AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET 2021: ಸಿಇಟಿ ಪರೀಕ್ಷೆಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನ; ಅಪ್ಲೈ ಮಾಡೋದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ

ಸಾಮಾನ್ಯ ಪ್ರವೇಶ ಪರೀಕ್ಷೆ- 2021 (ಸಿಇಟಿ) ಬರೆಯಲು ಅರ್ಹ ವಿದ್ಯಾರ್ಥಿಗಳು ಆನ್​ಲೈನ್ ವಿಧಾನದ ಮೂಲಕ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇಳಿಕೊಂಡಿದೆ.

CET 2021: ಸಿಇಟಿ ಪರೀಕ್ಷೆಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನ; ಅಪ್ಲೈ ಮಾಡೋದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Jun 14, 2021 | 7:10 PM

Share

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ- 2021 (ಸಿಇಟಿ) ಬರೆಯಲು ಅರ್ಹ ವಿದ್ಯಾರ್ಥಿಗಳು ಆನ್​ಲೈನ್ ವಿಧಾನದ ಮೂಲಕ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇಳಿಕೊಂಡಿದೆ. ಸರ್ಕಾರದ ಆದೇಶದಂತೆ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಬಿ ಫಾರ್ಮ, 2ನೇ ವರ್ಷದ ಬಿ ಫಾರ್ಮ, ಫಾರ್ಮಾ ಡಿ, ಕೃಷಿ ವಿಜ್ಞಾನ ಕೋರ್ಸ್​ಗಳ ಮತ್ತು ವೆಟರ್ನರಿ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಯುವ ಪರೀಕ್ಷೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ. ಅದರಲ್ಲಿ ಪಾಲ್ಗೊಳ್ಳಲು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಇಂದು (ಜೂನ್ 14) ಹೊರಡಿಸಿರುವ ನೋಟಿಫಿಕೇಷನ್ ಮುಲಕ ಕೇಳಿಕೊಳ್ಳಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ 2021, ಮುಂಬರುವ ಆಗಸ್ಟ್ 28 ಮತ್ತು ಆಗಸ್ಟ್ 29ರಂದು ನಡೆಯಲಿರುವ ಬಗ್ಗೆ ದಿನಾಂಕ ಘೋಷಿಸಲಾಗಿದೆ. ಇದೀಗ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ನಿಗದಿತ ಲಿಂಕ್ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ಅಭ್ಯರ್ಥಿಯ ಅರ್ಹತೆ, ಶೈಕ್ಷಣಿಕ ಅರ್ಹತೆಗಳನ್ನು ಇಲಾಖೆಯ ವೆಬ್​ಸೈಟ್​ನಲ್ಲಿ ನೀಡಲಾಗಿದೆ. ಈ ಎಲ್ಲಾ ವಿವರಗಳನ್ನು ಒಳಗೊಂಡ ‘ಯುಜಿಸಿಇಟಿ- 2021 ಮಾಹಿತಿ ಪುಸ್ತಕ’ ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ. ಅದನ್ನು ಅಭ್ಯರ್ಥಿಗಳು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ. ವೆಬ್​ಸೈಟ್ ವಿಳಾಸ ಈ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ಮತ್ತು ಹೆಚ್ಚಿನ ವಿವರಗಳಿಗೆ ಈ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ: https://kea.kar.nic.in/

ಸಿಇಟಿ- 2021 ಆನ್​ಲೈನ್ ಅರ್ಜಿಯನ್ನು ಮೊಬೈಲ್ ಮೂಲಕವೂ ಭರ್ತಿ ಮಾಡಬಹುದು. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ, ವಿಶೇಷ ಪ್ರವರ್ಗಗಳ ಮೂಲ ಪ್ರಮಾಣ ಪತ್ರ ಸಲ್ಲಿಸುವ ವೇಳಾಪಟ್ಟಿ ಇಲ್ಲಿದೆ.

  • ಸಿಇಟಿ- 2021 ನೋಂದಣಿ ಹಾಗೂ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ : ದಿನಾಂಕ 15-06-2021 ರ ಮಧ್ಯಾಹ್ನ 12 ಗಂಟೆಯಿಂದ ದಿನಾಂಕ 10-07-2021ರ ಸಂಜೆ 5.30ರ ವರೆಗೆ.
  • ಆನ್​ಲೈನ್ ಮೂಲಕ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 13-07-2021
  • ವಿಶೇಷ ಪ್ರವರ್ಗಗಳ ಮೂಲ ಪ್ರಮಾಣ ಪತ್ರಗಳನ್ನು ನಿಗದಿತ ದಿನಾಂಕದಂದು ಸಲ್ಲಿಸುವುದು (ವೆಬ್​ಸೈಟ್​ನ ಇ-ಮಾಹಿತಿ ಪುಸ್ತಕದಲ್ಲಿ ನೀಡಿರುವ ವೇಳಾಪಟ್ಟಿಯಂತೆ : 14-07-2021 ರಿಂದ 20-07-2021
  • ಆನ್​ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಮಾಹಿತಿಗಳನ್ನು ಅವಶ್ಯವಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳುವುದು: ದಿನಾಂಕ 19-07-2021 ಬೆಳಗ್ಗೆ 11 ರಿಂದ 22-07-2021ರ ಸಂಜೆ 5.30ರ ವರೆಗೆ
  • ಸಿಇಟಿ-2021 ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳುವುದು: 13-08-2021 ಬೆಳಗ್ಗೆ 11 ರಿಂದ

ಇದನ್ನೂ ಓದಿ: ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ

Published On - 6:18 pm, Mon, 14 June 21