ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್ ಜೋನ್ ವಿದ್ಯಾರ್ಥಿಗಳಿಗೂ ಅವಕಾಶ
ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ. ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ […]
ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ.
ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ ಸರ್ಕಾರಕ್ಕೆ ಕೆಲ ಸೂಚನೆಗಳನ್ನು ಕೂಡಾ ನೀಡಿದೆ. ಎಲ್ಲಾ ಪರೀಕ್ಷಾರ್ಥಿಗಳಿಗೂ ಸರ್ಕಾರ ಅವಕಾಶ ನೀಡಬೇಕು. ಯಾವುದೇ ನೆಪ ಹೇಳಿ ಪರೀಕ್ಷಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು. ಹಾಗೇನೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಪೊಲೀಸರು ಕಂಟೈನ್ಮೆಂಟ್ ಜೋನ್ ವಿದ್ಯಾರ್ಥಿಗಳನ್ನು ತಡೆಯಬಾರದು. ವಿದ್ಯಾರ್ಥಿಗಳೊಂದಿಗೆ ತೆರಳಲು ಪೋಷಕರಿಗೂ ಅವಕಾಶ ನೀಡಬೇಕು ಎಂದು ಸ್ಪಷ್ಟವಾಗಿ ಪೊಲೀಸರಿಗೆ ಸೂಚಿಸಿದೆ. ಇದರೊಂದಿಗೆ ಸಿಇಟಿ ಪರೀಕ್ಷೆ ಕುರಿತು ಇದ್ದ ಗೊಂದಲ ಈಗ ನಿವಾರಣೆಯಾಗಿದ್ದು, ನಾಳೆಯಿಂದ ಪರೀಕ್ಷೆ ಆರಂಭವಾಗಲಿದೆ.
Published On - 7:58 pm, Wed, 29 July 20