ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ- 2021 (ಸಿಇಟಿ) ಬರೆಯಲು ಅರ್ಹ ವಿದ್ಯಾರ್ಥಿಗಳು ಆನ್ಲೈನ್ ವಿಧಾನದ ಮೂಲಕ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇಳಿಕೊಂಡಿದೆ. ಸರ್ಕಾರದ ಆದೇಶದಂತೆ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಬಿ ಫಾರ್ಮ, 2ನೇ ವರ್ಷದ ಬಿ ಫಾರ್ಮ, ಫಾರ್ಮಾ ಡಿ, ಕೃಷಿ ವಿಜ್ಞಾನ ಕೋರ್ಸ್ಗಳ ಮತ್ತು ವೆಟರ್ನರಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ಪರೀಕ್ಷೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ. ಅದರಲ್ಲಿ ಪಾಲ್ಗೊಳ್ಳಲು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಇಂದು (ಜೂನ್ 14) ಹೊರಡಿಸಿರುವ ನೋಟಿಫಿಕೇಷನ್ ಮುಲಕ ಕೇಳಿಕೊಳ್ಳಲಾಗಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆ 2021, ಮುಂಬರುವ ಆಗಸ್ಟ್ 28 ಮತ್ತು ಆಗಸ್ಟ್ 29ರಂದು ನಡೆಯಲಿರುವ ಬಗ್ಗೆ ದಿನಾಂಕ ಘೋಷಿಸಲಾಗಿದೆ. ಇದೀಗ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಿಗದಿತ ಲಿಂಕ್ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ಅಭ್ಯರ್ಥಿಯ ಅರ್ಹತೆ, ಶೈಕ್ಷಣಿಕ ಅರ್ಹತೆಗಳನ್ನು ಇಲಾಖೆಯ ವೆಬ್ಸೈಟ್ನಲ್ಲಿ ನೀಡಲಾಗಿದೆ. ಈ ಎಲ್ಲಾ ವಿವರಗಳನ್ನು ಒಳಗೊಂಡ ‘ಯುಜಿಸಿಇಟಿ- 2021 ಮಾಹಿತಿ ಪುಸ್ತಕ’ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅದನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ವೆಬ್ಸೈಟ್ ವಿಳಾಸ ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಕೆಗೆ ಮತ್ತು ಹೆಚ್ಚಿನ ವಿವರಗಳಿಗೆ ಈ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: https://kea.kar.nic.in/
ಸಿಇಟಿ- 2021 ಆನ್ಲೈನ್ ಅರ್ಜಿಯನ್ನು ಮೊಬೈಲ್ ಮೂಲಕವೂ ಭರ್ತಿ ಮಾಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ, ವಿಶೇಷ ಪ್ರವರ್ಗಗಳ ಮೂಲ ಪ್ರಮಾಣ ಪತ್ರ ಸಲ್ಲಿಸುವ ವೇಳಾಪಟ್ಟಿ ಇಲ್ಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ
Published On - 6:18 pm, Mon, 14 June 21