯನ್ನು ಹರಿಪ್ರಸಾದ್ ಸಮರ್ಥಿಸಿಕೊಂಡಿದ್ದರು. ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್