ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚುರುಕುಗೊಂಡ ಸಿಸಿಬಿ ತನಿಖೆ, ಹಲವರಿಗೆ ನೋಟಿಸ್ ಜಾರಿ

ಚೈತ್ರಾ ಕುಂದಾಪುರ ಮತ್ತು ತಂಡ ಎಸಗಿದ ವಂಚನೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ತನಿಖೆ ಆರಂಭಿಸಿದ ತನಿಖಾಧಿಕಾರಿಗಳು ಮತ್ತಷ್ಟು ಮಂದಿಗೆ ನೋಟಿಸ್ ಜಾರಿ ಮಾಡಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚುರುಕುಗೊಂಡ ಸಿಸಿಬಿ ತನಿಖೆ, ಹಲವರಿಗೆ ನೋಟಿಸ್ ಜಾರಿ
ವಂಚನೆ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಹಾಲಶ್ರೀ ಆಪ್ತರಿಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ ಪೊಲೀಸರು
Follow us
Prajwal Kumar NY
| Updated By: Rakesh Nayak Manchi

Updated on: Sep 21, 2023 | 7:37 AM

ಬೆಂಗಳೂರು, ಸೆ.21: ಚೈತ್ರಾ ಕುಂದಾಪುರ (Chaitra Kundapur) ಮತ್ತು ತಂಡ ಎಸಗಿದ ವಂಚನೆ ಪ್ರಕರಣ ಸಂಬಂಧ ಸಿಸಿಬಿ (CCB) ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ತನಿಖೆ ಆರಂಭಿಸಿದ ತನಿಖಾಧಿಕಾರಿಗಳು ಮತ್ತಷ್ಟು ಮಂದಿಗೆ ನೋಟಿಸ್ ಜಾರಿ ಮಾಡಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಅವರನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಕೋರ್ಟ್ ನೀಡಿದೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ತನಿಖಾಧಿಕಾರಿಗಳು, ಸ್ವಾಮೀಜಿ ಕಡೆಯಿಂದ ಹಣ ಜಪ್ತಿ ಮಾಡುವ ಹಿನ್ನೆಲೆ ಕರೆದುಕೊಂಡು ಹೋಗಿದ್ದರು. ಇದರ ನಡುವೆ ಹಲವರಿಗೆ ನೋಟಿಸ್ ಕೂಡ ಜಾರಿ ಮಾಡಿದ್ದಾರೆ.

ಹಾಲಶ್ರೀ ಆಪ್ತರಾಗಿರುವ ತಿಪ್ಪೇಸ್ವಾಮಿ, ಲಕ್ಷ್ಮಣ ಮತ್ತು ಪ್ರಣವ್ ಪ್ರಸಾದ್​ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಚೈತ್ರಾ ಆಪ್ತನಾದ ಮಂಜು ಎಂಬಾತನಿಗೂ ನೋಟಿಸ್ ಜಾರಿ ಮಾಡಲಾಗಿದೆ. ಎಲ್ಲರಿಗೂ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಅಭಿನವ ಸ್ವಾಮಿಗೆ ಸೇರಿದ ರೂ. 60 ಲಕ್ಷ ನಗದನ್ನು ಹಾಲಶ್ರೀ ಮಠದಲ್ಲಿ ಇಟ್ಟುಹೋದ ಪ್ರಣವ್ ವರ್ತನೆ ಗೊಂದಲಮಯವಾಗಿದೆ!

ಚೈತ್ರಾ ಅಂಡ್ ಗ್ಯಾಂಗ್ ನಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಹಾಲಶ್ರೀ ಈಗ ಸಿಸಿಬಿ ಕಸ್ಟಡಿಗೆ ಸಿಕ್ಕಿದ್ದು, ಮತ್ತೊಂದೆಡೆ ವಿಚಾರಣೆಗೆ ಸ್ಪಂದಿಸಿದೇ ಆಸ್ಪತ್ರೆ ಸೇರಿದ್ದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಡಿಸ್ಚಾರ್ಜ್ ಆಗಿದೆ. ಹೀಗಾಗಿ ಪ್ರಕರಣದ ತನಿಖೆಯ ಅಸಲಿ ಆಟ ಈಗ ಶುರುವಾಗಲಿದೆ.

ಹಾಲಾಡಿ ಮಠದಲ್ಲಿ ಸ್ಥಳ ಮಹಜರು

ವಿಜಯನಗರ: ಅಭಿನವ ಹಾಲಶ್ರೀ ಅವರನ್ನು ಹೂವಿನಹಡಗಲಿ ತಾಲೂಕಿನ ಹಿರೆಗಡಗಲಿಯ ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು. ನಿನ್ನೆ ರಾತ್ರಿ ಎರಡು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಲಾಯಿತು. ಕುಟುಂಬಸ್ಥರನ್ನು ಹೊರಗಿಟ್ಟು ಹಾಲಶ್ರೀ ಸ್ವಾಮಿಜಿಯನ್ನೊಬ್ಬರನ್ನೆ ರೂಂನಲ್ಲಿ ಮಹಜರು ನಡೆಸಲಾಗಿದೆ. ನಂತರ ಸ್ವಾಮೀಜಿ ಜೊತೆ ಮಾತನಾಡಬೇಕು ಎಂದು ಸಿಸಿಬಿ ಪೊಲೀಸರಲ್ಲಿ ಕುಟುಂಬಸ್ಥರು ಮನವಿ ಮಾಡಿದ್ದರು. ಆದರೆ ಇಲ್ಲೇ ಮಾತನಾಡಿ ಅಂತಾ ಹೊರಗಡೆ ಮಾತಾಡಲು ಬಿಟ್ಟಿದ್ದಾರೆ. ಈ ವೇಳೆ ಕುಟುಂಬಸ್ಥರು ಏನೇ ಮಾತಾಡಿದರೂ ಶ್ರೀಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೆ, ಊಟ ಮಾಡಿ ಹೋಗಿ ಅಂತ ಕುಟುಂಬಸ್ಥರು ಮನವಿ ಮಾಡಿದರು. ನಾವು ಯಾರೂ ಊಡ ಮಾಡಲ್ಲ ನಮ್ಮದು ಊಟ ಆಗಿದೆ ಅಂತಾ ಹೇಳಿ ಹಾಲಶ್ರೀ ಅವರನ್ನ ಮಹಜರು ಮಾಡಿ ತನಿಖಾಧಿಕಾರಿಗಳು ಕರೆದುಕೊಂಡ ಹೋದರು.

ಹಾಲಶ್ರೀ ತಂದೆ ಸೇರಿದಂತೆ ಒಟ್ಟು ನಾಲ್ಕು ಜನ ಚಿಕ್ಕಪ್ಪಂದಿರು ಹಾಲಾಡಿಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯಷ್ಟೆ ತನ್ನ ಅಕ್ಕನ ಮಗಳನ್ನೇ ಹಾಲಶ್ರೀಯ ವಿವಾಹ ಆಗಿದ್ದರು. ಎರಡು ವರ್ಷದ ಹಿಂದೆ ಶ್ರೀಗಳ ತಾಯಿ ನಿಧನ ಹೊಂದಿದ್ದಾರೆ. ತಂದೆ ಹಾಗೂ ಪತ್ನಿಯ ಜೊತೆ ಮಠದಲ್ಲಿಯೇ ಪ್ರತ್ಯೇಕವಾಗಿ ಇರುತ್ತಿದ್ದರು. ನಿನ್ನೆ ತಂದೆ ಹಾಗೂ ಪತ್ನಿ ಮಾತನಾಡಲು ಮುಂದಾದರೂ ಪ್ರತಿಕ್ರಿಯೆ ನೀಡದೆ ಹಾಲಶ್ರೀ ತೆರಳಿದ್ದಾರೆ ಎಂದು ಹಾಲಾಡಿ ಮಠದ ನಿಖರ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ