ಸಿಸಿಬಿ ಪೊಲೀಸರಿಂದ ಇಬ್ಬರು ಡ್ರಗ್ಸ್ ಪೆಡ್ಲರ್ಗಳ ಬಂಧನ
ಬಂಧಿತರಿಂದ ಸುಮಾರು ಹತ್ತು ಲಕ್ಷ ಮೌಲ್ಯದ ಕೊಕೇನ್, ಎಂಡಿಎಂಎ ಡ್ರಗ್ಸ್ಅನ್ನು ಸಿಸಿಬಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳು ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಟೆಕ್ಕಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರೆಂದು ತಿಳಿದು ಬಂದಿದೆ.
ಬೆಂಗಳೂರು: ವಾಟ್ಸಾಪ್ ಗ್ರೂಪ್ ಮಾಡಿಕೊಂಡು ಡ್ರಗ್ಸ್ ಮಾರುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಅಕ್ರಮ ವಾಸ್ತವ್ಯ ಹೂಡಿರುವ ನೈಜೀರಿಯನ್ ಪ್ರಜೆಗಳಿಂದ ಡ್ರಗ್ಸ್ ಮಾರಾಟವಾಗುತ್ತಿತ್ತು. ತಡರಾತ್ರಿ ಇಬ್ಬರು ನೈಜೀರಿಯಾ ಪ್ರಜೆಗಳಾದ ಜಾನ್ ಮತ್ತು ಅಂಥೋನಿ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ಹತ್ತು ಲಕ್ಷ ಮೌಲ್ಯದ ಕೊಕೇನ್, ಎಂಡಿಎಂಎ ಡ್ರಗ್ಸ್ನ ಸಿಸಿಬಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳು ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಟೆಕ್ಕಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ವ್ಯವಸ್ಥಿತ ಜಾಲ ಶಂಕೆ ಹಿನ್ನೆಲೆ ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.
ಬೈಕ್ ಕಳ್ಳ ಬಂಧನ ಮನೆಯ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಕದಿಯುತ್ತಿದ್ದ ಕಳ್ಳನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಲೀಂ ಎಂಬಾತ ಬಂಧಿತ ಆರೋಪಿ. ರಸ್ತೆ ಬದಿ ಅನುಮಾನಾಸ್ಪದವಾಗಿ ತಿರುಗುತಿದ್ದವನನ್ನು ಅಡ್ಡಹಾಕಿ ಪೊಲೀಸರು ಮಾಹಿತಿ ಕೇಳಿದರು. ಪೊಲೀಸರು ದಾಖಲಾತಿ ಕೇಳಿದಾಗ ದ್ವಿಚಕ್ರ ವಾಹನದ ಯಾವ ದಾಖಲಾತಿಗಳು ಸಿಗಲಿಲ್ಲ. ಬಳಿಕ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗ ಬೈಕ್ಗಳನ್ನು ಕದಿಯುತ್ತಿದ್ದ ನಿಜ ಬಣ್ಣ ಬಯಲಿಗೆ ಬಂದಿದೆ. ಬಂಧಿತ ಆರೋಪಿಯಿಂದ ಸುಮಾರು ಐದು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ
Coronavirus India Update: ಕಳೆದ 24 ಗಂಟೆಗಳಲ್ಲಿ 96,517 ಕೊವಿಡ್ ಪ್ರಕರಣ ಪತ್ತೆ, 445 ಸಾವು
Bus Strike: ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ಅನುಮಾನ; ನಾಳೆಯಿಂದ ಕರ್ನಾಟಕ ರಾಜ್ಯಾದ್ಯಂತ ಬಸ್ ಬಂದ್?
(CCB police arrested two drug peddlers in Bengaluru)