AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು; ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು; ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
sandhya thejappa
|

Updated on: May 13, 2021 | 8:53 AM

Share

ಬೆಂಗಳೂರು: ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟಿದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ತನ್ನ ಟ್ವಿಟರ್ ಅಧಿಕೃತ ಪೇಜ್ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್ (MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ತಾತ್ಸಾರ ಏಕೆ? ಆಕ್ಸಿಜನ್ ಸಿಗದೆ ಮೃತಪಟ್ಟಿದ್ದಾರೆ ಇದಕ್ಕೆ ಹೊಣೆ ಯಾರು? ಎಂದು ಮಾಜಿ ಮುಖ್ಯಮಂತ್ರಿ ಟ್ವಿಟ್ಟರ್​ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ

‘ಕೊರೊನಾ 3 ನೇ ಅಲೆ ಎದುರಿಸಲು ಸಿದ್ಧತೆ ನಡೆಸಿ’ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್‌ ವಾರ್ನಿಂಗ್

ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತ ವೃದ್ಧ ಸಾವು; ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ವಿರುದ್ಧ ಮೊಮ್ಮಗಳಿಂದ ಗಂಭೀರ ಆರೋಪ

(central government should be free of discrimination and meet the need of Karnataka HD Kumaraswamy says in twitter)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!