AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವ ಸಂಪುಟದಿಂದ ನಿನ್ನೆ 2 ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಎಪಿಎಂಸಿಗಳ ಮೂಲ ಸೌಕರ್ಯ ಅಭಿವೃದ್ಧಿಗೆ 2 ಕೋಟಿವರೆಗೆ ಸಾಲ ನೀಡಲಾಗುತ್ತದೆ. ಈವರೆಗೆ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸಾಲದ ಅವಕಾಶ ನೀಡಲಾಗುತ್ತಿತ್ತು. ಆದರೆ ಭವಿಷ್ಯದಲ್ಲಿ ಖಾಸಗಿ ಸಂಸ್ಥೆಗಳಿಗೆ, ರೈತರ ಸಂಘಗಳು, ಸಹಕಾರ ಸಂಸ್ಥೆಗಳಿಗೂ ಸಾಲ ಪಡೆಯಲು ಅವಕಾಶ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 09, 2021 | 3:54 PM

Share

ದೆಹಲಿ: ಕೇಂದ್ರ ಸರ್ಕಾರದ ಸಂಪುಟದಲ್ಲಿ ಕೃಷಿ ಖಾತೆಯ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಎಪಿಎಂಸಿ ಮುಚ್ಚಲಾಗುತ್ತೆಂಬ ಆರೋಪವನ್ನೂ ಕೇಂದ್ರ ಸರ್ಕಾರದ ಮೇಲೆ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ನಿರ್ಧಾರದ ಮೂಲಕ ಎಪಿಎಂಸಿ ಬಗೆಗಿನ ಅಭಿವೃದ್ಧಿಯ ಬದ್ಧತೆ ಸ್ಪಷ್ಟವಾಗಿದೆ ಎಂದು ಸಮರ್ಥಿಸಿಕೊಂಡರು.

ಕೇಂದ್ರ ಸಚಿವ ಸಂಪುಟದಿಂದ ನಿನ್ನೆ 2 ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಎಪಿಎಂಸಿಗಳ ಮೂಲ ಸೌಕರ್ಯ ಅಭಿವೃದ್ಧಿಗೆ 2 ಕೋಟಿವರೆಗೆ ಸಾಲ ನೀಡಲಾಗುತ್ತದೆ. ಈವರೆಗೆ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸಾಲದ ಅವಕಾಶ ನೀಡಲಾಗುತ್ತಿತ್ತು. ಆದರೆ ಭವಿಷ್ಯದಲ್ಲಿ ಖಾಸಗಿ ಸಂಸ್ಥೆಗಳಿಗೆ, ರೈತರ ಸಂಘಗಳು, ಸಹಕಾರ ಸಂಸ್ಥೆಗಳಿಗೂ ಸಾಲ ಪಡೆಯಲು ಅವಕಾಶ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಇನ್ನು ಮುಂದೆ ಕೊಬ್ಬರಿ ರಫ್ತು ಮಾಡಲು ಅವಕಾಶ ಒದಗಿಸಲಾಗಿದೆ. ತೆಂಗು ಅಭಿವೃದ್ಧಿ ಮಂಡಳಿಗೆ ಇನ್ಮುಂದೆ ರೈತರ ಆಯ್ಕೆ ನಡೆಯಲಿದೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿವರಿಸಿದರು. ಶಿಥಲೀಕರಣ ಘಟಕ ಮತ್ತು ಆಹಾರ ಸಂಸ್ಕರಣೆ ಘಟಕ ಸೇರಿ ಹಲವು ಸುಮಾರು 25 ಘಟಕಗಳ ನಿರ್ಮಾಣಕ್ಕೆ ಹೆಚ್ಚಿನ ಸಾಲ ಸೌಲಭ್ಯ ನೀಡಿದೆ. ಖಾಸಗಿ ಸಂಸ್ಥೆಗಳು ಇನ್ಮುಂದೆ ಈ ಘಟಕಗಳನ್ನು ಆರಂಭಿಸಬಹುದು. ಇದರಿಂದ ಎಪಿಎಂಸಿ ಅಭಿವೃದ್ಧಿ ಜೊತೆಗೆ ಖಾಸಗಿ ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.

ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದಿದ್ದ ಸಂಸದೆ ಸದಾನಂದಗೌಡರ ಬದಲಿಗೆ ನಾನು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿಲ್ಲ. ಡಿ.ವಿ.ಸದಾನಂದಗೌಡರಿಗೆ ಹೆಚ್ಚಿನ ಅನುಭವವಿದೆ. ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನನಗೆ ಯಾವುದೇ ಕೋಟಾದಿಂದ ಸಚಿವಸ್ಥಾನ ಸಿಕ್ಕಿಲ್ಲ. ಬಹುಶಃ ಪಕ್ಷನಿಷ್ಠೆಯಿಂದ ಸಚಿವ ಸ್ಥಾನ ಸಿಕ್ಕಿರಬಹುದು ಎಂದು ಹೇಳಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಯಡಿಯೂರಪ್ಪ ಅವರ ಆಪ್ತೆ. ಬಿಜೆಪಿ ಕರ್ನಾಟಕ ಘಟಕದ ಉಪಾಧ್ಯಕ್ಷೆ. ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದಾಗ ಬಿಗಿ ಆಡಳಿತದಿಂದ ಹೆಸರುವಾಸಿಯಾಗಿದ್ದರು. ಹಲವು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದರು. ಹಿಂದುತ್ವ ಪರ ಚಿಂತನೆ, ಆರ್​ಎಸ್​ಎಸ್​ಗೆ ಅಚಲ ನಿಷ್ಠೆಯಿಂದಲೂ ಶೋಭಾ ಕರಂದ್ಲಾಜೆ ಅವರನ್ನು ಗುರುತಿಸಲಾಗುತ್ತದೆ.

ಇದನ್ನೂ ಓದಿ: 

Shobha Karandlaje: ನಗುಮುಖದ ಗಟ್ಟಿಗಿತ್ತಿ, ಹಿಂದುತ್ವ ಪರ ಚಿಂತನೆಯ ಮಹಿಳಾ ದನಿ ಶೋಭಾ ಕರಂದ್ಲಾಜೆ

ಶೋಭಾ ಕರಂದ್ಲಾಜೆಗಿಂತಲೂ ಮೊದಲು ಕೇಂದ್ರದಲ್ಲಿ ಮಂತ್ರಿಗಿರಿ ಪಡೆದ ಕರ್ನಾಟಕದ ಮಹಿಳಾ ರಾಜಕಾರಣಿಗಳು ಇವರು..

(Central agriculture Minister of state Shobha Karandlaje press meet after taking oath)

Published On - 3:45 pm, Fri, 9 July 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ