ಕೇಂದ್ರ ಸರ್ಕಾರ ಎಪಿಎಂಸಿ ವ್ಯವಸ್ಥೆಯನ್ನು ಹಾಳು ಮಾಡಿದೆ: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ

|

Updated on: Jan 17, 2021 | 3:22 PM

30 ಸಾವಿರ ಕೋಟಿ GST ಬರಬೇಕು. ಕೇಂದ್ರದಿಂದ ಬರಬೇಕಾದ GST ಹಣ ಬಂದಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ. ರೈತರ ಜೀವನ ಹಾಳುಮಾಡುವ ಕಾಯ್ದೆಯನ್ನು ಜಾರಿ ಮಾಡಿದೆ.

ಕೇಂದ್ರ ಸರ್ಕಾರ ಎಪಿಎಂಸಿ ವ್ಯವಸ್ಥೆಯನ್ನು ಹಾಳು ಮಾಡಿದೆ: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ
ಜಿ. ಪರಮೇಶ್ವರ
Follow us on

ಶಿವಮೊಗ್ಗ: ಕೇಂದ್ರ ಸರ್ಕಾರ ಎಪಿಎಂಸಿ ವ್ಯವಸ್ಥೆಯನ್ನು ಹಾಳು ಮಾಡಿದೆ. ರಿಲಯನ್ಸ್​ನ ಅಂಬಾನಿಯ ಹಿತಕ್ಕಾಗಿ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗಿದೆ. ಇದೇ ಕಾರಣಕ್ಕೆ ರೈತರಿಗೆ ಕಾಯ್ದೆ ಬಗ್ಗೆ ಅನುಮಾನವಿದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ಜ.20ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಲಿದ್ದಾರೆ. ರಾಜ್ಯಪಾಲರಿಗೆ ಅಂದು ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ. ? ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ. ರೈತರ ಜೀವನ ಹಾಳುಮಾಡುವ ಕಾಯ್ದೆಯನ್ನು ಜಾರಿ ಮಾಡಿದೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ ಅವರು ಮೋದಿ ಸರ್ಕಾರ ಬಂದ ಬಳಿಕ ಗೋಮಾಂಸ ರಫ್ತು ಹೆಚ್ಚಾಗಿದೆ. ಮೋದಿ ಅಧಿಕಾರಕ್ಕೆ ಬರುವ ಮೊದಲು ಗೋಮಾಂಸ ರಫ್ತು ವ್ಯವಹಾರ ₹ 13 ಸಾವಿರ ಕೋಟಿ ಇತ್ತು. ಮೋದಿ ಸರ್ಕಾರ ಬಂದ ಮೇಲೆ ₹ 26 ಸಾವಿರ ಕೋಟಿಗೆ ಏರಿದೆ ಎಂದು ನುಡಿದರು.

ಕೇಂದ್ರದಿಂದ ರಾಜ್ಯಕ್ಕೆ ₹ 30 ಸಾವಿರ ಕೋಟಿ GST ಬರಬೇಕು. ನಮ್ಮ ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಭದ್ರಾವತಿಯಲ್ಲಿ ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಕಾಂಗ್ರೆಸ್ ಅವಧಿಯಲ್ಲೇ RAFಗೆ ಭೂಮಿ ನೀಡಲಾಗಿತ್ತು ಎಂದು ಪರಮೇಶ್ವರ ಮಾಹಿತಿ ನೀಡಿದರು.

ಬ್ಯಾನರ್‌ನಲ್ಲಿ ಖರ್ಗೆ, ಪರಮೇಶ್ವರ್ ನಾಪತ್ತೆ! ವಾಗ್ವಾದ.. ಎಲ್ಲಿ?

 

Published On - 3:16 pm, Sun, 17 January 21