ರೌಡಿಶೀಟರ್ ಹತ್ಯೆಗೆ ಯೋಜನೆ ರೂಪಿಸಿದ್ದ ಗುಂಪನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆಯ ವೇಳೆ ಈ ಮಾಹಿತಿ ತಿಳಿದುಬಂದಿದೆ. ರೌಡಿಶೀಟರ್ ರೋಹಿತ್ ಕಾಡುಬಿಜಸನಹಳ್ಳಿ ಮೂಲದವನು. ಈತ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಈತನ್ನು ಕೊಲೆಮಾಡಲು ಯೋಜನೆ ರೂಪಿಸಿದ್ದರು.

ರೌಡಿಶೀಟರ್ ಹತ್ಯೆಗೆ ಯೋಜನೆ ರೂಪಿಸಿದ್ದ ಗುಂಪನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು
ಬಂಧಿತರು
Follow us
sandhya thejappa
|

Updated on: May 30, 2021 | 9:15 AM

ಬೆಂಗಳೂರು: ರೌಡಿಶೀಟರ್ ಹತ್ಯೆಗೆ ಯೋಜನೆ ರೂಪಿಸಿದ್ದ ಗುಂಪನ್ನು ಬಂಧಿಸಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿಶೀಟರ್ ರೋಹಿತ್ ಹತ್ಯೆಗೆ ಸೋಮು, ಮಧು, ಸುಮಂತ್, ಮುನಿಯಲ್ಲಪ್ಪನವರ ಗುಂಪು ಸ್ಕೆಚ್ ಹಾಕಿದ್ದು, ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆಯ ವೇಳೆ ಈ ಮಾಹಿತಿ ತಿಳಿದುಬಂದಿದೆ. ರೌಡಿಶೀಟರ್ ರೋಹಿತ್ ಕಾಡುಬಿಜಸನಹಳ್ಳಿ ಮೂಲದವನು. ಈತ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಈತನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದರು.

ಸೋಮ ಹಾಗೂ ರೋಹಿತ್ ಇಬ್ಬರು ಮಾರತ್ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್​ಗಳು. ಎಸಿಪಿ ಹೆಚ್.ಎಸ್.ಪರಮೇಶ್ವರ್ ರವರ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಿದ ವೇಳೆ ಕೊಲೆಯ ಸಂಚಿನ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಲು ತಯಾರಿ ಮಾಡಿಕೊಂಡಿದ್ದ ಮೂರು ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಬಾಲಕನ ಕೊಲೆಗೆ ಸಂಚು ಬೀದರ್: ದುಷ್ಕರ್ಮಿಗಳು ತಾಲೂಕಿನ ಅಣದೂರು ಗ್ರಾಮದ ಬಾಲಕನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ. ಈ ಘಟನೆ ನಡೆದು ನಾಲ್ಕು ದಿನದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಆಕಾಶ ಉಪ್ಪಾರ ಎಂಬ ಬಾಲಕನ ಮುಖಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ದಾಳಿ ಮಾಡುವಾಗ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಾಲಕ ಹೊಲಕ್ಕೆ ಹೋದಾಗ ದಾಳಿ ನಡೆದಿದೆ. ಗಾಯಗೊಂಡ ಆಕಾಶ ಉಪ್ಪಾರ ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ನಾಲ್ಕು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣ ಜನವಾಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಸ್ಕಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಹಫ್ತಾ ವಸೂಲಿ; ತಪ್ಪೊಪ್ಪಿಕೊಂಡ ಸಿಕ್ಕಿಬಿದ್ದ ವ್ಯಕ್ತಿ

(CCB police have detained a group that planned Rowdy Sheeter murder at bengaluru)

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ