AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown Extension: ಜೂನ್ 30ರ ವರೆಗೆ ಲಾಕ್​ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ಕೊವಿಡ್-19 ಪ್ರಕರಣಗಳ ಹರಡುವಿಕೆ ತಡೆಗಟ್ಟಲು ಲಾಕ್​ಡೌನ್, ಕಠಿಣ ನಿಯಮಾವಳಿಗಳನ್ನು ಜೂನ್ 30ರ ವರೆಗೆ ಮುಂದುವರಿಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

Lockdown Extension: ಜೂನ್ 30ರ ವರೆಗೆ ಲಾಕ್​ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ
ಲಾಕ್​ಡೌನ್​
TV9 Web
| Edited By: |

Updated on:Aug 14, 2021 | 1:11 PM

Share

ದೆಹಲಿ: ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಹಂತ ಹಂತವಾಗಿ ಇಳಿಕೆಯಾಗುತ್ತಿದ್ದರೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆ ಆಗಿಲ್ಲ. ಹಾಗಾಗಿ ಕೊವಿಡ್-19 ಪ್ರಕರಣಗಳ ಹರಡುವಿಕೆ ತಡೆಗಟ್ಟಲು ಲಾಕ್​ಡೌನ್, ಕಠಿಣ ನಿಯಮಾವಳಿಗಳನ್ನು ಜೂನ್ 30ರ ವರೆಗೆ ಮುಂದುವರಿಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಏಪ್ರಿಲ್ 29ರಂದು ಕೇಂದ್ರ ಗೃಹ ಇಲಾಖೆ ಹೊರಡಿಸಿದ್ದ ಆಜ್ಞೆಯಂತೆ ಮತ್ತು ಏಪ್ರಿಲ್ 25ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದ್ದ ಮಾರ್ಗಸೂಚಿಗಳಂತೆ ಕೊವಿಡ್-19 ಸೋಂಕು ತಡೆಯ ಮಾರ್ಗಸೂಚಿಗಳು ಜೂನ್ 30ರ ವರೆಗೆ ಊರ್ಜಿತವಾಗಿರುತ್ತದೆ ಎಂದು ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿರುವ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಕೊರೊನಾ ಸೋಂಕಿನ ವಿರುದ್ಧ ಕೈಗೊಂಡ ಕಠಿಣ ನಿಯಮಾವಳಿಗಳು, ಕಂಟೈನ್​ಮೆಂಟ್ ಮತ್ತು ಇತರ ನಿಯಮಾವಳಿಗಳಿಂದಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕೊರೊನಾ ಹೊಸ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದರೂ ಸದ್ಯ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಇನ್ನಷ್ಟು ಇಳಿಕೆಯಾಗಬೇಕಿದೆ. ಹಾಗಾಗಿ, ಸೂಕ್ತ ನಿಯಮಗಳನ್ನು ಮುಂದುವರಿಸಲು ಪತ್ರದಲ್ಲಿ ಹೇಳಲಾಗಿದೆ.

ನಿಯಮಾವಳಿಗಳಲ್ಲಿ ಯಾವುದೇ ಸಡಿಲಿಕೆ ಮಾಡುವುದಿದ್ದರೂ ಅದನ್ನು ಹಂತಹಂತವಾಗಿ, ಪರಿಸ್ಥಿತಿಯನ್ನು ಅವಲೋಕಿಸಿ ಮಾಡಬೇಕು. ಸ್ಥಳೀಯ ವ್ಯವಸ್ಥೆ, ಸಂಪನ್ಮೂಲವನ್ನು ಕೂಡ ಈ ನೆಲೆಯಲ್ಲಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ. ಕೊರೊನಾದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು, ಪ್ರಭಾವ ಕಡಿಮೆ ಮಾಡಲು ಜೂನ್ 30ರ ವರೆಗೆ ಕಠಿಣ ನಿಯಮಾವಳಿ ಮುಂದುವರಿಸುವಂತೆ ಸಲಹೆ ನೀಡಲಾಗಿದೆ.

ಕೇವಲ ಹೆಸರಿಗಷ್ಟೇ ನಿಯಮಾವಳಿಗಳು ಇರುವುದಲ್ಲ. ಅದನ್ನು ಸೂಕ್ತ ರೀತಿಯಲ್ಲಿ ಜಾರಿಗೆ ತರಬೇಕು. ಅಧಿಕಾರಿಗಳು, ಜಿಲ್ಲಾ, ಸ್ಥಳೀಯ ಆಡಳಿತ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನಸಾಮಾನ್ಯರು ಕೊವಿಡ್ ನಿಯಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕ ಕೊರೊನಾ ಪ್ರಕರಣಗಳು ಕರ್ನಾಟಕದಲ್ಲಿ ಇಂದು (ಮೇ 28) ಒಂದೇ ದಿನ 22,823 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 52,253 ಜನರು ಕೊವಿಡ್​ನಿಂದ ಗುಣಮುಖರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 5736 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇಂದು ಒಂದೇ ದಿನ 31,237 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ  1,38,983 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.16.42ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷ ಒಳಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Tv9 Digital Live: ಕೊರೊನಾ ಸಂಕಷ್ಟದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಕಾಳಜಿ ಹೇಗೆ? ಬಂಧುಗಳ, ಸರ್ಕಾರದ ಜವಾವ್ದಾರಿ ಏನು?

ವಿಮಾನದ ಮೂಲಕ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಸ್ಪ್ರೇ; ನಾಳೆ ಕಾರ್ಯಾಚರಣೆ ಆರಂಭ

Published On - 9:48 pm, Fri, 28 May 21

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು