Highway Projects: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ವಿವಿಧ ಜಿಲ್ಲೆಗಳ ಹೆದ್ದಾರಿಗೆ ಹಣ ಮಂಜೂರು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕಕ್ಕೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಭರ್ಜರಿ ಕೊಡುಗೆ ನೀಡಿದ್ದಾರೆ. ವಿವಿಧ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಗಾಗಿ ಹಣ ಮಂಜೂರು ಮಾಡಿದ್ದಾರೆ.

Highway Projects: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ವಿವಿಧ ಜಿಲ್ಲೆಗಳ ಹೆದ್ದಾರಿಗೆ ಹಣ ಮಂಜೂರು
ನಿತಿನ್​ ಗಡ್ಕರಿ

Updated on: Mar 24, 2023 | 7:53 AM

ಮುಖ್ಯಾಂಶಗಳು

  • ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ್ಕೆ ಭರ್ಜರಿ ಕೊಡುಗೆ ನೀಡಿದ ಕೇಂದ್ರ ಸರ್ಕಾರ
  • ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಕಾಮಗಾರಿಗಳಿಗಾಗಿ ಹಣ ಮಂಜೂರು ಮಾಡಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ
  • ಕಾಮಗಾರಿಗಳ ವಿವರಣೆ ನೀಡಿದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ

ನವದೆಹಲಿ: ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗಾಗಿ(highway projects) ಕರ್ನಾಟಕಕ್ಕೆ (Karnataka) 1,345 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ(Nitin Gadkari) ಮಾಹಿತಿ ನೀಡಿದ್ದಾರೆ. ಕಾರವಾರ ಜಿಲ್ಲೆಗಳ್ಲಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ 18 ಕಿ.ಮೀಟರ್​ ಉದ್ದದ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಒಟ್ಟು 232.84 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಅವರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ: 9ನೇ ಶೆಡ್ಯೂಲ್​ಗೆ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ವೆಂಕಟೇಶ್ವರ ಕ್ಯಾಂಪ್​ನಿಂದ ಧಡೇಸ್ಗೂರು ವರೆಗೆ ಸುಮಾರು 13.8 ಕಿ.ಮೀಟರ್​ ಉದ್ದದ ರಸ್ತೆಯನ್ನು ವಿಸ್ತರಣೆ ಮಾಡಲು 142 ಕೋಟಿ ರೂ. ಹಾಗೂ ಇದೇ ಹೆದ್ದಾರಿಯ ಸಿಂದಿಗೇರಿ-ಬಳ್ಳಾರಿ ವಿಭಾಗದಲ್ಲಿ ರಸ್ತೆ ವಿಸ್​ತರಣೆಗೆ 120 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 69 ಹೊನ್ನಾವರ-ಚಿತ್ತೂರು ವಿಭಾಗದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 198 ಕೋಟಿ ರೂ. ಮಂಜೂರು ಮಾಡಲಾಗಿದೆ. ಇದೇ ಹೆದ್ದಾರಿಯಲ್ಲಿ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಹಾಗು ಉತರ ಕಾಮಗಾರಿಗಳಿಗೆ 653 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಚಿವ ನಿತಿನ್​ ಗಡ್ಕರಿ ವಿವರಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us