ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು: ಸೂಲಿಬೆಲೆ

ಬಿಜೆಪಿ ಟಿಕೆಟ್ ಕೊಡಿಸುವಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ವಂಚಿಸಿತ್ತು. ಈ ಪ್ರಕರಣದಲ್ಲಿ ಪ್ರಭಾವಿಗಳ ಹೆಸರುಗಳು ಕೂಡ ಕೇಳಿಬರುತ್ತಿವೆ. ಅದರಂತೆ, ಯುವ ಬ್ರಿಗೇಡ್ ಸಂಘಟನೆ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಈ ಬಗ್ಗೆ ಸ್ವತಃ ಸೂಲಿಬೆಲೆ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು: ಸೂಲಿಬೆಲೆ
ಚಕ್ರವರ್ತಿ ಸೂಲಿಬೆಲೆ
Updated By: Rakesh Nayak Manchi

Updated on: Sep 18, 2023 | 5:29 PM

ಬೆಂಗಳೂರು, ಸೆ.18: ಹಣ ಪಡೆದು ವಂಚನೆ ಎಸಗಿದ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ನನ್ನ ಹೆಸರು ನೇರವಾಗಿ ಬಂದಿಲ್ಲ. ನನ್ನ ಬಳಿ ಈ ವಿಚಾರ ಪ್ರಸ್ತಾಪ ಮಾಡಿದ್ದೇನೆಂದು ವಜ್ರದೇಹಿಶ್ರೀ ಹೇಳಿದ್ದಾರೆ. ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೋ ಗೊತ್ತಿತ್ತು ಎಂದು ಯುವ ಬ್ರಿಗೇಡ್ ಸಂಘಟನೆ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarty Sulibele) ಹೇಳಿದ್ದಾರೆ.

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ದಿನಕ್ಕೊಂದು ಹೊಸಹೊಸ ವಿಚಾರಗಳು ಹೊರಬೀಳುತ್ತಿವೆ. ಅಭಿನವ ಹಾಲಶ್ರೀ ಹೆಸರಿನ ಬೆನ್ನಲ್ಲೇ, ವಜ್ರದೇಹಿ ಮಠದ ಸ್ವಾಮೀಜಿ ಹಾಗೂ ಚಕ್ರವರ್ತಿ ಸೂಲಿಬೆಲೆ ಹೆಸರು ಕೇಳಿಬಂದಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ವಿಷಯ ಸಿಟಿ ರವಿಗೆ ಮೊದಲೇ ಗೊತ್ತಿತ್ತಾ? ಸೂಲಿಬೆಲೆ ಜೊತೆ ನಡೆದಿತ್ತಾ ಮಾತುಕತೆ?

ಈ ಬಗ್ಗೆ ಬೆಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಸೂಲಿಬೆಲೆ, ಉದ್ಯಮಿ ಗೋವಿಂದಬಾಬು ಪೂಜಾರಿ ನನಗೆ ತುಂಬಾ ಆತ್ಮೀಯ ಸ್ನೇಹಿತರು. ಗೋವಿಂದಬಾಬು ಪೂಜಾರಿ ಮೋಸ ಹೋಗಿದ್ದಕ್ಕೆ ನನಗೆ ಬೇಸರವಿದೆ. ಈ ವಿಚಾರವನ್ನು ನಾನು ಈ ಹಿಂದೆಯೇ ಸಿ.ಟಿ.ರವಿ ಗಮನಕ್ಕೂ ತಂದಿದ್ದೆ. ಬಿಜೆಪಿಯಲ್ಲಿ ಈ ರೀತಿ ನಡೆಯಲ್ಲವೆಂದು ಜನರಿಗೆ ಗೊತ್ತಾಗಬೇಕು. ಗೊತ್ತಾಗೋದರಲ್ಲಿ ತಪ್ಪಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾಗಿ ತಿಳಿಸಿದರು.

ಚೈತ್ರಾ ಕುಂದಾಪುರ ಅವರನ್ನು ಸುಮಾರು 10 ವರ್ಷಗಳ ಹಿಂದೆ ನೋಡಿದ್ದೆ. ಹಣ ಪಡೆದು ವಂಚನೆ ಪ್ರಕರಣದಲ್ಲಿ ನನ್ನ ಹೆಸರು ಬಂದಿದ್ದಕ್ಕೆ ಬೇಸರವಿಲ್ಲ. ಸಿಸಿಬಿ ಕರೆದರೆ ವಿಚಾರಣೆಗೆ ಹೋಗುತ್ತೇನೆ, ಮಾಹಿತಿ ಕೇಳಿದರೆ ನೀಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Mon, 18 September 23