AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ; ಪಶ್ಚಿಮ ಬಂಗಾಳ ಮೂಲದ ಮೂವರು ಬಂಧನ

ಬೇರೆಯವರ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಸಿ ಕಳ್ಳಸಾಗಣೆ ಮೂಲಕ ಮಹಿಳೆಯರನ್ನು ಕರೆತಂದು ದಂಧೆ ನಡೆಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದ್ದು, ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ; ಪಶ್ಚಿಮ ಬಂಗಾಳ ಮೂಲದ ಮೂವರು ಬಂಧನ
ಪಶ್ಚಿಮ ಬಂಗಾಳ ಮೂಲದ ಮೂವರು ಆರೋಪಿಗಳು
sandhya thejappa
|

Updated on: Apr 19, 2021 | 3:40 PM

Share

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪಶ್ಚಿಮ ಬಂಗಾಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ನೌಶದ್ ಅಲಿ (55), ರಿಯಾಜುಲ್ ಶೇಕ್ (31), ಸಮೀರ್ (40) ಎಂದು ತಿಳಿದುಬಂದಿದೆ. ಬೇರೆಯವರ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಸಿ ಕಳ್ಳಸಾಗಣೆ ಮೂಲಕ ಮಹಿಳೆಯರನ್ನು ಕರೆತಂದು ದಂಧೆ ನಡೆಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದ್ದು, ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬಂಧಿತರು ಮಹಿಳೆಯರನ್ನು ಹೊರ ದೇಶ ಹಾಗೂ ರಾಜ್ಯದಿಂದ ಕಳ್ಳಸಾಗಣೆ ಮೂಲಕ ಕರೆತರುತ್ತಿದ್ದರು. ದಾಳಿ ವೇಳೆ ಬೇರೆ ಬೇರೆ ಹೆಸರಿನ 11 ಆಧಾರ್ ಕಾರ್ಡ್​ಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸರವನ್ನು ಎಗರಿಸಿ ಕಳ್ಳ ಪರಾರಿ ಕೋಲಾರ: ಮಹಿಳೆಯ ಚಿನ್ನದ ಸರವನ್ನು ಎಗರಿಸಿ ಕಳ್ಳ ಪರಾರಿಯಾಗಿರುವ ಘಟನೆ ಕೋಟೆ ಬಡಾವಣೆಯಲ್ಲಿ ನಡೆದಿದೆ. ವಾಯುವಿಹಾರಕ್ಕೆ ಬಂದಿದ್ದ ಅಖಿಲಾ ಎಂಬುವವರ 60 ಗ್ರಾಂ ಚಿನ್ನದ ಸರವನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಸರಗಳ್ಳನನ್ನು ಸ್ಥಳೀಯರು ಸುತ್ತುವರಿದರು ಕಳ್ಳ ತಕ್ಷಣ ಬೈಕ್ ಹಾಗೂ ಕೃತ್ಯಕ್ಕ ಬಳಸಿದ್ದ ಚಾಕು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಕೆಂಗನಹಳ್ಳಿ ಗ್ರಾಮದಲ್ಲಿ ಹಾಡುಹಗಲೇ ಮನೆಯ ಬಾಗಿಲನ್ನು ಮುರಿದು ಕಳ್ಳತನ ಎಸಗಿದ್ದಾರೆ. ಚನ್ನಬಸವ ಅವರಿಗೆ ಸೇರಿದ ಮನೆಯಲ್ಲಿ 20 ಗ್ರಾಂ ಚಿನ್ನಾಭರಣ, 10 ಸಾವಿರ ನಗದು ಸೇರಿದಂತೆ ಮನೆಯಲ್ಲಿದ್ದ ಟಿವಿ ಕಳವು ಆಗಿದೆ. ಹಾಡುಹಗಲೇ ಕಳ್ಳತನಕ್ಕೆ ಗ್ರಾಮಸ್ಥರು ಪೋಲಿಸರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ

ಲಸಿಕೆ ಪಡೆದಿದ್ದರೂ ಸೋಂಕು ಬಂತು; ದೊಡ್ಡ ಚರ್ಚೆ ಹುಟ್ಟುಹಾಕಿತು ವೈದ್ಯರು ಹೇಳಿದ ಧೈರ್ಯದ ಮಾತು

ಗೋಕರ್ಣಕ್ಕೆ ಕೈಹಾಕಿದ್ದ ರಾಮಚಂದ್ರಾಪುರ ಮಠಕ್ಕೆ ಮುಖಭಂಗ; ದೇಗುಲವನ್ನು ಮುಜರಾಯಿ ಇಲಾಖೆಗೆ ಹಿಂದಿರುಗಿಸಲು ಸುಪ್ರೀಂ ಆದೇಶ

(CCB Police arrested three people from West Bengal who were involved in prostitution At bengaluru)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್