ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್, ದೊಡ್ಡವರ ಹೆಸರು ಹೊರಬರುತ್ತಾ?

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆ ಸಿಕ್ಕಿದ್ದಿದ್ದಾನೆ. ಒಡಿಶಾ ಪೊಲೀಸರ ಸಹಾಯದಿಂದ ಸಿಸಿಬಿ ಪೊಲೀಸರು ಹಾಲಶ್ರೀಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. 

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್, ದೊಡ್ಡವರ ಹೆಸರು ಹೊರಬರುತ್ತಾ?
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Sep 19, 2023 | 11:48 AM

ಬೆಂಗಳೂರು, (ಸೆಪ್ಟೆಂಬರ್ 19): ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ (Abhinava Halashree) ಕೊನೆಗೆ ಸಿಕ್ಕಿದ್ದಿದ್ದಾನೆ. ಕಳೆದ ಚೈತ್ರಾ ಕುಂದಾಪುರ (Chaitra Kundapura)) ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸ್ತೀನಿ ಎಂದು ಚೈತ್ರಾ ಕುಂದಾಪುರ, ಗೋವಿಂದ್‌ ಬಾಬು ಎನ್ನುವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕರಣ; ವಂಚನೆಯ ಹಣದಿಂದ ಜಮೀನು ಖರೀದಿ, ಪೆಟ್ರೋಲ್​ ಬಂಕ್​ನಲ್ಲಿ ಹೂಡಿಕೆ ಮಾಡಿದ್ದ ಹಾಲಶ್ರೀ

ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ.

ದೂರುದಾರ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ರೂ. ಪಡೆದಿದ್ದ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಕಳೆದ ಕೆಲವು ತಿಂಗಳಲ್ಲಿ ಕೃಷಿ ಜಮೀನು ಖರೀದಿಸಿದ್ದರು. ಅಲ್ಲದೆ, ಪೆಟ್ರೋಲ್ ಬಂಕ್‌ನಲ್ಲಿ ಹೂಡಿಕೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ.

ಇನ್ನಷ್ಟು ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣದ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:16 am, Tue, 19 September 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್