ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಅರ್ಜಿ ವಜಾ

ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮೂರನೇ ಆರೋಪಿ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ. ಹಾಲಾಶ್ರೀಗೆ ಜಾಮೀನು ನೀಡದಂತೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು.

ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಅರ್ಜಿ ವಜಾ
ಚೈತ್ರಾ ಮತ್ತು ಅಭಿನವ ಹಾಲಶ್ರೀ
Follow us
Shivaprasad
| Updated By: Rakesh Nayak Manchi

Updated on: Oct 16, 2023 | 9:16 PM

ಬೆಂಗಳೂರು, ಅ.16: ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮೂರನೇ ಆರೋಪಿ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ (Bengaluru) ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ. ಹಾಲಾಶ್ರೀಗೆ ಜಾಮೀನು ನೀಡದಂತೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು.

ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು.

ಇದನ್ನೂ ಓದಿ: ಚೈತ್ರಾ ವಂಚನೆ ಕೇಸ್​:ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಅಷ್ಟಲ್ಲದೆ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ಸೇರಿದಂತೆ ಕೆಲವರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ