AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಗಳಿಗೆ ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ಸಾಧ್ಯವಾಗಲಿ ಎಂಬ ಕಾರಣಕ್ಕೆ ಮುಂಗಡವಾಗಿಯೇ ಜಿಎಸ್​ಟಿ ಹಣ ನೀಡಲಾಗಿದೆ. ವಿವಿಧ ರಾಜ್ಯಗಳಿಗೆ ನೀಡಲಾಗಿರುವ 1,18,280 ರೂ ಪೈಕಿ ಕರ್ನಾಟಕಕ್ಕೆ 4,314 ಕೋಟಿ ರೂ. ದೊರೆತಿದೆ.

ರಾಜ್ಯಗಳಿಗೆ ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?
ಜಿಎಸ್​ಟಿ
ಆಯೇಷಾ ಬಾನು
|

Updated on: Jun 13, 2023 | 6:46 AM

Share

ದೆಹಲಿ: ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ತ್ವರಿತಗೊಳ್ಳಲೆಂಬ ಉದ್ದೇಶ ಹಿನ್ನೆಲೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಜಿಎಸ್​ಟಿ ಪಾಲು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಜೂನ್ ತಿಂಗಳಲ್ಲಿ ವಿವಿಧ ರಾಜ್ಯಗಳಿಗೆ ಒಟ್ಟಿಗೆ ಎರಡು ಕಂತುಗಳ ಜಿಎಸ್​ಟಿ ಪಾಲು (GST Devolution) ಹಂಚಿಕೆ ಮಾಡಿದೆ. ತಿಂಗಳಿಗೆ 59,140 ಕೋಟಿ ರೂ. ನೀಡಬೇಕಿದ್ದ ಕೇಂದ್ರ ಸರ್ಕಾರ (Central Government) ಈ ಬಾರಿ 1,18,280 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವರ್ಗಾಯಿಸಿದೆ. ಜೂನ್ 12ರಂದು ಕೇಂದ್ರದಿಂದ ಹಣ ಬಿಡುಗಡೆ ಆಗಿದೆ.

ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ಸಾಧ್ಯವಾಗಲಿ ಎಂಬ ಕಾರಣಕ್ಕೆ ಮುಂಗಡವಾಗಿಯೇ ಜಿಎಸ್​ಟಿ ಹಣ ನೀಡಲಾಗಿದೆ. ವಿವಿಧ ರಾಜ್ಯಗಳಿಗೆ ನೀಡಲಾಗಿರುವ 1,18,280 ರೂ ಪೈಕಿ ಕರ್ನಾಟಕಕ್ಕೆ 4,314 ಕೋಟಿ ರೂ. ದೊರೆತಿದೆ. ಮಹಾರಾಷ್ಟ್ರ ರಾಜ್ಯಕ್ಕೆ ಸಿಕ್ಕಿರುವುದು 7,472 ಕೋಟಿ ರೂ. ಮಹಾರಾಷ್ಟ್ರ ಮತ್ತು ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಜಿಎಸ್​ಟಿ ಸಂಗ್ರಹ ಮಾಡಿ ಕೇಂದ್ರಕ್ಕೆ ತಲುಪಿಸುವ ರಾಜ್ಯಗಳಾಗಿವೆ. ಜಿಎಸ್​ಟಿ ಪಾಲಿನಲ್ಲಿ ಉತ್ತರಪ್ರದೇಶಕ್ಕೆ ಸಿಂಹ ಪಾಲು ಇದೆ. ಉ.ಪ್ರ.ಗೆ 21,218 ಕೋಟಿ ರೂ ಸಿಕ್ಕಿದೆ. ಬಿಹಾರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ರಾಜ್ಯಗಳಿಗೆ 8,000 ಕೋಟಿ ರೂಗಿಂತ ಹೆಚ್ಚು ಜಿಎಸ್​ಟಿ ಪಾಲು ಜೂನ್ ತಿಂಗಳಲ್ಲಿ ಸಿಕ್ಕಿದೆ.

ಗುಜರಾತ್‍ಗೆ 4,114 ರೂ., ಛತ್ತೀಸ್‍ಗಡಗೆ 4,030 ರೂ., ಜಾರ್ಖಂಡ್‍ಗೆ 3,912 ರೂ., ಅಸ್ಸಾಂಗೆ 3,700 ರೂ., ತೆಲಂಗಾಣಕ್ಕೆ 2,486 ರೂ., ಕೇರಳಕ್ಕೆ 2,277 ರೂ., ಪಂಜಾಬ್‍ಗೆ 2,137 ರೂ., ಅರುಣಾಚಲಪ್ರದೇಶಕ್ಕೆ 2,078 ರೂ., ಉತ್ತರಾಖಂಡ್‍ಗೆ 1,322 ರೂ., ಹರಿಯಾಣಕ್ಕೆ 1,293 ರೂ. ಬಿಡುಗಡೆಯಾಗಿದೆ. ಹಿಮಾಚಲಪ್ರದೇಶ, ಮೇಘಾಲಯ, ಮಣಿಪುರ, ತ್ರಿಪುರಾ, ಗೋವಾ, ನಾಗಾಲ್ಯಾಂಡ್ ಹಾಗೂ ಸಿಕ್ಕಿಂಗೆ 800-900 ಕೋಟಿ ರೂ. ಬಿಡುಗಡೆಯಾಗಿದೆ.

ಹೆಚ್ಚು ಜಿಎಸ್​ಟಿ ಗಳಿಸಿದರೂ ಯಾಕೆ ಕಡಿಮೆ ಪಾಲು?

ರಾಜ್ಯಗಳ ಆರ್ಥಿಕ ಸ್ಥಿತಿಗಳಿಗೆ ಅನುಸಾರವಾಗಿ ಕೇಂದ್ರ ಸರ್ಕಾರ ಜಿಎಸ್​ಟಿ ಪಾಲು ಹಂಚಿಕೆಯನ್ನು ಮಾಡುತ್ತದೆ. ಹೆಚ್ಚು ಹಿಂದುಳಿದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಛತ್ತೀಸ್​ಗಡ, ಜಾರ್ಖಂಡ್, ಮಧ್ಯಪ್ರದೇಶ ಮೊದಲಾದವಕ್ಕೆ ಹೆಚ್ಚಿನ ತೆರಿಗೆ ಪಾಲು ಇದೆ. ಹೀಗಾಗಿ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮೊದಲಾದ ರಾಜ್ಯಗಳಿಗೆ ಕಡಿಮೆ ಜಿಎಸ್​ಟಿ ಪಾಲು ದೊರಕುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್