AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ

Bypolls for 8 assembly constituencies: ಆರು ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 9 ಮತ್ತು 29ರಂದು ಉಪಚುನಾವಣೆಗಳು ನಡೆಯಲಿವೆ. ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದ್ದಾರೆ.

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ
ಮತದಾನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 15, 2026 | 6:15 PM

Share

ನವದೆಹಲಿ, ಮಾರ್ಚ್ 15: ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ (Assembly Elections) ಏಪ್ರಿಲ್ 9ರಿಂದ 29ರವರೆಗೂ ನಡೆಯಲಿದೆ. ಅದೇ ವೇಳೆ, ಆರು ರಾಜ್ಯಗಳಲ್ಲಿನ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ಆಗಲಿದೆ. ಏಪ್ರಿಲ್ 9 ಮತ್ತು 29ರಂದು ಈ ಉಪಚುನಾವಣೆ (By Polls) ನಡೆಯುತ್ತದೆ. ಮೇ 4ರಂದು ಎಲ್ಲಾ ಕ್ಷೇತ್ರಗಳಿಗೆ ಚುನಾವಣಾ ಫಲಿತಾಂಶ (Election Results) ಪ್ರಕಟವಾಗುತ್ತದೆ.

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಗೋವಾ, ನಾಗಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ಕರ್ನಾಟಕ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಗೋವಾ ರಾಜ್ಯಗಳಲ್ಲಿ ಏಪ್ರಿಲ್ 9ರಂದು ಉಪಚುನಾವಣೆ ಆಗುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಏಪ್ರಿಲ್ 23ರಂದು ಉಪಚುನಾವಣೆ ನಡೆಯುತ್ತದೆ.

ಇದನ್ನೂ ಓದಿ: ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

ಕರ್ನಾಟಕದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉಪಚುನಾವಣೆ ಆಗುತ್ತಿದೆ. ಎಚ್. ವೈ. ಮೇಟಿ ಅವರ ನಿಧನದಿಂದ ಬಾಗಲಕೋಟೆ ವಿಧಾನಸಭಾ ಸ್ಥಾನ ತೆರವಾಗಿದೆ. ಇನ್ನು, ದಾವಣಗೆರೆ ದಕ್ಷಿಣ ಕ್ಷೇತ್ರವು ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿತ್ತು. ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ಆಗುತ್ತದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 24 ಕೊನೆಯ ದಿನವಾಗಿದೆ.

ಉಪಚುನಾವಣೆ ಎದುರಿಸಲಿರುವ ಎಂಟು ಕ್ಷೇತ್ರಗಳು

  1. ಕರ್ನಾಟಕ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ
  2. ಮಹಾರಾಷ್ಟ್ರ: ರಾಹೂರಿ ಮತ್ತು ಬಾರಾಮತಿ
  3. ಗೋವಾ: ಪೋಂಡ
  4. ಗುಜರಾತ್: ಉಮ್ರದ್
  5. ನಾಗಾಲ್ಯಾಂಡ್: ಕೋರಿಡಾಂಗ್ (ಎಸ್​ಟಿ)
  6. ತ್ರಿಪುರ: ಧರ್ಮನಗರ್

ಇದನ್ನೂ ಓದಿ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಇದೇ ವೇಳೆ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕೇರಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಚುನಾವಣೆ ಆಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us