ರಾಜ್ಯಪಾಲ ಗೆಹ್ಲೋಟ್‌ಗೆ ದಿಢೀರ್ Z ಶ್ರೇಣಿಯ ಭದ್ರತೆ, ಅಚ್ಚರಿ ಮೂಡಿಸಿದ ಕೇಂದ್ರದ ನಡೆ

|

Updated on: Oct 14, 2024 | 9:08 PM

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರದಾದ್ಯಂತ ಸುದ್ದಿಯಲ್ಲಿದ್ದಾರೆ. ಈ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರ ವಿರುದ್ಧ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಅವರಿಗೆ ಬುಲೆಟ್​ ಪ್ರೂಫ್​ ಕಾರು ನೀಡಲಾಗಿತ್ತು. ಇದೀಗ ಅವರಿಗೆ ಕೇಂದ್ರ ಸರ್ಕಾರ ಮತ್ತಷ್ಟು ಭದ್ರತೆ ಹೆಚ್ಚಿಸಿದೆ.

ರಾಜ್ಯಪಾಲ ಗೆಹ್ಲೋಟ್‌ಗೆ ದಿಢೀರ್ Z ಶ್ರೇಣಿಯ ಭದ್ರತೆ, ಅಚ್ಚರಿ ಮೂಡಿಸಿದ ಕೇಂದ್ರದ ನಡೆ
ಥಾವರ್ ಚಂದ್ ಗೆಹ್ಲೋಟ್
Follow us on

ಬೆಂಗಳೂರು, (ಅಕ್ಟೋಬರ್ 14):  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ (Thawar Chand Gehlot) ಕೇಂದ್ರ ಸರ್ಕಾರ ಭದ್ರತೆ ಹೆಚ್ಚಿಸಿದೆ. ಹೌದು….ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಷ್ಟ್ರದಾದ್ಯಂತ ಸುದ್ದಿಯಲ್ಲಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ ‘Z’ ಕೆಟಗರಿ ಭದ್ರತೆ ಒದಗಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಭದ್ರತೆಯನ್ನು (Security) ಹೆಚ್ಚಿಸಲಾಗಿದೆ.

ಪ್ರಾಸಿಕ್ಯೂಷನ್ ಅನುಮತಿ ಬಳಿಕ ಇಲಾಖೆಯ ಸಲಹೆ ಮೇರೆಗೆ ಥಾವರ್ ಚಂದ್ ಗೆಹ್ಲೋಟ್ ಅವರು ಬುಲೆಟ್ ಪ್ರೂಫ್ ಕಾರು (Bullet Proof Car) ಪಡೆದಿದ್ದರು. ಇದೀಗ ಕೇಂದ್ರ ಸರ್ಕಾರವೇ ಗೆಹ್ಲೋಟ್ ಅವರಿಗೆ ‘Z’ ಕೆಟಗರಿ ಭದ್ರತೆ ನೀಡಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ  ಈ ಆದೇಶ ಹೊರಡಿಸಿದೆ.

ರಾಜ್ಯಪಾಲರು ಅಧಿಕಾರ ಸ್ವೀಕರಿಸಿದಾಗಲೇ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಆ ಕಾರನ್ನು ವಾಪಸ್ ಕಳುಹಿಸಿದ್ದರು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆಗಳು ನಡೆದಿತ್ತು. ಈ ಪ್ರತಿಭಟನೆಯ ನಂತರ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು.

ಇನ್ನು ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲರ ವಿರುದ್ಧ ಪ್ರತಿಭಟನೆಗಳು ಜೋರಾಗಿದ್ದವು. ರಾಜ್ಯದ ಹಲವೆಡೆ ರಾಜ್ಯಪಾಲರ ಪ್ರತಿಕೃತಿ ದಹನ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ವ ನಿಗದಿಯಾಗಿದ್ದ ಹಲವು ಕಾರ್ಯಕ್ರಮಗಳನ್ನು ರಾಜ್ಯಪಾಲರು ರದ್ದು ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ