AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ

ಕೇಂದ್ರ ಸರ್ಕಾರವು ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದೆ. ಸಚಿವ ಕುಮಾರಸ್ವಾಮಿ ಅವರ ಮನವಿ ಮೇರೆಗೆ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸ್ಪಂದಿಸಿದ್ದಾರೆ. ಸೋಮವಾರದಿಂದಲೇ ತಂಬಾಕು ಖರೀದಿ ಆರಂಭವಾಗಲಿದ್ದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆಗಾರರು ಎದುರಿಸುತ್ತಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ
ಪಿಯೂಷ್ ಗೋಯಲ್ ಜೊತೆ ಮಾತುಕತೆImage Credit source: Google
ಪ್ರಸನ್ನ ಹೆಗಡೆ
|

Updated on: Mar 13, 2026 | 4:35 PM

Share

ದೆಹಲಿ, ಮಾರ್ಚ್​​ 13: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದ್ದು, ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಗಿದೆ.  ಆ ಬೆನ್ನಲ್ಲೇ  ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ.

ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರ ಬೇಡಿಕೆಗಳಿಗೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಚಿವ ಗೋಯಲ್ ಅವರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಬರುವಂತೆ ಸೂಚಿಸಿರೋದಾಗಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಮೈಸೂರು-ಕೊಡಗು ಸಂಸದರಾದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್ , ಜೆಡಿಎಸ್ ಹಿರಿಯ ಮುಖಂಡ ಕೃಷ್ಣನಾಯಕ, ಕೋಲಾರ ಸಂಸದ ಮಲ್ಲೇಶ್ ಬಾಬು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್, ಸೋಮವಾರದಿಂದ ತಂಬಾಕು ಖರೀದಿಗೆ ಸಚಿವ ಪಿಯೂಷ್ ಗೋಯಲ್ ಸೂಚನೆ ನೀಡಿರೋದಾಗಿ ತಿಳಿಸಿದ್ದಾರೆ. ಅಲ್ಲದೆ, 190 ದೇಶಗಳ ರಾಯಭಾರಿಗಳಿಗೆ ಪತ್ರ ಬರೆದು ಮುಕ್ತ ಮಾರುಕಟ್ಟೆಯಲ್ಲಿ ತಂಬಾಕು ಖರೀದಿಗೆ ಕೋರಿಕೆ ಸಲ್ಲಿಸಲಾಗುವುದು. ಈವರೆಗೆ ರಪ್ತು ಮಾಡದಿರುವ ದೇಶಗಳಿಗೂ ತಂಬಾಕು ರಪ್ತು ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವರು ಭರವಸೆ ನೀಡಿರೋದಾಗಿ ಸಾ.ರಾ.ಮಹೇಶ್​​ ಹೇಳಿದ್ದಾರೆ.

ಶಾಸಕ ಎ. ಮಂಜು ಮಾತನಾಡಿ, ಕರ್ನಾಟಕದಲ್ಲಿ 100 ದಶಲಕ್ಷ ಟನ್ ತಂಬಾಕು ಬೆಳೆಯಲು ತಂಬಾಕು ಮಂಡಳಿ ಅವಕಾಶ ನೀಡಿದೆ. ಈ ವರ್ಷ 80 ದಶಲಕ್ಷ ಟನ್ ತಂಬಾಕು ಬೆಳೆಯಲಾಗಿದೆ. ನಾವು ಬೆಳೆದ ಸೊಪ್ಪನ್ನು ಸರ್ಕಾರ ನಿರ್ಧಾರ ಮಾಡಿದ ಬೆಲೆಯಲ್ಲಿ ಖರೀದಿ ಮಾಡಬೇಕಿದೆ. ಈ ಹಿಂದೆ ಖರೀದಿ ಭರವಸೆ ನೀಡಿದ ಕಂಪನಿಗಳು ಖರೀದಿ ಮಾಡಿಲ್ಲ. ಹೀಗಾಗಿ ಈಗ ಬೆಳೆದ ಸೊಪ್ಪನ್ನು ಕೂಡಲೇ ಖರೀದಿ ಮಾಡಬೇಕು. ಕೇಂದ್ರ ಸರ್ಕಾರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಮನವಿ ಮಾಡಿರೋದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ