AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಬರ ಪರಿಹಾರದ ಹಣ ಸಾಲಕ್ಕೆ ಜಮೆ: ಬ್ಯಾಂಕ್​ಗಳು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿತ್ತು. ಬರ ಪರಿಹಾರದ ಹಣ ಬಿಡುಗಡೆಯಾದರೂ ಅನೇಕ ರೈತರ ಕೈಗೆ ಅದು ಸಿಗುತ್ತಿಲ್ಲ. ಕಾರಣ ಅವರು ಸಾಲ ಮಾಡಿರುವುದು. ಬ್ಯಾಂಕ್​ಗಳು ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿವೆ.

ಕೇಂದ್ರದ ಬರ ಪರಿಹಾರದ ಹಣ ಸಾಲಕ್ಕೆ ಜಮೆ: ಬ್ಯಾಂಕ್​ಗಳು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಕುಮಾರಸ್ವಾಮಿ
Ganapathi Sharma
|

Updated on: May 16, 2024 | 10:01 AM

Share

ಬೆಂಗಳೂರು, ಮೇ 16: ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು (Drought relief money) ಬ್ಯಾಂಕ್​ಗಳು ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಬ್ಯಾಂಕ್​ಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ ಎಂದಿದ್ದಾರೆ.

ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಎಕ್ಸ್​ ಸಂದೇಶ

ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್​​ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ಉಲ್ಲೇಖಿಸಿದ್ದಾರೆ.

ಕೈಗೆ ಬಂದ ತುತ್ತು ಬಾಯಿಗಿಲ್ಲ!

ಬರ ಪರಿಹಾರದ ಹಣ ಬಿಡುಗಡೆಯಾದರೂ ಅನೇಕ ರೈತರ ಕೈಗೆ ಅದು ಸಿಗುತ್ತಿಲ್ಲ. ಕಾರಣ ಅವರು ಸಾಲ ಮಾಡಿರುವುದು. ಬ್ಯಾಂಕ್​ಗಳು ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿವೆ. ಈ ಬಗ್ಗೆ ರಾಜ್ಯ ಹಲವು ಕಡೆಗಳಿಂದ ವರದಿಯಾಗಿದೆ. ಅನೇಕ ರೈತರಿಗೆ ದೊರೆಯಬೇಕಿದ್ದ ಬರ ಪರಿಹಾರದ ಹಣ ಸಾಲದ ಖಾತೆಗೆ ಜಮೆಯಾಗುತ್ತಿದೆ.

ಇದನ್ನೂ ಓದಿ: ಮಡಿಕೇರಿ: ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರ ಕಡಿದ ಆರೋಪ, ತನಿಖೆಗೆ ಆದೇಶಿಸಿದ ಸಚಿವ ಖಂಡ್ರೆ

ಕಳೆದ ವರ್ಷ ಮುಂಗಾರು ಮಳೆಯ ಕೊರತೆಯಿಂದ ರಾಜ್ಯವು ತೀವ್ರ ಬರಗಾಲಕ್ಕೆ ತುತ್ತಾಗಿತ್ತು. ಪರಿಣಾಮವಾಗಿ ರೈತರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿತ್ತು. ಆದರೆ, ಅದೀಗ ರೈತರ ಕೈಗೆ ಸಿಗದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ