ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಸಂತ್ರಸ್ತೆ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರಿಂದ ನೋಟಿಸ್

|

Updated on: May 25, 2021 | 1:01 PM

ಸಂತ್ರಸ್ತೆ ಕುಟುಂಬಸ್ಥರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮೇ 21ರಂದು ಸಂತ್ರಸ್ತೆ ಕುಟುಂಬಸ್ಥರಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯಕುಮಾರ್ರಿಂದ ನೋಟಿಸ್ ನೀಡಿದ್ದು, ಲಾಕ್​ಡೌನ್​ ಬಳಿಕ ವಿಚಾರಣೆಗೆ ಹಾಜರಾಗಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಸಂತ್ರಸ್ತೆ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರಿಂದ ನೋಟಿಸ್
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
Follow us on

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೋಷಕರಿಗೆ ನೋಟಿಸ್ ನೀಡಿದ ಸಿಸಿಬಿ ಪೊಲೀಸರು ಕಿಡ್ನ್ಯಾಪ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ಸಂತ್ರಸ್ತೆ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು.

ಜಿಲ್ಲೆ ನಿಡಗುಂದಿಯಲ್ಲಿರುವ ಸಂತ್ರಸ್ತೆ ಕುಟುಂಬಸ್ಥರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮೇ 21ರಂದು ಸಂತ್ರಸ್ತೆ ಕುಟುಂಬಸ್ಥರಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯಕುಮಾರ್ರಿಂದ ನೋಟಿಸ್ ನೀಡಿದ್ದು, ಲಾಕ್​ಡೌನ್​ ಬಳಿಕ ವಿಚಾರಣೆಗೆ ಹಾಜರಾಗಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬಿಗ್ ಟ್ವಿಸ್ಟ್
ವಿಡಿಯೋದಲ್ಲಿರುವುದು ನಾನಲ್ಲ ಎಂದು ಹೇಳಿಕೊಂಡು ಬರುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದರು. ಅವರ ಸಹೋದರರು ಕೂಡಾ ಹೀಗೆ ಹೇಳುತ್ತಿದ್ದರು. ಆದರೆ ಈ ಬಗ್ಗೆ ಸಚಿವರು ಉಲ್ಟಾ ಹೊಡೆದಂತೆ ಕಾಣಿಸುತ್ತಿದೆ. ಸಿಡಿಯಲ್ಲಿರುವುದು ನಾನೇ ಎಂದು ಅಧಿಕಾರಿಗಳ ಮುಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಈ ಮೂಲಕ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಂತಾಗಿದೆ.

ಇದನ್ನು ಓದಿ

ಕೊವಿಡ್ ಆಸ್ಪತ್ರೆ ನಿರ್ಮಾಣ ಮಾಡಿದರೆ ಸಾಲದು, ಚಿಕಿತ್ಸೆ ನೀಡಲು ಸಿಬ್ಬಂದಿಗಳು ಬೇಕು; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಅವಶ್ಯಕತೆ ಇಲ್ಲ ಅಂತಿರೋ ಬಸವರಾಜ್ ಹೊರಟ್ಟಿ.. ತಜ್ಞರ ಜೊತೆ ಶಿಕ್ಷಣ ಸಚಿವರಿಂದ ಸಭೆ

(CCB police have issued a notice to victims families to attend the hearing at vijayapura)