GST: ರಾಜ್ಯಕ್ಕೆ ಬಾಕಿ ಇರುವ ಜಿಎಸ್​ಟಿ ಪರಿಹಾರ ನೀಡಲು ಕ್ರಮ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ದೇಶದಲ್ಲಿ ಜಿಎಸ್​ಟಿ ಜಾರಿಯಾಗಿ ನಾಲ್ಕು ವರ್ಷ ಆಗಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಜಿಎಸ್​ಟಿ ಪರಿಹಾರ ಕುರಿತು ನಡೆಯಲಿದೆ. ವಿಶೇಷ ಕಲಾಪದಲ್ಲಿ ರಾಜ್ಯಗಳ ಜಿಎಸ್​ಟಿ ಪರಿಹಾರ ಬಗ್ಗೆ ಚರ್ಚೆ ನಡೆಸಲಾಗುವುದು ಎಮದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

GST: ರಾಜ್ಯಕ್ಕೆ ಬಾಕಿ ಇರುವ ಜಿಎಸ್​ಟಿ ಪರಿಹಾರ ನೀಡಲು ಕ್ರಮ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Jul 01, 2021 | 5:12 PM

ಬೆಂಗಳೂರು: ಕರ್ನಾಟಕಕ್ಕೆ ಕಳೆದ ವರ್ಷದಷ್ಟೇ ಈ ವರ್ಷವೂ ಜಿಎಸ್​ಟಿ ಪರಿಹಾರ ಸಿಗಲಿದೆ. ರಾಜ್ಯಕ್ಕೆ ಬಾಕಿ ಇರುವ ಜಿಎಸ್​ಟಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ ಎಷ್ಟು ಪ್ರಮಾಣದ ಜಿಎಸ್​ಟಿ ದೊರೆಯಲಿದೆ ಎಂದು ನಾನು ಹೇಳಲು ಸಾಧ್ಯವಿಲ್ಲ. ಕೇಂದ್ರ ಸಾಲ ಪಡೆದು ರಾಜ್ಯಗಳಿಗೆ GST ಪರಿಹಾರ ಕೊಡುತ್ತಿದೆ. ಈ ಪ್ರಕ್ರಿಯೆ ಈ ವರ್ಷವೂ ಇದೇ ರೀತಿ ಮುಂದುವರಿಯಲಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ದೇಶದಲ್ಲಿ ಜಿಎಸ್​ಟಿ ಜಾರಿಯಾಗಿ ನಾಲ್ಕು ವರ್ಷ ಆಗಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಜಿಎಸ್​ಟಿ ಪರಿಹಾರ ಕುರಿತು ನಡೆಯಲಿದೆ. ವಿಶೇಷ ಕಲಾಪದಲ್ಲಿ ರಾಜ್ಯಗಳ ಜಿಎಸ್​ಟಿ ಪರಿಹಾರ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯಕ್ಕೆ ಸಿಗಬೇಕಾದ ಲಸಿಕೆ ಸಿಕ್ಕೇ ಸಿಗುತ್ತದೆ. ಎಲ್ಲಾ ರಾಜ್ಯಗಳಿಗೂ ಅಗತ್ಯಕ್ಕೆ ತಕ್ಕಂತೆ ಲಸಿಕೆ ಪೂರೈಕೆ ಮಾಡಲಾಗುವುದುಲಸಿಕೆ ಪೂರೈಕೆ ಬಗ್ಗೆ ಸರ್ಕಾರ 7 ದಿನಕ್ಕೂ ಮೊದಲೇ ಮಾಹಿತಿ ಕೊಡುತ್ತಿದೆ. ರಾಜ್ಯಗಳಲ್ಲಿ ಲಸಿಕೆ ಬಳಸಿದಂತೆಲ್ಲ ಸಕಾಲಕ್ಕೆ ಪೂರೈಕೆ ಮಾಡಲಾಗುತ್ತದೆ. ಕೇಂದ್ರದ ಲಸಿಕೆ ಪೂರೈಕೆ ನಿರ್ವಹಣೆ ಉತ್ತಮವಾಗಿದೆ. ದೇಶದ ಎಲ್ಲರಿಗೂ ಕೊರೊನಾ ಲಸಿಕೆ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಗೊಂದಲ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಣಕಾಸು ಸಚಿವೆ, ರಾಜ್ಯದಲ್ಲಿ ಬಿಜೆಪಿ ಉತ್ತಮ ಪಕ್ಷವಾಗಿದೆ. ಯಾವುದೇ ಗೊಂದಲಗಳು ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: 

ಬೆಂಗಳೂರು ನಗರಕ್ಕೆ ಎಷ್ಟು ಶೌಚಾಲಯ ಬೇಕು? ಕೊರತೆ ಎಷ್ಟು? ಮಾಹಿತಿ ನೀಡಲು ಹೈಕೋರ್ಟ್ ಸೂಚನೆ

ಗ್ರಾಮ ಪಂಚಾಯತಿ ಮಟ್ಟದ ನೌಕರರ ಕಾಯಮಾತಿ ಇಲ್ಲ, ಕೊವಿಡ್​ನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ; ಸಚಿವ ಈಶ್ವರಪ್ಪ

(Central Finance Minister Nirmala Sitharaman informs will take Steps to provide pending GST relief to the Karnataka)

Published On - 5:00 pm, Thu, 1 July 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು