ದೇವಸ್ಥಾನದಲ್ಲಿ ಸರಗಳ್ಳತನಕ್ಕೆ ಯತ್ನಿಸಿದವನಿಗೆ ಸಾರ್ವಜನಿಕರಿಂದ ಧರ್ಮದೇಟು

ಕೊಪ್ಪಳ: ತಡರಾತ್ರಿ ದೇವಸ್ಥಾನದ ಆವರಣದಲ್ಲಿ ಮಹಿಳೆಯರ ಆಭರಣ ಕಿತ್ತು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಹುಲಿಗೆಮ್ಮದೇವಿ ದೇಗುಲ ಬಳಿ ನಡೆದಿದೆ. ನಿನ್ನೆ ರಾತ್ರಿ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸಿದ್ದ ಇಬ್ಬರು ಖದೀಮರ ಪೈಕಿ ಓರ್ವ ಆರೋಪಿಯನ್ನು ಸಾರ್ವಜನಿಕರು ಹಿಡಿದು ಮರಕ್ಕೆ ಕಟ್ಟಿಹಾಕಿ ಬಟ್ಟೆ ಕಿತ್ತು ಹೋಗುವ ರೀತಿ ಥಳಿಸಿದ್ದಾರೆ. ನಂತರ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊರ್ವ ಕಳ್ಳ ಪರಾರಿಯಾಗಿದ್ದಾನೆ. ಸದ್ಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನದಲ್ಲಿ ಸರಗಳ್ಳತನಕ್ಕೆ ಯತ್ನಿಸಿದವನಿಗೆ ಸಾರ್ವಜನಿಕರಿಂದ ಧರ್ಮದೇಟು
Follow us
|

Updated on: Dec 13, 2019 | 9:01 AM

ಕೊಪ್ಪಳ: ತಡರಾತ್ರಿ ದೇವಸ್ಥಾನದ ಆವರಣದಲ್ಲಿ ಮಹಿಳೆಯರ ಆಭರಣ ಕಿತ್ತು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಹುಲಿಗೆಮ್ಮದೇವಿ ದೇಗುಲ ಬಳಿ ನಡೆದಿದೆ. ನಿನ್ನೆ ರಾತ್ರಿ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸಿದ್ದ ಇಬ್ಬರು ಖದೀಮರ ಪೈಕಿ ಓರ್ವ ಆರೋಪಿಯನ್ನು ಸಾರ್ವಜನಿಕರು ಹಿಡಿದು ಮರಕ್ಕೆ ಕಟ್ಟಿಹಾಕಿ ಬಟ್ಟೆ ಕಿತ್ತು ಹೋಗುವ ರೀತಿ ಥಳಿಸಿದ್ದಾರೆ.

ನಂತರ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊರ್ವ ಕಳ್ಳ ಪರಾರಿಯಾಗಿದ್ದಾನೆ. ಸದ್ಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.