ಎತ್ತಿನಹೊಳೆ ಯೋಜನೆ ಉದ್ಘಾಟನೆ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿದ ಕೇಂದ್ರ

yettinahole project: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿಕೊಂಡು ಸೆಪ್ಟೆಂಬರ್ 6ರಂದು ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಉದ್ಘಾಟಿಸಿದ್ದಾರೆ. ಆದ್ರೆ, ಇದೀಗ ಇದಕ್ಕೆ ಪರ ವಿರೋಧಗಳ ಚರ್ಚೆ ಮಧ್ಯ ಕೇಂದ್ರ ಸರ್ಕಾರವೂ ಸಹ ತಕರಾರು ಎತ್ತಿದೆ.

ಎತ್ತಿನಹೊಳೆ ಯೋಜನೆ ಉದ್ಘಾಟನೆ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿದ ಕೇಂದ್ರ
ವಿಧಾನಸೌಧ, ಕೇಂದ್ರದ ನೋಟಿಸ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Sep 09, 2024 | 2:49 PM

ಬೆಂಗಳೂರು, (ಸೆಪ್ಟೆಂಬರ್ 09): ಮೊನ್ನೆ ಅಷ್ಟೇ ಉದ್ಘಾಟನೆಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ (yettinahole project)ಕೇಂದ್ರ ಸರ್ಕಾರ ತಕರಾರು ಎತ್ತಿದೆ. ಎತ್ತಿನಹೊಳೆ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ, ಪರಿಸರ ಮತ್ತು ತಾಪಮಾನ ಸಚಿವಾಲಯ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯ ಸರ್ವೆ ಸಂಖ್ಯೆ 2, 30 ಹಾಗೂ ಯಲ್ಲಾಪುರ ಗ್ರಾಮದ ಸರ್ವೆ ಸಂಖ್ಯೆ 34, 35 ಮತ್ತು 36ರ ಅರಣ್ಯ ಬಳಕೆ ಬಗ್ಗೆ ವರದಿ ನೀಡಿವಂತೆ ನೋಟಿಸ್​ನಲ್ಲಿ ತಾಕೀತು ಮಾಡಿದೆ.

2020ರಲ್ಲಿ 26 ಎಕರೆ ಅರಣ್ಯ ಬಳಕೆಗೆ ವಿಶ್ವೇಶ್ವರ ಜಲ ನಿಗಮವು ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಸಹ 2024ರ ಜುಲೈನಲ್ಲಿ ಪತ್ರ ಬರೆದಿತ್ತು. ಈ ಪ್ರಸ್ತಾವದ ಕುರಿತು ಸ್ಪಷ್ಟನೆ ಹಾಗೂ ಹೆಚ್ಚುವರಿ ಮಾಹಿತಿ ಒದಗಿಸುವಂತೆ ರಾಜ್ಯ ಅರಣ್ಯ ಇಲಾಖೆಗೆ ಕೇಂದ್ರ ಸಚಿವಾಲಯ ಸೂಚಿಸಿದೆ.

ಇದನ್ನೂ ಓದಿ: Yettinahole Project: ಎತ್ತಿನಹೊಳೆ ಯೋಜನೆ ಬಗ್ಗೆ ತಿಳಿಯಲೇಬೇಕಾದ ಅಂಶಗಳು

ಪರ-ವಿರೋಧಗಳ ಮಧ್ಯ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದ್ದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಯೋಜನೆ ಉದ್ಘಾಟನೆ ಮಾಡಲಾಗಿತ್ತು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್​ ಹೌಸ್​​ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದ್ದರು. ಇನ್ನು ಉದ್ಘಾಟನೆಗೂ ಒಂದು ದಿನ ಮೊದಲೇ ಅಂದರೆ ಸೆ. 05ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಥಳಕ್ಕೆ ಹೋಗಿ ಪೂಜೆ- ಹೋಮ ಹವನಗಳನ್ನು ಮಾಡಿದ್ದರು.

ಏನಿದು ಯೋಜನೆ?

ಹಾಸನ ಜಿಲ್ಲೆಯ ಸಕಲೇಶಫುರ ತಾಲ್ಲೂಕಿನ ವ್ಯಾಪ್ತಿಯ ಪಶ್ಚಿಮಘಟ್ಟದಲ್ಲಿ ಹುಟ್ಟಿ ಹರಿಯುವ ಎತ್ತಿನಹೊಳೆ ಹಾಗೂ ಸುತ್ತಮುತ್ತಲ ಹಳ್ಳಗಳಿಂದ ನೀರನ್ನು ಮೆಲೆತ್ತಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆಯ 7 ಜಿಲ್ಲೆಗಳಿಗೆ ಪೂರೈಸುವುದಕ್ಕೆ ಸಂಬಂಧಿಸಿದ ಯೋಜನೆ ಇದಾಗಿದೆ.’

ಪಶ್ಚಿಮಘಟ್ಟದಲ್ಲಿ ಹರಿಯುವ ಎತ್ತಿನಹೊಳೆ ಭಾಗದ ನೀರು ಹರಿದು ಸಮುದ್ರ ಸೇರುವುದನ್ನು ತಡೆದು 24 ಟಿಎಂಸಿ ನೀರನ್ನು ನದಿಗೆ ವಿರುದ್ಧವಾಗಿ ಪೈಪ್​ಲೈನ್ ಹಾಗೂ ಕಾಲುವೆ ಮೂಲಕ ಹರಿಸಿ ಬಯಲು ಸೀಮೆ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸಲು ಹಮ್ಮಿಕೊಂಡಿರುವ ಯೋಜನೆಯಾಗಿದ್ದು, 2014ರಲ್ಲಿ 8500 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಯೋಜನೆಯ ವೆಚ್ಚ ಇದೀಗ 23,251 ಕೋಟಿ ರೂ.ಗೆ ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:40 pm, Mon, 9 September 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ