ಶಿಕ್ಷಕರು, ಪದವೀಧರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಡಿ. 30 ಅಂತಿಮ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಸಮಗ್ರ ನಿರ್ದೇಶನಗಳ ಅನ್ವಯ ಮಾಡತಕ್ಕದ್ದು ಎಂದು ಸೂಚಿಸಲಾಗಿದೆ.

ಬೆಂಗಳೂರು, ಆಗಸ್ಟ್ 12: ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ (Central Election Commission) ಸೂಚನೆ ನೀಡಿದೆ. ನೈಋತ್ಯ ಪದವಿಧರ ಕ್ಷೇತ್ರ ಆಯನೂರು ಮಂಜುನಾಥ್ ಅವರ ರಾಜೀನಾಮೆಯಿಂದ ಏಪ್ರಿಲ್ 19, 2023 ರಿಂದ ತೆರವಾಗಿದ್ದು, ಈ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ ಜೂನ್ 21, 2024 ವರೆಗೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ ಮಾರ್ಚ್ 16, 2023 ರಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ ನವೆಂಬರ್ 11, 2026 ವರೆಗೆ ಇದೆ.
ಜೂನ್ 06, 2024ಕ್ಕೆ ಈಶಾನ್ಯ ಪದವಿಧರ ಕ್ಷೇತ್ರದ ಡಾ. ಚಂದ್ರಶೇಖರ ಬಿ. ಪಾಟೀಲ್, ಬೆಂಗಳೂರು ಪದವಿಧರ ಕ್ಷೇತ್ರದಿಂದ ಎ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ. ವೈ.ಎ. ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೆಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ನಿವೃತ್ತಿಯಾಗುತ್ತಿದ್ದಾರೆ. ಹಾಗಾಗಿ ಈ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚಿಸಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ
ಸೆ. 30ರಂದು ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ನೋಟಿಸ್ ಅನ್ನು ಪ್ರಕಟಣೆ ಮಾಡಲಾಗುವುದು. ಫಾರಂ 18 ಅಥವಾ 19ರಲ್ಲಿ ಅರ್ಜಿ ಸ್ವೀಕರಿಸಲು ನ.06 ಕೊನೆಯ ದಿನವಾಗಿದೆ. ನ. 23ರಂದು ಮತದಾರರ ಕರಡು ಪ್ರತಿ ಪ್ರಕಟಿಸಲಾಗುವುದು. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು ನ.23 ರಿಂದ ಡಿ. 09 ರವರೆಗೆ ಅವಕಾಶವಿರುತ್ತದೆ.
ಇದನ್ನೂ ಓದಿ: ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು; ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್
ಡಿ. 30 ಅಂತಿಮ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಸಮಗ್ರ ನಿರ್ದೇಶನಗಳ ಅನ್ವಯ ಮಾಡತಕ್ಕದ್ದು ಎಂದು ಸೂಚಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




