ಸೂಕ್ಷ್ಮ ನೀರಾವರಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ 2ನೇ ಕಂತಿನ ಹಣ ಬಿಡುಗಡೆ
ಸೂಕ್ಷ್ಮ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 2ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2ನೇ ಕಂತಿನ ಅನುದಾನ ರಿಲೀಸ್ ಆಗಿದ್ದು, 2021-22ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.
ಸೂಕ್ಷ್ಮ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 2ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2ನೇ ಕಂತಿನ ಅನುದಾನ ರಿಲೀಸ್ ಆಗಿದ್ದು, 2021-22ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಈಗಾಗಲೇ 300 ಕೋಟಿ ರೂಪಾಯಿಯನ್ನು ಕೇಂದ್ರ ಬಿಡುಗಡೆ ಮಾಡಿತ್ತು. ಉಳಿದ 200 ಕೋಟಿ ಅನುದಾನವನ್ನು ನಿನ್ನೆ (ಶುಕ್ರವಾರ) ರಿಲೀಸ್ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ತೋಟಗಾರಿಕೆ, ಕೃಷಿ, ಜಲಾನಯನ ಅಭಿವೃದ್ಧಿ ಇಲಾಖೆಗಳನ್ನು ಒಳಗೊಂಡಿರುತ್ತದೆ. ಕೇಂದ್ರ ಹಂಚಿಕೆ ಮಾಡಿದ ಅನುದಾನದಲ್ಲಿ ಶೇ. 76ರಷ್ಟು ಸಾಮಾನ್ಯ ವರ್ಗಕ್ಕೆ, ಶೇ.17ರಷ್ಟು ಪರಿಶಿಷ್ಟ ಜಾತಿಗೆ ಹಾಗೂ ಶೇ.7ರಷ್ಟು ಪರಿಶಿಷ್ಟ ಪಂಗಡಕ್ಕೆ ನಿಗದಿಪಡಿಸಲಾಗಿದೆ. 2020-21ನೇ ಸಾಲಿನಲ್ಲಿ ಕೇಂದ್ರವು ಸೂಕ್ಷ್ಮ ನೀರಾವರಿ ಯೋಜನೆಯಡಿ 400 ಕೋಟಿ ರೂ ಬಿಡುಗಡೆ ಮಾಡಿತ್ತು. ಈ ಬಾರಿ ಶೇ.25 ಹೆಚ್ಚು ಅನುದಾನ ಪಡೆಯಲಾಗಿದೆ.
ಬೀದರ್: ಗೋಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಚಿವ ಪ್ರಭು ಚೌಹಾಣ್
ಬೀದರ್: ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭೂಮಿ ಪೂಜೆ ನೆರವೇರಿಸಿದ್ದಾರೆ. 10 ಎಕರೆ ಪ್ರದೇಶದಲ್ಲಿ ಗೋಶಾಲೆ ನಿರ್ಮಾಣವಾಗಲಿದೆ. 1.50 ಕೋಟಿ ರೂಪಾಯಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣವಾಗಲಿದೆ. ಹೋಮ ಹವನ ನೆರವೇರಿಸಿ ಗೋ ಮಾತೆಗೆ ಪೂಜೆ ಮಾಡುವ ಮೂಲಕ ಗೋ ಶಾಲೆ ನಿರ್ಮಾಣಕ್ಕೆ ಚಾಲನೆ ಪ್ರಭು ಚೌಹಾಣ್ ಚಾಲನೆ ನೀಡಿದ್ದಾರೆ.
ಏಪ್ರಿಲ್ 5ಕ್ಕೆ ರಾಜ್ಯಕ್ಕೆ ಪ್ರಧಾನಿ ಆಗಮಿಸುವ ನಿರೀಕ್ಷೆ:
ಹುಬ್ಬಳ್ಳಿ: ಏಪ್ರಿಲ್ 5ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುವ ನಿರೀಕ್ಷೆ ಇದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಲ್ಲಾ ಇಲಾಖೆ ಕೆಲಸಗಳು ಆಗಬೇಕು. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವು ಎಫ್ಡಿಐನಲ್ಲಿ ದೇಶದಲ್ಲೆ ಮುಂದಿದ್ದೇವೆ. ಮುಂದಿನ ತಿಂಗಳು 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕ್ಷೀರ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನ ಮಾಡಲಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಸಂಪುಟ ವಿಸ್ತರಣೆಗೆ ಅಮಿತ್ ಶಾ ರಾಜ್ಯಕ್ಕೆ ಬರುತ್ತಿಲ್ಲ; ಸಿಎಂ ಬೊಮ್ಮಾಯಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಾಗಿ ಅಮಿತ್ ಶಾ ಬರುತ್ತಿಲ್ಲ. ಸರ್ಕಾರಿ ಕಾರ್ಯಕ್ರಮ ಹಿನ್ನೆಲೆ ಅಮಿತ್ ಶಾ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದ ಅವರು, ವರಿಷ್ಠರು ಕರೆ ಕೊಟ್ಟರೆ ನಾನೇ ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಏಪ್ರಿಲ್ 5ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರುವ ನಿರೀಕ್ಷೆ ಇದೆ; ಬಸವರಾಜ ಬೊಮ್ಮಾಯಿ