AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ-ಬಡವನಹಳ್ಳಿ ಚತುಷ್ಪಥ ರಸ್ತೆಗೆ ಕೇಂದ್ರ ಗ್ರೀನ್ ಸಿಗ್ನಲ್: ತಿರುಪತಿ-ಚೆನ್ನೈ ಪ್ರಯಾಣಕ್ಕೆ ಇನ್ನಷ್ಟು ಅನುಕೂಲ

ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾಟ ಅನುಮೋದನೆ ನೀಡಿದೆ. 584.98 ಕೋಟಿ ರೂಪಾಯಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು, ಈ ಬಗ್ಗೆ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಹಾಗಾದ್ರೆ, ಈ ರಸ್ತೆ ಎಲ್ಲಿಯವರೆಗೆ ಸಂಪರ್ಕ? ಎನ್ನುವ ಸಪೂರ್ಣ ವಿವರ ಇಲ್ಲಿದೆ.

ಶಿರಾ-ಬಡವನಹಳ್ಳಿ ಚತುಷ್ಪಥ ರಸ್ತೆಗೆ ಕೇಂದ್ರ ಗ್ರೀನ್ ಸಿಗ್ನಲ್: ತಿರುಪತಿ-ಚೆನ್ನೈ ಪ್ರಯಾಣಕ್ಕೆ ಇನ್ನಷ್ಟು ಅನುಕೂಲ
V Somanna
ಕಿರಣ್​ ಹನಿಯಡ್ಕ
| Edited By: |

Updated on: Jul 23, 2026 | 3:45 PM

Share

ಮುಖ್ಯಾಂಶಗಳು

  • ಶಿರಾ-ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಅನುಮೋದನೆ
  • 584.98 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್
  • ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವಾಲಯದಿಂದ ಅನುಮೋದನೆ ಎಂದ ಚಿವ ವಿ.ಸೋಮಣ್ಣ

ಬೆಂಗಳೂರು/ತುಮಕೂರು, (ಜುಲೈ 23): ಈ ಭಾಗದ ಬಹುದಿನ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ  (Sira Badavanahalli four-laning project)  ಭಾಗದ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾಟ ಅನುಮೋದನೆ ನೀಡಿದೆ. 584.98 ಕೋಟಿ ರೂಪಾಯಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು, ಈ ಬಗ್ಗೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ  (V Somanna) ಮಾಹಿತಿ ನೀಡಿದ್ದಾರೆ.

ರಸ್ತೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಶಿರಾ-ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಅನುಮೋದನೆ ನೀಡುವಂತೆ ಸಲ್ಲಿಸಿದ್ದ ಮನವಿಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ ಗಡ್ಕರಿ ಅನುಮೋದನೆ ಭರವಸೆ ನೀಡಿದ್ದರು.ಅದರಂತೆ ಇದೀಗ 584.98 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಕಾಮಗಾರಿಗೆ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆ 15ಕ್ಕೆ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಆಗೋದು ಡೌಟ್! ಇಲ್ಲಿದೆ ಅಸಲಿ ಕಾರಣ

ತುಮಕೂರು ಜಿಲ್ಲೆಯ ಸರ್ವತೋಮುಖ ಪ್ರಗತಿಯ ಭಾಗವಾಗಿ ನನ್ನ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮಿ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2025ರ ಮಾರ್ಚ್‌ 07ರಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿದ್ದರು. ಇದೀಗ, ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಪ್ರಾರಂಭಿಸಲು ಈಗಾಗಲೇ ಗುತ್ತಿಗೆ ಆದೇಶ ನೀಡಲಾಗಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 69ರ ಶಿರಾ-ಬಡವನಹಳ್ಳಿ ಭಾಗದ 20.2 ಕಿ.ಮಿ. ಉದ್ದದ ರೂ. 584.98 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 69ರ ಶಿರಾ – ಬಡವನಹಳ್ಳಿ – ಬೈರೆನಹಳ್ಳಿ ಒಟ್ಟು 52 ಕಿ.ಮಿ. ಅಂದಾಜು 1,585 ಕೋಟಿ ವೆಚ್ಚದ ಚತುಷ್ಪಥ ಹೆದ್ದಾರಿ ನಿರ್ಮಾಣವಾಗುವುದರಿಂದ ಮದ್ಯ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಿಂದ ತಿರುಪತಿ ಮತ್ತು ಚೆನ್ನೈ ನಡುವಿನ ಪ್ರಯಾಣಕ್ಕೆ ಇನ್ನಷ್ಟು ಅನುಕೂಲವಾಗಲಿದೆ.

ಬಡವನಹಳ್ಳಿಯಿಂದ ಬೈರೆನಹಳ್ಳಿ ಭಾಗದ 32ಕಿ.ಮಿ. ಚತುಷ್ಪಥ ರಸ್ತೆಗೆ 1000 ಕೋಟಿ ರೂ.ಕೋಟಿ ಅನುಮೋದನೆ ಪಡೆಯುವ ಬಗ್ಗೆ ಈಗಾಗಲೇ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ಮುಂದಿನ ದಿವಸಗಳಲ್ಲಿ ಕೇಂದ್ರ ರ್‍ಕಾರದಿಂದ ಮಂಜೂರಾತಿ ಪಡೆಯಲಾಗುವುದು ಎಂದು ಸೋಮಣ್ಣ ತಿಳಿಸಿದ್ದಾರೆ.

 ಕೇವಲ 4 ಗಂಟೆಯಲ್ಲೇ ತಿರುಪತಿಗೆ ತಲುಪಬಹುದು

ಪ್ರಸ್ತುತ ಶಿರಾದಿಂದ- ತುಮಕೂರು ದಾಬಸಪೇಟೆ ಕೋಲಾರ ಮಾರ್ಗವಾಗಿ ತಿರುಪತಿಗೆ ತಲುಪಲು ಸುಮಾರು 6 ರಿಂದ 7 ಗಂಟೆಗಳ ಪ್ರಯಾಣದ ಅವಧಿ ಇದ್ದು,ಈ ಹೆದ್ದಾರಿ ನಿರ್ಮಾಣದಿಂದ ಶಿರಾದಿಂದ ಮಧುಗಿರಿ, ಚಿಕ್ಕಬಳ್ಳಾಪುರ ಚಿಂತಾಮಣಿ ಮಾರ್ಗವಾಗಿ ತಿರುಪತಿಗೆ ಕೇವಲ 4 ಗಂಟೆಯ ಅವಧಿಯಲ್ಲಿ ತಲುಪಲು ಅನೂಕೂಲವಾಗಲಿದೆ.ಜೊತೆಗೆ ಶಿರಾದಿಂದ ತಿರುಪತಿಗೆ ಸುಮಾರು 60 ಕಿ.ಮಿ. ರಸ್ತೆ ಪ್ರಯಾಣ ಕಡಿಮೆಯಾಗಲಿದೆ. ಇದಲ್ಲದೆ ವಸಂತನರಸಾಪುರ ಹಾಗೂ ಶಿರಾ ಕೈಗಾರಿಕಾ ಪ್ರದೇಶಗಳಿಗೆ ಚೆನೈ ಬಂದರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಲಿದೆ.ಈ ಹೆದ್ದಾರಿ ಶಿರಾ-ಬೆಂಗಳೂರಿನ ನಡುವಿನ ಪರ್ಯಾಯ ರಸ್ತೆ ಸಂಪರ್ಕವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ