ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್, ಯುವತಿ ಪರವಾಗಿ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಇನ್ನು ಕಮಲ್ ಪಂತ್ ದೂರು ಪರಿಶೀಲನೆ ಮಾಡುತ್ತಿದ್ದಾರೆ.

ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು
ಸಿಡಿ ಲೇಡಿ
Ayesha Banu

|

Mar 26, 2021 | 4:32 PM

ಬೆಂಗಳೂರು:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್, ಯುವತಿ ಪರವಾಗಿ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಇನ್ನು ಕಮಲ್ ಪಂತ್ ದೂರು ಪರಿಶೀಲನೆ ಮಾಡುತ್ತಿದ್ದಾರೆ.

ದೂರಿನಲ್ಲಿರುವ ವಿವರ ಸರ್ಕಾರಿ ಕೆಲಸ ಕೊಡಿಸುವುದಾಗಿ ಲೈಂಗಿಕ ಸಂಪರ್ಕ ನಡೆಸಿದ್ಧಾರೆ. ರಮೇಶ್​ ವಿಡಿಯೋ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿದ್ದಾರೆ. ನಗ್ನವಾಗಿ ಮಾತನಾಡಲು ಪುಸಲಾಯಿಸಿದ ಆರೋಪವನ್ನು ಸಿಡಿ ಲೇಡಿ ಮಾಡಿದ್ಧಾರೆ. ಕೆಲಸ ಕೊಡಿಸದೇ ವಂಚಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಮಾಡಿ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದೂರು ನೀಡಿದ್ಧಾರೆ. ಪ್ರಭಾವ ಬೀರಿ ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿದ್ದು ಕೆಲಸದ ಬದಲಾಗಿ ಎಲ್ಲಾ ರೀತಿ ಸಹಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅವರ ಜತೆಗೆ ಸಹಕರಿಸಿ ಖುಷಿ ನೀಡಲು ಒತ್ತಾಯಿಸಿದ್ರು. ಕರ್ನಾಟಕ ಭವನದಲ್ಲಿದ್ದೇನೆಂದು ವಿಡಿಯೋ ಕಾಲ್ ಮಾಡಿ ನಗ್ನಳಾಗಿ ದೇಹದ ಅಂಗಾಂಗ ತೋರಿಸಲು ಹೇಳಿದ್ರು ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಆರೋಪ. ಅವರು ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಅವರ ಅಪಾರ್ಟ್‌ಮೆಂಟಲ್ಲೇ 2 ಬಾರಿ ಲೈಂಗಿಕ ಕ್ರಿಯೆ. ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಆರೋಪ. ಅವರಿಗೆ ಎದುರು ಮಾತಾಡಲು ಭಯ ಆಗಿ ಕೇಳಿದ್ದೇನೆ. ಕೊನೆಗೆ ಕೆಲಸ ಕೇಳಿದ್ರೆ ಸ್ವಲ್ಪ ಹಣ ಕೊಡುತ್ತೇನೆ ಅಂದ್ರು. ಕೆಲಸದ ಕಥೆ ಆಮೇಲೇ ನೋಡೋಣ ಎಂದಿದ್ದ ರಮೇಶ್. ಯಾಕೆ ಕೆಲಸ ಕೊಡುತ್ತಿಲ್ಲ ಎಂದರೆ ಅಶ್ಲೀಲವಾಗಿ ಬೈದರು. ಅಶ್ಲೀಲ ಪದಗಳಿಂದ ನಿಂದಿಸಿ ನನ್ನನ್ನು ವಾಪಸ್ ಕಳಿಸಿದ್ರು. ಇದಾದ ನಂತರದಲ್ಲಿ ನನ್ನ ಅಶ್ಲೀಲ ವಿಡಿಯೋ ಪ್ರಸಾರ. ಅವರ ವಿರುದ್ಧ ದೂರು ನೀಡದಂತೆ ರಮೇಶ್ ಕುತಂತ್ರ. ನನಗೂ ನನ್ನ ಕುಟುಂಬದ ಸದಸ್ಯರಿಗೂ ಜೀವಬೆದರಿಕೆ. ರಮೇಶ್ ಜಾರಕಿಹೊಳಿ ಹಣವಂತರು, ಪ್ರಭಾವಿಗಳು. ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಆರೋಪ. ದೂರು ನೀಡದಂತೆ ತಡೆಯಲು ನನ್ನನ್ನು ಕೊಲ್ಲುವ ಯತ್ನ

ನಾನು ಎದುರು ಮಾತನಾಡಲು ಹೆದರಿ ಅವರು ಕೇಳಿದಂತೆ ಮಾಡಿರುತ್ತೇನೆ. ನಂತರ ಸರ್ಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ವಲ್ಪ ಹಣ ಬೇಕಾದರೆ ಕೇಳು ಕೆಲಸದ ಕತೆ ಆಮೇಲೆ ನೋಡೋಣ ಎಂದು ಅವಾಜ್ ಮಾಡುತ್ತಿದ್ದರು.

ನಾನು ಯಾವಾಗ ಅವರಿಗೆ ನನ್ನನ್ನು ಹೇಗೆ ಬೇಕೋ ಹಾಗೆ ಬಳಸಿಕೊಂಡು, ಈಗ ಯಾಕೆ ಕೆಲಸ ಕೊಡುತ್ತಿಲ್ಲ ಎಂದು ಕೇಳಿದಾಗ ****** ಸೊಂಟದಲ್ಲಿ ಕುರಿದು ಇಟ್ಟುಕೊಂಡು ಬಂದ್ರೆ ಕೆಲಸ ಕೊಡೋಕೆ ಆಗುತ್ತಾ..? ಎಂದು ಬೈಯ್ದು ಕಳಿಸಿದರು. ಇದಾದ ನಂತರ ಅವರು ನನ್ನೊಂದಿಗೆ ಮಾತನಾಡಿದ ಮತ್ತು ಲೈಂಗಿಕ ಸಂಭೋಗ ನಡೆಸಿದ ಅಶ್ಲೀಲ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ನಾನು ಇವರ ವಿರುದ್ಧ ದೂರು ನೀಡದಂತೆ ಈ ರೀತಿ ಕುತಂತ್ರವನ್ನ ರಮೇಶ್ ಜಾರಕಿಹೊಳಿ ಮಾಡಿರುತ್ತಾರೆ. ಹಣವಂತರು, ಪ್ರಭಾವಿಗಳಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ನನಗೂ ಮತ್ತು ನನ್ನ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಇದೆ.

ನಾನು ದೂರು ನೀಡದಂತೆ ತಡೆಯಲು ಮತ್ತು ಅವರ ಕೈಗೆ ಸಿಕ್ಕರೆ ಕೊಂದುಬಿಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ. ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಕೆಲಸ ಕೊಡಿಸದೇ ಮೋಸ ಮಾಡಿ, ಅಶ್ಲೀಲವಾಗಿ ಬಳಸಿಕೊಂಡು, ನಿಂದಿಸಿ ಕೊಲೆ ಮಾಡಿಸಲು ಪ್ರಯತ್ನ ಮಾಡುತ್ತಿರುವ ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ. ನಾನು ನೇರವಾಗಿ ಯಾವ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನ ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ, ತೇಜೋವಧೆ ಮಾಡುತ್ತಿದ್ದಾರೆ. ಹಾಗೂ ನನಗೆ ಸಹಾಯ ಮಾಡಿದವರಿಗೆ, ಮಾಡುತ್ತಿರುವವರಿಗೆ ಟಾರ್ಗೆಟ್ ಮಾಡಿ ಅವರ ಮನೆ ಮತ್ತು ಕುಟುಂಬಸ್ಥರಿಗೆ ಹಿಂಸೆ ಕೊಡುತ್ತಿರುವುದರಿಂದ ಬಹಳ ನೋವಾಗಿದೆ.

ನನಗೆ ಭದ್ರತೆ ಇಲ್ಲದ ಕಾರಣ ಕೈಯಲ್ಲಿ ಬರೆದು ಈ ದೂರನ್ನ ನನಗೆ ಪರಿಚಿತ ವಕೀಲರಾದ ಜಗದೀಶ್ ಅವರ ಮೂಲಕ ಕಳುಹಿಸುತ್ತಿದ್ದೇನೆ. ದಯವಿಟ್ಟು ನನಗೆ ಆಗುತ್ತಿರುವ ಮಾನಸಿಕ ಹಿಂಸೆ ಮತ್ತು ನನ್ನ ಕುಟುಂಬದ ಸದಸ್ಯರು ಎದುರಿಸುತ್ತಿರುವ ಒತ್ತಡ, ಅವರನ್ನು ಆತ್ಮಹತ್ಯೆಗೆ ಯತ್ನಿಸುವಂತೆ ಮಾಡಿದ್ದು, ತಾವು ರಮೇಶ್ ಜಾರಕಿಹೊಳಿ ಮತ್ತು ಅವರ ಕಡೆಯವರಿಂದ ನಮಗೆ ಯಾವುದೇ ಅಪಾಯವಾಗದಂತೆ ರಕ್ಷಣೆ ನೀಡಬೇಕೆಂದು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ.

ನಿಮ್ಮ ವಿಶ್ವಾಸಿ ದೂರುದಾರ ಯುವತಿ

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada