ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸ್ತಿಲ್ಲ ಎಂದ ಜೋಶಿ: ಜಿದ್ದಿಗೆ ಬಿತ್ತಾ ಸಿದ್ದರಾಮಯ್ಯ ಸರ್ಕಾರ?

|

Updated on: Sep 08, 2024 | 5:42 PM

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ನೀಡಲು ಕೇಂದ್ರದ ಬಳಿ ಪರಿ ಪರಿಯಾಗಿ ಬೇಡಿಕೊಂಡಿತ್ತು. ಆದರೆ ಕೇಂದ್ರ ಅಕ್ಕಿ ಸ್ಟಾಕ್ ಇಲ್ಲ ಎಂದಿತ್ತು. ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಸಿದ್ದರಾಮಯ್ಯ ಸರ್ಕಾರದ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿತ್ತು. ಇದೀಗ ಕೇಂದ್ರ, ಅಕ್ಕಿ ನೀಡಲು ಮುಂದಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಖರೀದಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸ್ತಿಲ್ಲ ಎಂದ ಜೋಶಿ: ಜಿದ್ದಿಗೆ ಬಿತ್ತಾ ಸಿದ್ದರಾಮಯ್ಯ ಸರ್ಕಾರ?
ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸ್ತಿಲ್ಲ ಎಂದ ಜೋಶಿ: ಜಿದ್ದಿಗೆ ಬಿತ್ತಾ ಸಿದ್ದರಾಮಯ್ಯ ಸರ್ಕಾರ?
Follow us on

ಹುಬ್ಬಳ್ಳಿ, ಸೆಪ್ಟೆಂಬರ್​ 08: ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುವ ಅಕ್ಕಿ (rice) ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯ ಸರ್ಕಾರ ಹಸಿವುಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಜನತೆಗೆ ಪೂರೈಸುವಷ್ಟು ಅಕ್ಕಿ ಪೂರೈಸಲು ಸಾಧ್ಯವಾಗದೇ ಸರ್ಕಾರ ಪೇಚಿಗೆ ಸಿಲುಕಿತ್ತು. ಹಾಗಾಗಿ ಅಕ್ಕಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಅಕ್ಕಿಯನ್ನು ನೀಡಿರಲಿಲ್ಲ. ಹಾಗಾಗಿ 5ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದನ್ನು ಮುಂದುವರೆಸುವುದಾಗಿ ಮೊನ್ನೆ ನಡೆದ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸುತ್ತಿಲ್ಲ ಎಂದು ಆರೋಪ ಮಾಡಲಾಗಿದೆ.

ಕರ್ನಾಟಕ ಸರ್ಕಾರ ಅಕ್ಕಿ ಖರೀದಿಸಲು ಮುಂದಾಗುತ್ತಿಲ್ಲ ಎಂದ ಪ್ರಲ್ಹಾದ್ ಜೋಶಿ

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸುತ್ತಿಲ್ಲ. ಕರ್ನಾಟಕ ಸರ್ಕಾರ ಅಕ್ಕಿ ಖರೀದಿಸಲು ಮುಂದಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್​ಗೆ ರಾಜ್ಯಾತಿಥ್ಯ: ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂದು ಜೋಶಿ

ಸಚಿವ ಮುನಿಯಪ್ಪ ಬಂದು ಅಕ್ಕಿ ಕೊಡುತ್ತೀರಾ ಅಂದ್ರು, ಕೊಡುತ್ತೇವೆ ಅಂದೆವು. ಆದರೆ ಸಿಎಂ ಅನುಮತಿ ಕೊಟ್ಟಿಲ್ಲ, ಏಕೆ ಕೊಟ್ಟಿಲ್ಲ ಎಂದು ಮುನಿಯಪ್ಪ ಹೇಳಬೇಕು. ಸಚಿವ ಮುನಿಯಪ್ಪನವರು ಹಿರಿಯರು, ಅವರ ಬಗ್ಗೆ ಗೌರವವಿದೆ ಎಂದಿದ್ದಾರೆ.

ಮಹದಾಯಿ ವಿಚಾರವಾಗಿ ಮಾತನಾಡಿದ್ದು, ರೈತರು ಮನವಿ ಕೊಟ್ಟಿದ್ದಾರೆ. ಇದು ಜುಲೈನಲ್ಲಿ ನಡೆದ ಸಭೆ ನಮ್ಮ ಗಮನಕ್ಕೆ ಬಂದಿಲ್ಲ. ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯೋ ಪ್ರಯತ್ನ ಮಾಡಲಾಗುತ್ತಿದೆ. ಕೇವಲ ಗೋವಾಕ್ಕೆ ಅಲ್ಲ, ದಾಬೋಲ್​ದಿಂದ ಯೋಜನೆ ಇದೆ. ಇದು ಎಲ್ಲರಿಗೂ ಅನಕೂಲವಾಗುವ ಯೋಜನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ

ಮಹದಾಯಿ ಏನೇನೂ ಒಳ್ಳೆದ ಆಗಿದೆ ಅದು ನಮ್ಮ ಕಾಲದಲ್ಲಿ. ಕಾಂಗ್ರೆಸ್ ಮಹದಾಯಿ ವಿಚಾರವಾಗಿ ಏನೂ ಕೆಲಸ ಮಾಡಿಲ್ಲ. ಮನೆ ಮುಂದಿರುವ ಗಿಡ ಕಡೆಯೋಕೆ ಆರು ತಿಂಗಳಬೇಕು. ನನಗೆ ಇರುವ ಮಾಹಿತಿ ಪ್ರಕಾರ 2 ಲಕ್ಷ ಗಿಡ ಕಡಿಬೇಕು. ನಾವು ಕರ್ನಾಟಕದ ಹಿತ ಕಾಪಾಡಲು ಕೆಲಸ ಮಾಡುತ್ತೇವೆ. ಕಾಂಗ್ರೆಸ್​ನವರು ಹನಿ ನೀರು ಕೊಡಲ್ಲ ಅಂದರು. ಇದು ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಟೈಗರ್ ಕಾರಿಡಾರ್ ಇಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.