AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಮುಂದುವರಿಕೆ ಬಗ್ಗೆ ಒಲವು ವ್ಯಕ್ತಪಡಿಸಿದ ಕೇಂದ್ರ ಸಚಿವ ಸದಾನಂದ ಗೌಡ

ಕೊವಿಡ್ ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಮಂತ್ರಿಗಳು, ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರವು ರಾಜ್ಯಕ್ಕೆ ಆಮ್ಲಜನಕ, ರೆಮ್ಡೆಸಿವರ್ ಮತ್ತಿತರ ಔಷಧಗಳು ಸೇರಿದಂತೆ ಎಲ್ಲ ರೀತಿಯಿಂದ ನೆರವು ನೀಡುತ್ತಿದೆ. ಈ ಮಹಾಮಾರಿಯನ್ನು ಮಣಿಸಲು ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಬೇಕು ಎಂದರು.

ಲಾಕ್​ಡೌನ್ ಮುಂದುವರಿಕೆ ಬಗ್ಗೆ ಒಲವು ವ್ಯಕ್ತಪಡಿಸಿದ ಕೇಂದ್ರ ಸಚಿವ ಸದಾನಂದ ಗೌಡ
ಕೇಂದ್ರ ಸಚಿವ ಡಿ ವಿ ಸದಾನಂದಗೌಡ
Follow us
guruganesh bhat
|

Updated on: May 16, 2021 | 9:24 PM

ಬೆಂಗಳೂರು: ನಗರದಲ್ಲಿರುವ ಕೇಂದ್ರ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯನ್ನು ಇನ್ನೆರಡು ವಾರಗಳಲ್ಲಿ 100 ಹಾಸಿಗೆಯ ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ.ವಿ.ಸದಾನಂದ ಗೌಡ ಅವರು ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕಟ್ಟುನಿಟ್ಟಾಗಿ ಲಾಕ್​ಡೌನ್ ವಿಧಿಸಿದ್ದರ ಫಲವಾಗಿ ದೆಹಲಿ ಮುಂಬೈನಂತಹ ಬೃಹತ್ ನಗರಗಳಲ್ಲಿ ಕೊವಿಡ್ ನಿಯಂತ್ರಣಕ್ಕೆ ಬಂದಿದೆ. ಲಾಕ್​ಡೌನ್ ನಂತರ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಕೊವಿಡ್ ಸೋಂಕಿನ ಸರಪಣಿ ಮುರಿಯಬೇಕಾದ ಅವಶ್ಯಕತೆ ಇದೆ, ಮೊದಲು ಜೀವ ಉಳಿಯಬೇಕು ಎಂಬ ಮೂಲಕ ಲಾಕ್​ಡೌನ್ ಮುಂದುವರೆಸುವ ಕುರಿತು ಒಲವು ವ್ಯಕ್ತಪಡಿಸಿದರು. ಕೊವಿಡ್ ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಮಂತ್ರಿಗಳು, ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರವು ರಾಜ್ಯಕ್ಕೆ ಆಮ್ಲಜನಕ, ರೆಮ್ಡೆಸಿವರ್ ಮತ್ತಿತರ ಔಷಧಗಳು ಸೇರಿದಂತೆ ಎಲ್ಲ ರೀತಿಯಿಂದ ನೆರವು ನೀಡುತ್ತಿದೆ. ಈ ಮಹಾಮಾರಿಯನ್ನು ಮಣಿಸಲು ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಬೇಕು ಎಂದರು.

ಸ್ಥಳೀಯ ಶಾಸಕರೂ ಆಗಿರುವ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಉತ್ತರಹಳ್ಳಿ ಹೋಬಳಿಯಲ್ಲಿರುವ ಆಯುಷ್ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸ್ಥೆಯ ನಿರ್ದೇಶಕಿ ಡಾ ಸುಲೋಚನಾ ಭಟ್, ಹಿರಿಯ ಅಧಿಕಾರಿಗಳು, ಲ್ಯಾಂಡ್ ಆರ್ಮಿ ಇಂಜಿನಿಯರ್​ಗಳ ಜೊತೆ ಚರ್ಚಿಸಿ, ತ್ವರಿತವಾಗಿ ಕೊವಿಡ್ ಸೋಂಕಿತರ ಆರೈಕೆಗೆ ಸಿದ್ಧಪಡಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸದಾನಂದ ಗೌಡ ಇನ್ನು 2 ವಾರಗಳಲ್ಲಿ ಇದು ಕೋವಿಡ್ ಸೋಂಕಿತರ ಸೇವೆಗೆ ಲಭ್ಯವಾಗಲಿದೆ. ಇದರಲ್ಲಿ 100 ಆಮ್ಲಜನಕ, ಹಾಸಿಗೆಗಳು ಸೇರಿದಂತೆ ಎಲ್ಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಚನ್ನೇನಹಳ್ಳಿಯ ಆರ್​ಎಸ್​ಎಸ್​ನ ಜನಸೇವಾ ವಿದ್ಯಾಕೇಂದ್ರದವರು ಸ್ಥಾಪಿಸಿರುವ ಕೋವಿಡ್ ಆರೈಕೆ ಕೇಂದ್ರ ಹಾಗೂ ಜ್ಞಾನಭಾರತಿ ಕ್ಯಾಂಪಸ್ಸಿನಲ್ಲಿ ಆರಂಭಿಸಿರುವ ತಾತ್ಕಾಲಿಕ ಕೊವಿಡ್ ಶುಶ್ರೂಷಾ ಕೇಂದ್ರಕ್ಕೆ ಸದಾನಂದ ಗೌಡ ಭೇಟಿ ನೀಡಿ ವೀಕ್ಷಿಸಿದರು. ಇದಕ್ಕೂ ಮುನ್ನ ನಂದಿನಿ ಲೇಔಟ್’ನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ 80-ಬೆಡ್ ತಾತ್ಕಾಲಿಕ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿದರು.

ಇದನ್ನೂ ಓದಿ:  Covid-19 Karnataka Update: ಕಳೆದ 24 ಗಂಟೆಗಳಲ್ಲಿ ಬೆಂಗಳೂರಲ್ಲಿ 8,344, ಇತರ ಜಿಲ್ಲೆಗಳಲ್ಲಿ 23,197 ಕೊವಿಡ್ ಸೋಂಕಿತರು ಪತ್ತೆ

ಗ್ರಾಮೀಣ ಪ್ರದೇಶಗಳಿಗೆ ಪ್ರತ್ಯೇಕ ಕೊವಿಡ್ ಗೈಡ್​ಲೈನ್ಸ್; ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ (Central Minister DV Sadananda shows interest on Continue lockdown in Karnataka)

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ