Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಏರಿಕೆ, ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ 435 ಹುಲಿಗಳು: ಈಶ್ವರ ಖಂಡ್ರೆ

ಅಂತಾರಾಷ್ಟ್ರೀಯ ಹುಲಿದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರಗಳನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಂದು (ಜುಲೈ 27) ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಏರಿಕೆ, ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ 435 ಹುಲಿಗಳು: ಈಶ್ವರ ಖಂಡ್ರೆ
ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳ
Follow us
Rakesh Nayak Manchi
|

Updated on:Jul 27, 2023 | 7:06 PM

ಬೆಂಗಳೂರು, ಜು.27: ಹುಲಿಗಳ ಸಂರಕ್ಷಣೆಗಾಗಿ ಕೈಗೊಂಡ ವಿವಿಧ ಉಪಕ್ರಮಗಳಿಂದಾಗಿ ಅವುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ. ಅಂತಾರಾಷ್ಟ್ರೀಯ ಹುಲಿದಿನಕ್ಕೂ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ (Tiger Census) ವಿವರ ಬಿಡುಗಡೆ ಮಾಡಿದ ನಂತರ ಸಚಿವರು ಮಾತನಾಡಿದರು.

ರಾಷ್ಟ್ರೀಯ ಹುಲಿ ಪ್ರಾಧಿಕಾರ (NTCA) ಮಾರ್ಗಸೂಚಿ ಪ್ರಕಾರ, ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. ಇದರ ಭಾಗವಾಗಿ ದೇಶಾದ್ಯಂತ ಆನೆ, ಮಾಂಸಹಾರಿ ಮತ್ತು ಸಸ್ಯಹಾರಿ ಪ್ರಾಣಿಗಳ ಗಣತಿಯನ್ನೂ ನಡೆಸಲಾಗುತ್ತದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಪಶ್ಚಿಮ ಘಟ್ಟದ ಹೆಚ್ಚಿನ ಭಾಗ ಹೊಂದಿರುವ ಕರ್ನಾಟಕವು ಹುಲಿಗಳ ಸಂರಕ್ಷಣೆಯಲ್ಲಿ ಚೂಣಿಯಲ್ಲಿದ್ದು, 2021-22ರ ಅವಧಿಯಲ್ಲಿ ಹುಲಿ ಗಣತಿಯನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಲಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಭದ್ರಾ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹಾಗೂ ಕಾಳಿ ಕಾನನ ಸೇರಿದಂತೆ 37 ವನ್ಯಜೀವಿ ಧಾಮಗಳಲ್ಲಿ ಒಟ್ಟು 37 ವಿಭಾಗದಲ್ಲಿ ನಡೆಸಲಾಗಿದೆ ಎಂದರು.

ಈ ಗಣತಿಗೆ ಕ್ಯಾಮೆರಾ ಟ್ರ್ಯಾಪ್ ಮತ್ತು ಲೈನ್ ಟ್ರನ್ಸ್ಯಾಕ್ಟ್ ವಿಧಾನ ಬಳಸಲಾಗಿದೆ ಎಂದು ವಿವರಿಸಿದ ಅರಣ್ಯ ಸಚಿವರು, ರಾಜ್ಯದ ಎಲ್ಲ ಸಂರಕ್ಷಿತ ಅರಣ್ಯಗಳಲ್ಲಿ ಅಳವಡಿಸಲಾಗಿದ್ದ 5399 ಕ್ಯಾಮೆರಾ ಟ್ರ್ಯಾಪ್​ನಲ್ಲಿ 66 ಲಕ್ಷಕ್ಕೂ ಹೆಚ್ಚು ವನ್ಯ ಜೀವಿಗಳ ದೃಶ್ಯ ಸೆರೆಯಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಹುಲಿಗಳ ಚಲನವಲನ, ಪ್ರಾದೇಶಿಕ ಪರಿಮಿತಿ ಹುಲಿಗಳ ಮೈಮೇಲಿನ ಪಟ್ಟೆಗಳ ಆಧಾರದ ಮೇಲೆ ಹುಲಿಗಳ ಸಂಖ್ಯೆಯನ್ನು ಲೆಕ್ಕಹಾಕಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ: ಸಿಂಹದ ಮರಿಗಳಿಗೆ ನಾಮಕರಣ

2018ರಲ್ಲಿ ನಡೆದಿದ್ದ ಅಖಿಲ ಭಾರತ ಹುಲಿ ಗಣತಿಯ ಪ್ರಕಾರ, ಕರ್ನಾಟಕದಲ್ಲಿ ನಡೆದ ಕ್ಯಾಮರಾ ಟ್ರ್ಯಾಪ್​ನಲ್ಲಿ 404 ಹುಲಿಗಳು ಪತ್ತೆಯಾಗಿದ್ದವು. ಇದನ್ನು ವನ್ಯಜೀವಿ ಸಂಖ್ಯಾಶಾಸ್ತ್ರದ ಪ್ರಕಾರ ವಿಶ್ಲೇಷಿಸಿದಾಗ ರಾಜ್ಯದಲ್ಲಿ 475 ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿತ್ತು. 2022ರಲ್ಲಿ ರಾಜ್ಯದಲ್ಲಿ 435 ಹುಲಿಗಳು ಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದರು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 612, ಭದ್ರಾದಲ್ಲಿ 330, ಬಿಆರ್​ಟಿಯಲ್ಲಿ 288, ಕಾಳಿಯಲ್ಲಿ 448, ನಾಗರಹೊಳೆಯಲ್ಲಿ 502 ಕ್ಯಾಮೆರಾ ಪಾಯಿಂಟ್ ಅಳವಡಿಸಲಾಗಿತ್ತು. ಇದರಲ್ಲಿ 376 ಅನನ್ಯ (ವಿಶಿಷ್ಟ) ಹುಲಿಗಳು ಪತ್ತೆಯಾಗಿವೆ ಎಂದು ಸಚಿವ ಖಂಡ್ರೆ ಹೇಳಿದರು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ 80, ಬೆಳಗಾವಿ ವಿಭಾಗದಲ್ಲಿ 119, ಭದ್ರಾವತಿ ವಿಭಾಗದಲ್ಲಿ 121, ಕಾವೇರಿ ವನ್ಯಜೀವಿ ಧಾಮದಲ್ಲಿ 473, ಚಿಕ್ಕಮಗಳೂರು ವನ್ಯಜೀವಿ ಅರಣ್ಯದಲ್ಲಿ 41, ಹಳಿಯಾಳದಲ್ಲಿ 106, ಕಾರವಾರ ವಿಭಾಗದಲ್ಲಿ 135, ಕೊಪ್ಪ ವನ್ಯಜೀವಿಧಾಮದಲ್ಲಿ 50, ಕುದುರೆಮುಖ ವಿಭಾಗದಲ್ಲಿ 173, ಮಡಿಕೇರಿ (ಬ್ರಹ್ಮಗಿರಿ, ಪುಷ್ಪಗಿರಿ ಮತ್ತು ತಲಕಾವೇರಿ) ವಿಭಾಗದಲ್ಲಿ 175, ಮಲೆ ಮಹದೇಶ್ವರ ಬೆಟ್ಟದಲ್ಲಿ 432, ಮೈಸೂರು ವಿಭಾಗದಲ್ಲಿ 36, ಶಿವಮೊಗ್ಗ ವನ್ಯಜೀವಿ ಧಾಮದಲ್ಲಿ 182, ಶಿರಸಿ ವಿಭಾಗದಲ್ಲಿ 107, ವಿರಾಜಪೇಟೆ ವಿಭಾಗದಲ್ಲಿ 111, ಯಲ್ಲಾಪುರ ವಿಭಾಗದಲ್ಲಿ 94 ಸೇರಿ ರಾಜ್ಯದಲ್ಲಿ ಒಟ್ಟಾರೆ 4786 ಕ್ಯಾಮರಾ ಪಾಯಿಂಟ್ ಅಳವಡಿಸಲಾಗಿತ್ತು. ಈ ಎಲ್ಲ ಕ್ಯಾಮರಾಗಳಲ್ಲಿ 1.61 ಲಕ್ಷದಷ್ಟು ರಾತ್ರಿಯ ವೇಳೆ ಸಂಚಾರದ ಚಿತ್ರೀಕರಣ ಪ್ರಯತ್ನ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ನಮ್ಮ ದೇಶದಲ್ಲಿ ಇನ್ನೂ ಅರಣ್ಯ ಸುರಕ್ಷಿತವಾಗಿ ಉಳಿದಿರುವುದಕ್ಕೆ ಭಾರತದ ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಕಾರಣ ಎಂದರೆ ತಪ್ಪಾಗಲಾರದು. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರು ನಿಜವಾದ ಪರಿಸರ ಪ್ರೇಮಿಗಳಾಗಿದ್ದರು. ಅವರು ಅರಣ್ಯ ಸಂರಕ್ಷಣಾ ಕಾಯ್ದೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅರಣ್ಯ ಹಕ್ಕು ಕಾಯ್ದೆಗಳನ್ನು ಅನುಷ್ಠಾನಕ್ಕೆ ತಂದರು. ಇಲ್ಲವಾಗಿದ್ದರೆ, ಈ ವೇಳೆಗೆ ಅರಣ್ಯವೂ ಇರುತ್ತಿರಲಿಲ್ಲ. ಅರಣ್ಯವಾಸಿಗಳಿಗೆ ಅವರ ಹಕ್ಕೂ ದೊರಕುತ್ತಿರಲಿಲ್ಲ. ವನ್ಯಮೃಗಗಳೂ ಉಳಿಯುತ್ತಿರಲಿಲ್ಲ ಎಂದರು.

ಪ್ರಪಂಚದಲ್ಲೇ ಮೊದಲ ಬಾರಿಗೆ ಹುಲಿ ಗಣತಿ ನಡೆದಿದ್ದು ಭಾರತದಲ್ಲೇ. ಜಾರ್ಖಂಡ್‌ನ ಪಲ್ಮಾವ್ ಹುಲಿ ರಕ್ಷಿತಾರಣ್ಯದಲ್ಲಿ ಪ್ರಾಯೋಗಿಕ ಗಣತಿ ನಡೆದಿತ್ತು. 1972ರಲ್ಲಿ ವನ್ಯಜೀವಿ ಕಾಯ್ದೆ ಜಾರಿಗೆ ಬಂದ ನಂತರ 1972ರಿಂದ ಹುಲಿ ಗಣತಿಯನ್ನು ಆರಂಭಿಸಲಾಯಿತು. ಪ್ರತಿ 4 ಸಾಲಿನಲ್ಲಿ ಒಮ್ಮೆ ಗಣತಿ ಕಾರ್ಯ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Thu, 27 July 23

ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!