ಎಸ್​ಟಿ ಸೋಮಶೇಖರ್ ಸಹಕಾರ ವರದಿಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಪ್ರಶಂಸೆ

ಕೇಂದ್ರ ಸರ್ಕಾರ ಈಚೆಗಷ್ಟೇ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ ಸಂದರ್ಭದಲ್ಲಿ ಕರ್ನಾಟಕದ ಸಹಕಾರ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್ ಇಲ್ಲಿನ ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ಅಮಿತ್ ಶಾಗೆ ವರದಿ ಸಲ್ಲಿಸಿದ್ದರು.

ಎಸ್​ಟಿ ಸೋಮಶೇಖರ್ ಸಹಕಾರ ವರದಿಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಪ್ರಶಂಸೆ
ಸಚಿವ ಎಸ್​.ಟಿ ​ಸೋಮಶೇಖರ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Jul 27, 2021 | 5:37 PM

ಬೆಂಗಳೂರು: ಕರ್ನಾಟಕದಲ್ಲಿ ಸಹಕಾರ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್.ಟಿ. ಸೋಮಶೇಖರ್ ಕಾರ್ಯವೈಖರಿಯನ್ನು ಕೇಂದ್ರ ಗೃಹಮಂತ್ರಿ ಹಾಗೂ ಸಹಕಾರ ಸಚಿವರೂ ಆದ ಅಮಿತ್ ಶಾ ಶ್ಲಾಘಿಸಿದ್ದಾರೆ. ಅಲ್ಲದೆ, ಜೊತೆಯಾಗಿ ದೇಶದಲ್ಲಿ ಸಹಕಾರಿ ಕ್ಷೇತ್ರವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಈಚೆಗಷ್ಟೇ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ ಸಂದರ್ಭದಲ್ಲಿ ಕರ್ನಾಟಕದ ಸಹಕಾರ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್ ಇಲ್ಲಿನ ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ಅಮಿತ್ ಶಾಗೆ ವರದಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ನಿಮಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸಹಕಾರದಿಂದ ಸಮೃದ್ಧಿ’ (ಸಹಕಾರ್ ಸೇ ಸಮೃದ್ಧಿ) ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದು, ಇದರ ಮೂಲಕ ಎಲ್ಲ ವರ್ಗದ ಜನರನ್ನೂ ತಲುಪಬೇಕು. ಸಹಕಾರ ಕ್ಷೇತ್ರದ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯಾಗಲಿದೆ. ಅಲ್ಲದೆ, ಭಾರತದ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ನನಗಿದೆ. ಸಹಕಾರ ವಲಯವು ಮತ್ತಷ್ಟು ವೃದ್ಧಿಯಾಗಬೇಕು. ಜೊತೆಗೆ ಇನ್ನಷ್ಟು ವಿಸ್ತರಣೆ ಮಾಡಬೇಕಿದೆ. ನಿಮ್ಮ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಸದಾ ಇರಲಿದೆ. ಸಹಕಾರ ವಲಯದ ಮೂಲಕ ಅಭಿವೃದ್ಧಿಯ ಪರ್ವ ಕಾಣಬೇಕು ಎಂಬ ನಿಮ್ಮ ಆಶಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಪತ್ರದ ಸಾರಾಂಶ ಹೀಗಿದೆ ಕರ್ನಾಟಕದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ನಿಮಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ತಾವು ಕಳುಹಿಸಿರುವ ವರದಿಯನ್ನು ಓದಿದ್ದೇನೆ. ಅದರಲ್ಲಿ ವಿಚಾರಗಳ ಬಗ್ಗೆ ನನಗೆ ಅತೀವ ಖುಷಿಯಾಗಿದೆ. ನಿಮ್ಮ ವರದಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿಯೂ ನಾನು ಮಾತುಕತೆ ನಡೆಸಿದ್ದೇನೆ. ಮಾನ್ಯ ಪ್ರಧಾನಿಯವರ ಐತಿಹಾಸಿಕ ‘ಸಹಕಾರದಿಂದ ಸಮೃದ್ಧಿ’ ಯೋಜನೆಯು ಎಲ್ಲ ವರ್ಗದ ಜನರಿಗೂ ತಲುಪಬೇಕು. ಸಹಕಾರ ಕ್ಷೇತ್ರದ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯಾಗಲಿದೆ. ಭಾರತದ ಸಹಕಾರಿ ಕ್ಷೇತ್ರದ ಮೂಲಕ ಆಗುತ್ತಿರುವ ಆರ್ಥಿಕ ಬೆಳವಣಿಗೆಯು ಉಳಿದ ದೇಶಗಳಿಗೆ ಮಾದರಿಯಾಗಿದೆ. ನಮ್ಮ ಸಹಕಾರ ಸಚಿವಾಲಯ ಸೇರಿದಂತೆ ಸಹಕಾರ ವಲಯದಲ್ಲಿ ಕೆಲಸ ಮಾಡುವ ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಜವಾಬ್ದಾರಿಯುತ ಭಾವನೆಯಿಂದ ಹಾಗೂ ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಸಹಕಾರಿ ಕ್ಷೇತ್ರದ ಈ ಐತಿಹಾಸಿಕ ನಿರ್ಣಯ ಮತ್ತು ಅದಕ್ಕೆ ಸಂಬಂಧಿಸಿದ ಜನರನ್ನು ಸಶಕ್ತಗೊಳಿಸಲಿದೆ. ಅಲ್ಲದೆ, ಭಾರತದ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ನನಗಿದೆ. ಸಹಕಾರ ವಲಯವು ಮತ್ತಷ್ಟು ವೃದ್ಧಿಯಾಗಬೇಕು. ಜೊತೆಗೆ ಇನ್ನಷ್ಟು ವಿಸ್ತರಣೆ ಮಾಡಬೇಕಿದೆ. ನಿಮ್ಮ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಸದಾ ಇರಲಿದೆ. ಸಹಕಾರ ವಲಯದ ಮೂಲಕ ಅಭಿವೃದ್ಧಿಯ ಪರ್ವ ಕಾಣಬೇಕು ಎಂಬ ನಿಮ್ಮ ಆಶಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ, ಎಸ್.ಟಿ. ಸೋಮಶೇಖರ್​​ಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ: ಎಸ್ ಟಿ ಸೋಮಶೇಖರ್

Amit Shah: ಅಮಿತ್ ಶಾರನ್ನೇ ಕೇಂದ್ರ ಸಹಕಾರ ಮಂತ್ರಿ ಮಾಡಿದ್ದೇಕೆ? ಸಹಕಾರ ಸಚಿವರಾಗಿ ಅಮಿತ್ ಶಾ ಟಾರ್ಗೆಟ್ ಏನು?

(Central Co operation Minister Amit Shah writes to ST Somashekhar on Co Operation Ministry)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್