ಬೆಂಗಳೂರು: ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟಿದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ತನ್ನ ಟ್ವಿಟರ್ ಅಧಿಕೃತ ಪೇಜ್ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್ (MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ತಾತ್ಸಾರ ಏಕೆ? ಆಕ್ಸಿಜನ್ ಸಿಗದೆ ಮೃತಪಟ್ಟಿದ್ದಾರೆ ಇದಕ್ಕೆ ಹೊಣೆ ಯಾರು? ಎಂದು ಮಾಜಿ ಮುಖ್ಯಮಂತ್ರಿ ಟ್ವಿಟ್ಟರ್ನಲ್ಲಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು.
7/8— H D Kumaraswamy (@hd_kumaraswamy) May 13, 2021
ಇದನ್ನೂ ಓದಿ
‘ಕೊರೊನಾ 3 ನೇ ಅಲೆ ಎದುರಿಸಲು ಸಿದ್ಧತೆ ನಡೆಸಿ’ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ವಾರ್ನಿಂಗ್
ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತ ವೃದ್ಧ ಸಾವು; ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ವಿರುದ್ಧ ಮೊಮ್ಮಗಳಿಂದ ಗಂಭೀರ ಆರೋಪ
(central government should be free of discrimination and meet the need of Karnataka HD Kumaraswamy says in twitter)