ಮಂಗಳೂರು: ನಗರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.
ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.
BDA ಸೈಟ್ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್
Published On - 12:46 pm, Sat, 26 December 20