ಚೈತ್ರಾ ಕುಂದಾಪುರ ವಂಚನೆ: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ: ಮಾಜಿ ಶಾಸಕ ಸಿಟಿ ರವಿ

ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹಣ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಯಾರೂ ಮಾಡಬಾರದು. ಒಂದು ವೇಳೆ‌ ಯತ್ನಿಸಿದರೆ ಮತ್ತೊಬ್ಬ ಗೋವಿಂದಬಾಬು ಪೂಜಾರಿ ಆಗುತ್ತೀರಿ. ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ: ಮಾಜಿ ಶಾಸಕ ಸಿಟಿ ರವಿ
ಸಿ.ಟಿ. ರವಿ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 15, 2023 | 5:11 PM

ನವದೆಹಲಿ, ಸೆಪ್ಟೆಂಬರ್​ 15: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ, ಇಲ್ಲಿ ಸಂದರ್ಭ ದುರ್ಬಳಕೆ ಆಗಿದೆ. ಮೋಸ ಹೋಗುವರು ಇರುವ ತನಕ ಮೋಸ ಮಾಡುವವರು ಇರುತ್ತಾರೆ. ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ (CT Ravi) ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹಣ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಯಾರೂ ಮಾಡಬಾರದು. ಒಂದು ವೇಳೆ‌ ಯತ್ನಿಸಿದರೆ ಮತ್ತೊಬ್ಬ ಗೋವಿಂದಬಾಬು ಪೂಜಾರಿ ಆಗುತ್ತೀರಿ ಎಂದು ಹೇಳಿದ್ದಾರೆ.

ಮೋಸ ಮಾಡಲೆಂದು ದೊಡ್ಡವರ ಹೆಸರು ಬಳಕೆ ಮಾಡಲಾಗುತ್ತಿದೆ. ಚುನಾವಣಾ ಸಮಿತಿಯಲ್ಲಿದ್ದವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ದೊಡ್ಡ ಪಕ್ಷವಾಗಿದೆ, ಎಲ್ಲಾ ರೀತಿಯ ಜನರು ಸಹ ಇದ್ದಾರೆ. ಕೆಲವರು‌ ಸಮಯದ ದುರ್ಬಳಕೆ ‌ಮಾಡಿಕೊಳ್ಳಲು ಪಕ್ಷಕ್ಕೆ ಬರುತ್ತಾರೆ ಎಂದರು.

ಬಿಜೆಪಿ ಹಿರಿಯ ನಾಯಕರು ಮೈತ್ರಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ

ಬಿಜೆಪಿ ಹಿರಿಯ ನಾಯಕರು ಮೈತ್ರಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ನಾನು ದೇವೇಗೌಡರು, ಯಡಿಯೂರಪ್ಪ ಹೇಳಿಕೆ‌ ಗಮನಿಸಿದ್ದೇನೆ. ನನ್ನಂತಹ ಕಾರ್ಯಕರ್ತ ಪಕ್ಷದ ನಿರ್ಧಾರವನ್ನು ಜಾರಿ ಮಾಡುತ್ತೇನೆ. ಸಾಧಕ ಬಾಧಕ ಕೇಳಿದರೆ ವರಿಷ್ಠರಿಗೆ ನಮ್ಮ ಅನುಭವ ತಿಳಿಸುತ್ತೇವೆ. ಈ ಹಿಂದೆ JDS, ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಏನಾಗುತ್ತದೆ ಎಂದು ಭವಿಷ್ಯ ಹೇಳುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಮೇಲೆ, ಕೆಳಗೆ ಆಗುವುದು ಸಾಮಾನ್ಯ

BBMP ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡಾಗ ಕೆಲವರು ಪಕ್ಷದಿಂದ ಹೋಗಬಹುದು. ರಾಜಕಾರಣದಲ್ಲಿ ಮೇಲೆ, ಕೆಳಗೆ ಆಗುವುದು ಸಾಮಾನ್ಯ. ಇದಕ್ಕಿಂತ ಕಷ್ಟ ಕಾಲದಲ್ಲೂ ಪಕ್ಷ ಕಟ್ಟಿದ್ದೇವೆ. ಎತ್ತಿನಗಾಡಿ ಮೇಲೆ ಹೆಚ್ಚು ಜನರು ಕೂತರೆ ಮುಂದೆ ಹೋಗಲ್ಲ. ಕಾಂಗ್ರೆಸ್ ತೊರೆದಿದ್ದನ್ನು ಡಿ.ಕೆ.ಶಿವಕುಮಾರ್​ ಸಹ ನೋಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿಗೆ ಸ್ಫೋಟಕ ತಿರುವು, ಇನ್ನೇನು ದೋಸ್ತಿ ಫೈನಲ್ ಎನ್ನುಷ್ಟರಲ್ಲೇ ಕತ್ರಿ ಬಿತ್ತೇ?

ಕಾಂಗ್ರೆಸ್​ನ ಹಾಲಿ ಶಾಸಕರು, ಸಚಿವರೇ ಬಿಜೆಪಿ ಸೇರಿದ್ದಾರೆ. ಈಗ ಮಾಜಿಗಳು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಹಾಲಿಗಳನ್ನು ಸೇರಿಸಿಕೊಂಡರೂ ನಾವು ಅಧಿಕಾರಕ್ಕೆ ಬರಲಿಲ್ಲ. ನೀವು ಮಾಜಿಗಳನ್ನು ಸೇರಿಸಿಕೊಂಡು ಅಧಿಕಾರಕ್ಕೆ ಬರ್ತೀರಾ ಎಂದು ಪ್ರಶ್ನಿಸಿದ್ದಾರೆ. ಈ ಸತ್ಯದ ಅರಿವು ಡಿ.ಕೆ.ಶಿವಕುಮಾರ್​ಗೆ ಇರಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ