ಬಜೆಟ್​ನಲ್ಲಿ ಕರ್ನಾಟಕಕ್ಕೆ ಚೊಂಬು ಆರೋಪಕ್ಕೆ ನಿರ್ಮಲಾ ಸೀತಾರಾಮನ್ ತಿರುಗೇಟು

ಈ ಬಾರಿಯ ಬಜೆಟ್​​ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ, ಅನ್ಯಾಯ ಮಾಡಿದೆ ಎಂಬ ರಾಜ್ಯ ಕಾಂಗ್ರೆಸ್​ ನಾಯಕರ ಆರೋಪಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅಂಕಿ-ಅಂಶ​ ಸಮೇತ​ ತಿರುಗೇಟು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್​ ನಾಯಕರೇ ನಿಮ್ಮ ನಾಟಕ, ನೌಟಂಕಿ ಬಿಟ್ಟು ಬಿಡಿ ಎಂದು ವಾಗ್ದಾಳಿ ಮಾಡಿದರು.

ಬಜೆಟ್​ನಲ್ಲಿ ಕರ್ನಾಟಕಕ್ಕೆ ಚೊಂಬು ಆರೋಪಕ್ಕೆ ನಿರ್ಮಲಾ ಸೀತಾರಾಮನ್ ತಿರುಗೇಟು
ನಿರ್ಮಲಾ ಸೀತಾರಾಮನ್
Follow us
ವಿವೇಕ ಬಿರಾದಾರ
|

Updated on: Jul 28, 2024 | 1:38 PM

ಬೆಂಗಳೂರು, ಜುಲೈ 28: ಕೇಂದ್ರ ಸರ್ಕಾರದ ಬಜೆಟ್​ನಲ್ಲಿ (Central Government Budget) ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್​ನಲ್ಲಿ ಏನೂ‌ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು​ ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ​ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ (Nirmala Sitharaman)​ ತಿರುಗೇಟು ನೀಡಿದರು. ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ 81,791 ಕೋಟಿ ರೂ. ನೀಡಿತ್ತು. ಆದರೆ 2014ರಿಂದ ಇಲ್ಲಿಯವರೆಗೆ ಎನ್​ಡಿಎ ಸರ್ಕಾರ 2,95,818 ಕೋಟಿ ರೂಪಾಯಿ ನೀಡಿದೆ. ಕಳೆದ 10 ವರ್ಷದಲ್ಲಿ 2,36,955 ಕೋಟಿ ತೆರಿಗೆ ಹಂಚಿಕೆಯಾಗಿದೆ ಎಂದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಜೆಟ್​ನಲ್ಲಿ ಸ್ಟಾರ್ಟ್​ಅಪ್​ಗಳಿಗೆ ನಾವು ಹೆಚ್ಚಿನ‌ ಒತ್ತು ನೀಡಿದ್ದೇವೆ. ಕೇಂದ್ರ ಬಜೆಟ್​ನಲ್ಲಿ ಯುವಕರಿಗೆ ಮೂರು ಯೋಜನೆ ತಂದಿದ್ದೇವೆ. ಯುವಕರಿಗೆ ತರಬೇತಿ, ಇಂಟರ್ನ್​ಶಿಪ್ ಯೋಜನೆ, ಕೌಶಲ್ಯಾಭಿವೃದ್ಧಿ ನೀಡಲಾಗುವುದು. ಎಂಎಸ್ಎಮ್ಇಗಳಿಗೆ ಸ್ವಲ್ಪ ಸಮಸ್ಯೆ ಆಗುತ್ತಿದೆ, ಆ ಸಮಸ್ಯೆ ಬಗೆಹರಿಸಲು ಕೇಂದ್ರ ಬಜೆಟ್​ನಲ್ಲಿ ಉತ್ತರ ನೀಡಿದ್ದೇವೆ. ಬಾಹ್ಯಾಕಾಶ ವಲಯಕ್ಕೆ ಬೆಂಗಳೂರಿನ ಕೊಡುಗೆ ಇದೆ. ಆವಾಸ್ ಯೋಜನೆಯಡಿ ಬಡ ವರ್ಗದ ಜನರಿಗೆ ಮನೆ ನೀಡಲಾಗುತ್ತಿದೆ.

ಮಹಿಳೆಯರು, ಕೃಷಿ ವಲಯಕ್ಕೂ ಕೇಂದ್ರದಿಂದ ಯೋಜನೆ ತಂದಿದ್ದೇವೆ. ಈ ಎಲ್ಲ ಯೋಜನೆಗಳ ಪ್ರಯೋಜನ ಕರ್ನಾಟಕವೂ ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಬೆಂಗಳೂರಿನ ಪೀಣ್ಯದಲ್ಲಿ ಸಣ್ಣ ಕೈಗಾರಿಕೆಗಳಿವೆ. ಕೃಷಿ ವಲಯದ ವಿಸ್ತರಣೆಗೆ ಬೆಂಗಳೂರು ಕೊಡುಗೆ ಇದೆ. ಕಲಬುರಗಿಯಲ್ಲಿ ಪಿಎಂ ಮಿತ್ರಾ ಪಾರ್ಕ್‌ ನಿರ್ಮಾಣವಾಗಲಿದೆ. ರೈಲ್ವೇ ವಲಯಕ್ಕೂ ಕೋಟಿ ಕೋಟಿ ಹಣ ನೀಡಿದ್ದೇವೆ. 825 ಕೋಟಿ ರೂ. ಅನುದಾನ ಯುಪಿಎ ಸರ್ಕಾರ‌ ಇದ್ದಾಗ ನೀಡಿತ್ತು. ಆದರೆ ಈ ಬಜೆಟ್​ನಲ್ಲಿ 7,559 ಕೋಟಿ ಅನುದಾನ ಕೊಟ್ಟಿದ್ದೇವೆ. 47,016 ಕೋಟಿ ಮೊತ್ತದ 31 ಯೋಜನೆಯ ರೈಲ್ವೆ ಕಾಮಗಾರಿ ನಡೆಯುತ್ತಿದೆ. 640 ರೈಲ್ವೇ ಸೇತುವೆ, ವಂದೇ ಭಾರತ್ ರೈಲು ಸೇರಿ ಹಲವು ರೈಲ್ವೆ ಯೋಜನೆ ಜಾರಿಯಲ್ಲಿವೆ. ಐಐಟಿ ಧಾರವಾಡ, ತುಮಕೂರಲ್ಲಿ ಮೊದಲ‌ ಕೈಗಾರಿಕಾ ಕಾರಿಡಾರ್ ಪಾರ್ಕ್, 7 ಸ್ಮಾರ್ಟ್ ಸಿಟಿ ನಿರ್ಮಾಣವಾಗುತ್ತಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ರಾಜ್ಯಕ್ಕೆ ಅನ್ಯಾಯ: ಕಾಂಗ್ರೆಸ್​ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು 

4600 ಕಿಮೀ ರಸ್ತೆ ಈಗಾಗಲೇ ನಿರ್ಮಾಣವಾಗಿದೆ. ಹೆದ್ದಾರಿ ರಸ್ತೆ ನಿರ್ಮಾಣಕ್ಕಾಗಿ ೧ ಲಕ್ಷಕ್ಕೂ ಹೆಚ್ಚು ಕೋಟಿಯ ರಸ್ತೆ ಆಗಿದೆ. ಬೆಂಗಳೂರು-ಚೆನ್ನೈ ರಸ್ತೆ ಸೇರಿ‌ ಮೂರು ಹೆದ್ದಾರಿ ಕಾಮಗಾರಿ ಆಗುತ್ತಿವೆ. ಆದರೆ ಇದರಲ್ಲಿ ರಾಜ್ಯದ ಪಾಲು ಎಷ್ಟು? ಎಂದು ಪ್ರಶ್ನಿಸಿದರು.

ಕರ್ನಾಟಕ ಸರ್ಕಾರ ಎಲ್ಲದರಲ್ಲೂ ತೆರಿಗೆ ಹೆಚ್ಚಿಸಿದೆ. ದರ ಕೂಡ ಹೆಚ್ಚಳ ಆಗುತ್ತಿದೆ. ಸಹಜವಾಗಿ ಹಣದುಬ್ಬರ ಎದ್ದು ಕಾಣುತ್ತಿದೆ. ಕಂಪನಿಗಳು ಹೊರ ರಾಜ್ಯಕ್ಕೆ ಹೋಗುತ್ತಿವೆ. ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದೆ. ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬರುತ್ತಿಲ್ಲ. ಎಸ್​ಟಿ ಎಸ್​ಸಿ ಹಣ ಬೇರೆ ಯೋಜನೆಗೆ ಬಳಕೆಯಾಗಿದೆ. ವಾಲ್ಮೀಕಿ ಹಣ ಏನಾಗಿದೆ ಅಂತ ನಿಮಗೆ ಗೊತ್ತು. ರಾಜ್ಯದಲ್ಲಿ ಈ ರೀತಿಯ ಆಡಳಿತ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಸಚಿವರು ಈಗಾಗಲೇ ರಾಜೀನಾಮೆ ಕೊಟ್ಟಿದ್ದಾರೆ, ನಾಟಕ, ನೌಟಂಕಿ ಬಿಟ್ಟು ಬಿಡಿ. ವಾಲ್ಮೀಕಿ ಹಣವನ್ನು ಚುನಾವಣೆ ಪ್ರಚಾರಕ್ಕೆ ಬಳಸಿದ್ದಾರೆ. ನಿಮ್ಮ ಇಲಾಖೆಯ‌ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ