
ಚಿಕ್ಕಮಗಳೂರು.ಬೆಂಗಳೂರು ದಕ್ಷಿಣ, (ಜುಲೈ 26): ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು (Chikkamgaluru) ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ. ಡೆತ್ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಮಧು(28) ನೇಣಿಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. IB ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಮಧು, ಇತ್ತೀಚೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿತ್ತು. ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಚಿಕ್ಕನಹಳ್ಳಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಬೆಂಗಳೂರು ದಕ್ಷಿಣ: ಮಗನ ಸಾವಿಗೆ ಮನನೊಂದು ತಾಯಿ ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆ ಹಾರೋಹಳ್ಳಿ ಪಟ್ಟಣದಲ್ಲಿ ನಡೆದಿದೆ. ಹಾರೋಹಳ್ಳಿಯ ಜನತಾ ಕಾಲೋನಿ ನಿವಾಸಿ ಹೊಂಬಮ್ಮ(57) ಮೃತ ಮಹಿಳೆ. ವಾರದ ಹಿಂದೆ ಹೊಂಬಮ್ಮ ಮಗ ಅರುಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ. ಮಂಗಳೂರು ಜಿಲ್ಲೆ ಬೆಳ್ತಂಗಡಿಯಲ್ಲಿ ಸಾವಿಗೆ ಶರಣಾಗಿದ್ದ. ಇಂದು (ಜುಲೈ 25) ಮಗನ ತಿಥಿ ಕಾರ್ಯ ಮಾಡಿ ಬಳಿಕ ತಾಯಿ ಹೊಂಬಮ್ಮ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಮೃತ್ಯುಂಜಯ ಶಾಲೆ ಆವರಣದಲ್ಲಿ ನಡೆದಿದೆ. ಮೊಹಮ್ಮದ್ ಶಾ ಗೌಸ್ ರಟ್ಟೀಹಳ್ಳಿ(12) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಕ್ಕಳನ್ನು ಮಧ್ಯಾಹ್ನದ ಊಟಕ್ಕೆ ಬಿಟ್ಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.