AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ ಕರ್ನಾಟಕದ ಪರವಿದೆ: ಸಂಸದ ತೇಜಸ್ವಿ ಸೂರ್ಯ

ಇಂದು ಸಿಎಂ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಮಾಡಲಾಗಿದೆ. ಕಾವೇರಿ ವಿಚಾರವಾಗಿಯೂ ಚರ್ಚಿಸಲಾಗಿದೆ. ಈ ಕುರಿತಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದು, ಬೆಂಗಳೂರು ಕಾವೇರಿ ನೀರಿನ ಮೇಲೆ ಅವಲಂಬನೆ ಆಗಿದೆ. ಕಾವೇರಿ ನೀರು ವಿಚಾರದಲ್ಲಿ ಕೇಂದ್ರ ಬಿಜೆಪಿ ಕರ್ನಾಟಕದ ಪರ ಇದೆ ಎಂದು ಹೇಳಿದ್ದಾರೆ.

Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 23, 2023 | 3:08 PM

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಾವೇರಿ ನೀರಿನ ಮೇಲೆ ಅವಲಂಬನೆ ಆಗಿದೆ. ಕಾವೇರಿ ನೀರು ವಿಚಾರದಲ್ಲಿ ಕೇಂದ್ರ ಬಿಜೆಪಿ ಕರ್ನಾಟಕದ ಪರ ಇದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮವದವರೊಂದಿಗೆ ಮಾತನಾಡಿದ ಅವರು, ಕಾವೇರಿ ಬೋರ್ಡ್ ಮುಂದೆ ರಾಜ್ಯ ಸರ್ಕಾರ ಸರಿಯಾಗಿ ವಾದ ಮಾಡಿಲ್ಲ. ಇದಕ್ಕೆ ನಮ್ಮ ವಿರೋಧ ಮಾಡಿದ್ದೇವೆ. ಆದರೆ ನೆಲ, ಜಲ ವಿಷಯದಲ್ಲಿ ನಾವು ಸರ್ಕಾರದ ಜೊತೆ ಇರುತ್ತೇವೆ ಅಂತ ಹೇಳಿದ್ದೇವೆ ಎಂದರು.

ಶುಕ್ರವಾರ ಅರ್ಜಿ ವಿಚಾರ‌ಣೆಗೆ ಬಂದಾಗ ಸಮರ್ಥ ವಾದ ಮಂಡಿಸಬೇಕು. ತಮಿಳುನಾಡು ಹೆಚ್ಚು ನೀರು ಸಂಗ್ರಹ ಮಾಡಿದ್ದ ಬಗ್ಗೆ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಬೇಕು. ಕರ್ನಾಟಕದಲ್ಲಿ ಮುಂಗಾರು ಮುಗಿದು ಹೋಗಿದ್ದು, 42% ಮಳೆ ಕೊರತೆ ಆಗಿದ್ದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು ಅಂತ ತಿಳಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ಕಿಚ್ಚು.. ಅನ್ನದಾತರ ಸಿಟ್ಟು: ಸರ್ವಪಕ್ಷ ಸಭೆ ಬಳಿಕ ವಿರೋಧ ಪಕ್ಷಗಳ ನಾಯಕರು ಹೇಳಿದ್ದೇನು?

ಬಿಜೆಪಿ ಸರ್ಕಾರ ಕರ್ನಾಟಕದ ಪರವಾಗಿಯೇ ಹಿಂದೆಲ್ಲಾ ನಿಲುವು ತಳೆದಿದೆ. ಈಗ ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡುವುದು ಕರ್ನಾಟಕದ ಪ್ರಾಥಮಿಕ ಕೆಲಸವಾಗಿದೆ ಎಂದರು. ಮಹದಾಯಿ, ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರ ಕೋರ್ಟ್​​ನಲ್ಲಿ ಇದೆ. ಇದನ್ನು ಕೋರ್ಟ್ ವ್ಯಾಪ್ತಿಯಲ್ಲಿ ಇತ್ಯರ್ಥ ಮಾಡಿಕೊಳ್ಳಲು‌ ಸಲಹೆ ಕೊಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾವೇರಿ ಪ್ರತಿಭಟನೆ, ಸೋತು ಸುಣ್ಣವಾಗಿರುವ ಬಿಜೆಪಿಯಿಂದ ಭಾವನಾತ್ಮಕ ರಾಜಕೀಯ; ಎಂಬಿ ಪಾಟೀಲ್ ಕಿಡಿ

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಬಳಿ ನಿಯೋಗ ಹೋಗುವುದು ರಾಜಕೀಯ ವಿಚಾರ. ಮೊದಲು ಕೋರ್ಟ್​ನಲ್ಲಿ ಪ್ರಬಲವಾಗಿ ವಾದ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ: ಮಂಡ್ಯ ಸಂಸದೆ ಸುಮಲತಾ

ವಿಧಾನಸೌಧದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಮಾತನಾಡಿದ್ದು, ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇವೆ. ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಇಡಿ ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಂಸದೆ ಸುಮಲತಾ

ಚಂದ್ರಯಾನ 3 ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಿಜವಾಗಿಯೂ ಇವತ್ತು ಐತಿಹಾಸಿಕ ದಿನ. ಹೆಮ್ಮೆಯ ದಿನ. ಈ ದಿನಕ್ಕೊಸ್ಕರ ಇಡಿ ದೇಶ‌‌ ಕಾಯುತ್ತಿದೆ. ಚಂದ್ರಯಾನ 3 ಯಶಸ್ವಿಯಾಗಲಿ‌ ಎಂದು ಇಡಿ ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Wed, 23 August 23

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ